ಉಡುಪಿ: ಪ್ರವಾಸಿ ಬೋಟ್ ದುರಂತದ ಮೃತರ ಸಂಖ್ಯೆ ಮೂರಕ್ಕೇರಿಕೆ
ಉಡುಪಿ: ಪ್ರವಾಸಿ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ಯುವತಿ ನಿನ್ನೆ ಸಾವನ್ನಪ್ಪಿದ್ದಾರೆ. ಮೈಸೂರಿನ ದಿಶಾ(23) ಮೃತ ಯುವತಿ. ಮೊನ್ನೆ ಸಿಂಧು ಮತ್ತು ಶಂಕರಪ್ಪ ಎಂಬುವವರು ಮೃತಪಟ್ಟಿದ್ದರು. ಸದ್ಯ ಧರ್ಮರಾಜ್ ಎಂಬ ಯುವಕನಿಗೆ ಚಿಕಿತ್ಸೆ ಮುಂದುವರೆದಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ಮಲ್ಪೆ ವ್ಯಾಪ್ತಿಗೆ ಬರುವ ಕೋಡಿಬೆಂಗ್ರೆಯಲ್ಲಿರುವ ಡೆಲ್ಟಾ ಬೀಚ್ಗೆ ಮೋಜು ಮಾಡಬೇಕೆಂದು ಬಂದ ಮೈಸೂರಿನ ಬಿಪಿಒ ಕಾಲ್ ಸೆಂಟರ್ವೊಂದರ 28 ಮಂದಿ ಪ್ರವಾಸಿಗರ ತಂಡ, ಇದೀಗ ಕಣ್ಣೀರಿಡುತ್ತಾ ವಾಪಸಾಗುವಂತಾಗಿದೆ. ಇಲ್ಲಿನ ಡೆಲ್ಟಾ ಬೀಚ್ […]











