Tag: ಕೆನರಾಟಿವಿ

DAKSHINA KANNADA HOME LATEST NEWS

ನಾಳೆ ಚಂದ್ರಗ್ರಹಣ: ಧರ್ಮಸ್ಥಳದಲ್ಲಿ ಪೂಜಾ ಸಮಯ ಬದಲಾವಣೆ

ಧರ್ಮಸ್ಥಳ : ಮಾರ್ಚ್ 3ಕ್ಕೆ ಚಂದ್ರಗ್ರಹಣ ಸಂಭವಿಸುತ್ತಿದ್ದು, ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಪೂಜಾ ಸಮಯ ಬದಲಾವಣೆ ಆಗಿದೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳ ದೇವರ ದರ್ಶನ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಮಾರ್ಚ್ 3 ರಂದು ಮಧ್ಯಾಹ್ನ 1:30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ಅಂದರೆ ರಾತ್ರಿ 7:30ರಿಂದ ಪುನಃ ದೇವರ ದರ್ಶನವನ್ನು ಪ್ರಾರಂಭಿಸಲಾಗುವುದು ಎಂದು […]

DAKSHINA KANNADA HOME LATEST NEWS

ಇಸ್ರೇಲ್-ಇರಾನ್ ಸಂಘರ್ಷ: ಮಂಗಳೂರು ವಿಮಾನ ಹಾರಾಟದಲ್ಲಿ ವ್ಯತ್ಯಯ

ಮಂಗಳೂರು: ಇಸ್ರೇಲ್ ಇರಾನ್ ಸಂಘರ್ಷದ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ನಿಗದಿಯಾಗಿದ್ದ ಏರ್‌ ಇಂಡಿಯಾ, ಇಂಡಿಗೋ ವಿಮಾನಗಳ ಹಾರಾಟವನ್ನ ಹಠಾತ್‌ ರದ್ದುಗೊಳಿಸಲಾಗಿದೆ. ಪ್ರಮುಖವಾಗಿ ದುಬೈಗೆ ತೆರಳುವ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ವಿದೇಶಕ್ಕೆ ಪ್ರಯಾಣ ಮಾಡುವ ಪ್ರಯಾಣಿಕರು ಆಯಾ ವಿಮಾನ ಸಂಸ್ಥೆಗಳು ಖಚಿತಪಡಿಸಿದ ಬಳಿಕವಷ್ಟೇ ವಿಮಾನ ನಿಲ್ದಾಣಕ್ಕೆ ಆಗಮಿಸಿ ಎಂದು ವಿಮಾನ ನಿಲ್ದಾಣ ಪ್ರಾಧಿಕಾರಿಗಳು ಮನವಿ ಮಾಡಿವೆ. ಮಂಗಳೂರು ಏರ್‌ಪೋರ್ಟ್‌ನಿಂದ ರದ್ದಾದ ವಿಮಾನಗಳು 9.25 ರ ಮಂಗಳೂರು – ಮಸ್ಕತ್ ಏರ್ […]

HOME INETRNATIONAL LATEST NEWS

ಜೆರುಸಲೆಮ್ ನಗರದ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ

ಜೆರುಸಲೆಮ್: ಇರಾನ್‌ ನಿಂದ ಉಡಾಯಿಸಲಾದ ಕ್ಷಿಪಣಿಗಳು ಇಸ್ರೇಲ್‌ ಜೆರುಸಲೆಮ್ ನಗರದ ಮೇಲೆ ನೇರ ದಾಳಿ ನಡೆಸಿವೆ. ಇರಾನ್‌ನಿಂದ ಇಸ್ರೇಲ್ ಕಡೆಗೆ ಕ್ಷಿಪಣಿಗಳು ಹಾರಿಸಲ್ಪಟ್ಟಿರುವುದನ್ನು ಇಸ್ರೇಲ್ ಸೇನೆ ಪತ್ತೆಹಚ್ಚಿದ ಬಳಿಕ ಪಶ್ಚಿಮ ಜೆರುಸಲೆಮ್‌ ನಲ್ಲಿ ವಾಯುದಾಳಿ ಎಚ್ಚರಿಕಾ ಸೈರನ್‌ಗಳು ಮೊಳಗಿದವು. ಇದಾದ ನಂತರ ನಗರದಲ್ಲಿ ಜೋರಾಗಿ ಸರಣಿ ಸ್ಫೋಟಗಳ ಶಬ್ದ ಕೇಳಿಬಂದಿದೆ ಎಂದು ವರದಿಯಾಗಿದೆ. “ಸ್ವಲ್ಪ ಸಮಯದ ಹಿಂದೆ, ಇರಾನ್‌ ನಿಂದ ಇಸ್ರೇಲ್ ಕಡೆಗೆ ಉಡಾಯಿಸಲಾದ ಕ್ಷಿಪಣಿಗಳನ್ನು ನಾವು ಗುರುತಿಸಿದ್ದೇವೆ,” ಎಂದು ಇಸ್ರೇಲ್ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. “ಅಪಾಯವನ್ನು […]

COMMUNITY NEWS HOME

ಮಂಗಳೂರು ಧರ್ಮಪ್ರಾಂತ್ಯದ ಬೈಬಲ್ ಸಮ್ಮೇಳನಕ್ಕೆ ಚಾಲನೆ

ಮಂಗಳೂರು,ಫೆ. 27: ಮಂಗಳೂರು ಧರ್ಮಪ್ರಾಂತ್ಯದ ಕ್ಯಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಮತ್ತು ಮಂಗಳೂರು ಧರ್ಮಪ್ರಾಂತ್ಯದ ಬೈಬಲ್ ಆಯೋಗದ ಸಹಯೋಗದೊಂದಿಗೆ ಬೈಬಲ್ ಸಮ್ಮೇಳನಕ್ಕೆ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್‌ ಮೈದಾನದಲ್ಲಿ ಗುರುವಾರ ಚಾಲನೆ ನೀಡಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಹಿರಿಯ ಗುರು ಮೊನ್ಸಿಂಜೊರ್ ವಂ| ಮ್ಯಾಕ್ಸಿಮ್ ಎಲ್. ನೊರೊನ್ಹಾ ಅವರು ಧ್ವಜಾರೋಹನ ಮಾಡುವ ಮೂಲಕ ಚಾಲನೆ ನೀಡಿ ಬಲಿಪೂಜೆ ನೆರವೇರಿಸಿದರು. ಬಲಿಪೂಜೆಯಲ್ಲಿ “ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ನೆಲೆಸಿದೆ” ಎಂಬ ಕುರಿತು ಪ್ರವಚನ ನೀಡಿದ ಅವರು, ನಾವು ದೇವರ ಮುಂದೆ ಪ್ರಾರ್ಥನೆ ಮಾಡುವಾಗ […]

DAKSHINA KANNADA HOME LATEST NEWS

ಪೆರುವಾಯಿ ಕಾಲಾವಧಿ ಜಾತ್ರೋತ್ಸವ: ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಸಮೀಪದ ಬದಿಯಾರು ಶ್ರೀ ಮೂವರು ದೈವಂಗಳು ಪಂಜುರ್ಲಿ ಮತ್ತು ಪಿಲಿಚಾಮುಂಡಿ ದೈವಸ್ಥಾನದಲ್ಲಿ 2026ನೇ ಸಾಲಿನ ಕಾಲಾವಧಿ ಜಾತ್ರೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಬದಿಯಾರು ಕ್ಷೇತ್ರದಲ್ಲಿ ಫೆಬ್ರವರಿ 20, 2026ರ ಶುಕ್ರವಾರದಿಂದ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ಫೆಬ್ರವರಿ 22ರ ಆದಿತ್ಯವಾರದವರೆಗೆ ವಿಜೃಂಭಣೆಯಿಂದ ನಡೆದವು. ಮೂರು ದಿನಗಳ ಕಾಲ ನಡೆದ ಈ ಉತ್ಸವದಲ್ಲಿ ವಿವಿಧ ವೈದಿಕ ವಿಧಿವಿಧಾನಗಳು, ದೈವಗಳ ನೇಮೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಾದಿಗಳ ಸಮ್ಮುಖದಲ್ಲಿ ಸಂಪನ್ನಗೊಂಡವು. ಪೆರುವಾಯಿ ಮತ್ತು ಸುತ್ತಮುತ್ತಲಿನ ಗ್ರಾಮಗಳ […]

DAKSHINA KANNADA HOME LATEST NEWS

ಕರಾವಳಿಯಲ್ಲಿ ಸಂಜೆ-ರಾತ್ರಿ ವೇಳೆಗೆ ತುಂತುರು ಮಳೆಯಾಗಬಹುದು: ಹವಾಮಾನ ಮುನ್ಸೂಚನೆ

ಮಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಇಂದು ಹಗುರ ಮಳೆಯ ಮುನ್ಸೂಚನೆ ಇದೆ. ನಿನ್ನೆ ಸುಳ್ಯ-ಬೆಳ್ತಂಗಡಿ ಸೇರಿದಂತೆ ಕೆಲವು ಕಡೆ ಮಳೆಯಾಗಿತ್ತು. ಬೆಳ್ತಂಗಡಿಯಲ್ಲಿ ಒಂದು ಮನೆಗೆ ಹಾನಿಯಾಗಿತ್ತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂದು ಆಕಾಶ ಮೋಡದಿಂದ ಕೂಡಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಸುಮಾರು 33°C ರಿಂದ 34°C ವರೆಗೆ ಇರಲಿದ್ದು, ಮಧ್ಯಾಹ್ನ ಸೆಖೆಯ ಅನುಭವ ಹೆಚ್ಚಿರಲಿದೆ. ಸಮುದ್ರದ […]

DAKSHINA KANNADA HOME LATEST NEWS

ಕೇರಳದಿಂದ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ- ಪೆರುವಾಯಿಯಲ್ಲಿ 2 ಲಾರಿ ವಶಕ್ಕೆ

ವಿಟ್ಲ: ಕೇರಳದಿಂದ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಎರಡು ಲಾರಿಗಳನ್ನು ವಶಕ್ಕೆ ಪಡೆದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಂಧರ್ಭಿಕ ಚಿತ್ರ ಫೆ.25ರಂದು ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ ರಾಮಕೃಷ್ಣ ಅವರಿಗೆ ಕೇರಳ ಕಡೆಯಿಂದ ಪೆರುವಾಯಿ ಮಾರ್ಗವಾಗಿ ಲಾರಿಗಳಲ್ಲಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆಯುತ್ತದೆ. ಈ ವೇಳೆ ತಮ್ಮ ಸಿಬ್ಬಂದಿಯೊಂದಿಗೆ ಬಂಟ್ವಾಳ ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ […]

DAKSHINA KANNADA HOME LATEST NEWS

ರೈಲ್ವೆ ಹಳಿಯಲ್ಲಿ ಕುಳಿತಿದ್ದ ಅಪ್ರಾಪ್ತರ ಮೇಲೆ ನೈತಿಕ ಪೊಲೀಸ್‌ಗಿರಿ: ಇಬ್ಬರ ಬಂಧನ

ಮಂಗಳೂರು: ನೈತಿಕ ಪೊಲೀಸ್‌ಗಿರಿಯಲ್ಲಿ ಸೈಲೆಂಟ್‌ ಆಗಿದ್ದ ಮಂಗಳೂರಿನಲ್ಲಿ ಇದೀಗ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ರೈಲ್ವೆ ಹಳಿಯಲ್ಲಿ ಕುಳಿತಿದ್ದ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದ ಮೇಲೆ ತಂದೆ ಮತ್ತು ಮಗನನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂದು ಗುರುತಿಸಲಾಗಿದೆ. ಮಂಗಳೂರು ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕ ಮತ್ತು […]

DAKSHINA KANNADA HOME LATEST NEWS

ಅಂಬುಲೆನ್ಸ್‌ನಲ್ಲೇ ಹೆರಿಗೆಯಾದ ಬೆಳ್ತಂಗಡಿಯ ಬಾಣಂತಿ: ತಾಯಿ-ಮಗು ಸುರಕ್ಷಿತ

ಬೆಳ್ತಂಗಡಿ: ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಆಂಬುಲೆನ್ಸ್‌ನಲ್ಲಿ ಕರೆದೊಯ್ಯುವ ವೇಳೆ ಮಹಿಳೆಯೊಬ್ಬರಿಗೆ ಹೆರಿಗೆ ನೋವು ತೀವ್ರಗೊಂಡಿದ್ದು, ಶುಶ್ರೂಷಕಿಯರಿಬ್ಬರು ಸೇರಿ ಆಕೆಗೆ ದಾರಿ ಮಧ್ಯೆಯೇ ಆ ವಾಹನದಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಬಾಣಂತಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಸುದೆಮುಗೇರುವಿನ ಲೀಲಾವತಿ ಅವರು ಬೆಳ್ತಂಗಡಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಸೋಮವಾರ ಮುಂಜಾನೆ ಹೆರಿಗೆಗೆಂದು ಬಂದಿದ್ದರು. ಅವರಿಗೆ ಇದು ಎರಡನೇ ಹೆರಿಗೆಯಾಗಿದ್ದು, ಮೊದಲ ಹೆರಿಗೆಯಲ್ಲಿ ಸಿಜೇರಿಯನ್‌ ಮೂಲಕ ಮಗುವನ್ನು ಹೊರತೆಗೆಯಲಾಗಿತ್ತು. ಹಾಗಾಗಿ ಮಂಗಳೂರಿನ […]

DAKSHINA KANNADA HOME LATEST NEWS

ಮಹಾರಾಷ್ಟ್ರದಲ್ಲಿ ಅಪಘಾತ: ಮಂಗಳೂರಿನ ಯುವಕ ಸಾವು

ಮಂಗಳೂರು: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ಮುಡಿಪು ಸಮೀಪದ ಬೋಳಿಯಾರ್ ನಿವಾಸಿ ವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೋಳಿಯಾರ್ ನಿವಾಸಿ ಬಿಎಚ್ ಕರೀಂ ಎಂಬವರ ಪುತ್ರ ಮುಹಮ್ಮದ್ ರಿಝ್ವಾನ್ (28) ಮೃತರು ಎಂದು ಪೊಲೀಸರು ತಿಳಿಸಿದ್ದಾರೆ.ಕಳೆದ‌ ಹಲವಾರು ವರ್ಷಗಳಿಂದ ಕಂಪೆನಿಯೊಂದರ ಮೂಲಕ ಮೀನಿನ ಲಾರಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ರಿಝ್ವಾನ್ ಅವರು ಮಹಾರಾಷ್ಟ್ರಕ್ಕೆ ಮೀನಿನ ಲಾರಿ ಚಲಾಯಿಸುತ್ತಿದ್ದು, ಮಹಾರಾಷ್ಟ್ರದ ರತ್ನಗಿರಿ ಎಂಬಲ್ಲಿ ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಝ್ವಾನ್ ಮೃತಪಟ್ಟಿದ್ದಾರೆ. […]