Tag: ಕೆನರಾಟಿವಿ

DAKSHINA KANNADA LATEST NEWS

ಜಿಲ್ಲಾಧಿಕಾರಿಗೆ ತಾವೇ ಬೆಳೆದ ತರಕಾರಿ ನೀಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ತಾವು ತಮ್ಮ ಶಾಲೆಯ ಆವರಣದಲ್ಲಿ  ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು  ಶಾಲೆಯಲ್ಲಿ ಮಕ್ಕಳು  ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು. ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ […]

DAKSHINA KANNADA HOME LATEST NEWS

ಪುತ್ತೂರು ಜಾತ್ರೆ ಪ್ರಯುಕ್ತ-ಸಂಚಾರ ಮಾರ್ಗ ಬದಲಾವಣೆ

ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರದ ಆಗಮನದ ದಿನ ಮತ್ತು ಎಪ್ರಿಲ್ 17 ರಂದು ಬ್ರಹ್ಮರಥೋತ್ಸವ ನಡೆಯಲಿರುವುದರಿಂದ ಎಪ್ರಿಲ್ 16 ಮತ್ತು 17 ರಂದು ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ. ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ […]

DAKSHINA KANNADA HOME LATEST NEWS

ಕದ್ರಿ ಮಂಜುನಾಥೇಶ್ವರ ಆಡಳಿತ ಮಂಡಳಿಯ ನೂತನ ಸದಸ್ಯರಿಗೆ ಶಾಸಕ ಐವನ್ ಡಿ’ಸೋಜಾರಿಂದ ಸನ್ಮಾನ

ಮಂಗಳೂರು: ದೇವರ ಸೇವೆ ಮಾಡುವ ಅವಕಾಶ ಪಡೆದಿರುವ ಟ್ರಸ್ಟಿಗಳು ಸಮಾಜದ ಎಲ್ಲಾ ವರ್ಗಗಳ ಸೇವೆಗಳಿಗೆ ಬದ್ದರಾಗಿದ್ದು, ಸಾಮಾಜಿಕ ಸೇವೆ ಬದ್ಧತೆಯಿಂದ ಮಾಡುವುದರ ಮೂಲಕ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಶಕ್ತಿ ಬರಲಿ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರು ತಮ್ಮ ಮಹಾನಗರ ಪಾಲಿಕೆ ಕಛೇರಿಯಲ್ಲಿ ಕದ್ರಿ ಮಂಜುನಾಥೇಶ್ವರ ದೇವರ ಆಡಳಿತ ಮಂಡಳಿಗೆ ನೂತನವಾಗಿ ನೇಮಕಗೊಂಡ ಸದಸ್ಯರನ್ನು ಸನ್ಮಾನಿಸಿ ಶುಭ ಹಾರೈಸಿದರು. ಇದೇ ವೇಳೆ ಮಾತನಾಡಿದ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ದೇವರಾಜ್ ಕೆ. ದೇವರ […]

DAKSHINA KANNADA HOME LATEST NEWS

ಕರಾವಳಿಯಾದ್ಯಂತ ಕ್ರೈಸ್ತರಿಂದ ‘ಗರಿಗಳ ಭಾನುವಾರ’ ಆಚರಣೆ

ಮಂಗಳೂರು: ಇಂದು ಗರಿಗಳ ಭಾನುವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಭಾನುವಾರ ಆರಂಭಗೊಂಡಿದೆ. ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ‘ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿ ಕೊಂಡಿದ್ದರೆಂದು ಬೈಬಲ್ ಉಲ್ಲೇಖ. ಇದರ ಸಂಕೇತವಾಗಿ ಕರಾವಳಿಯ ಎಲ್ಲಾ ಚರ್ಚುಗಳಲ್ಲಿ ತೆಂಗಿನ ಗರಿಗಳನ್ನು ಹಿಡಿದು ಏ.13 (ಇಂದು) ಕ್ರೈಸ್ತರು ಭಾನುವಾರದ ಬಲಿ ಪೂಜೆಯಲ್ಲಿ ಪಾಲ್ಗೊಂಡರು. ಮಂಗಳೂರು ನಗರದ ಮಿಲಾಗ್ರಿಸ್‌ ಚರ್ಚ್‌ನಲ್ಲಿ ನಡೆದ ಮೆರವಣಿಗೆ ಯೇಸು ಕ್ರಿಸ್ತರು […]

DAKSHINA KANNADA HOME LATEST NEWS

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ಏ.29 ರಂದು ಬೃಹತ್‌ ಪ್ರತಿಭಟನೆ

ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ಮಂಗಳೂರು ಹೊರವಲಯದ ಅಡ್ಯಾರ್‌ ಕಣ್ಣೂರಿನಲ್ಲಿ ಎ.29ರಂದು ಬೃಹತ್‌ ಪ್ರತಿಭಟನೆ ನಡೆಯಲಿದೆ. ಅಂದು ಸಂಜೆ 3 ಗಂಟೆಗೆ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿ ಕೊಳ್ಳಲಾಗಿದೆ.ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್‌ರ ನೇತೃತ್ವದಲ್ಲಿ ಶನಿವಾರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈ ಪ್ರತಿಭಟನೆಯಲ್ಲಿ ದ.ಕ- ಉಡುಪಿ ಜಿಲ್ಲೆಯ ಲಕ್ಷಾಂತರ ಜನರ ಜೊತೆಗೆ […]

DAKSHINA KANNADA HOME LATEST NEWS

ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆ ಮೇಲೆ ಚಲಿಸಿದ ಕಾರು….!

ಮಂಗಳೂರು: ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆಯ ಮೇಲೆ ಕಾರೊಂದು ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಗರದ ಬಿಜೈ ಕಾಪಿಕಾಡ್‌ನಲ್ಲಿ ನಡೆದಿದೆ. ಘಟನೆ ವಿವರ ನಿಂಗಪ್ಪ ಎಂಬವರು ನಗರದ ಬಿಜೈ ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದು,  ಏ.9 ರಂದು ಅಪಾರ್ಟ್ ಮೆಂಟಿನ ಮುಖ್ಯಗೇಟಿನ ಬಲ ಬದಿಯಲ್ಲಿ ಕಸ ಹೆಕ್ಕುವ ಕೆಲಸ ಮಾಡುತ್ತಿದ್ದರು. ಈ ವೇಳೆ ಜೊತೆಯಲ್ಲಿ ತನ್ನ (1 ½) ವರ್ಷದ ಮಗು ಬೇಬಿ ಪ್ರಜ್ವಲ್ ಹರಿಜನ ಎಂಬವನು ಆಚೆ […]

DAKSHINA KANNADA HOME LATEST NEWS

ಈ ವಷ೯ದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನು ಸೇರಿಸಲಾಗುವುದು: DCM ಡಿಕೆಶಿ

ಮಂಗಳೂರು: ಈ ವಷ೯ದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನು ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಅವರು ಶನಿವಾರ ಮೂಳೂರು ಅಡ್ಡೂರು ಜೋಡುಕೆರೆ ಕಂಬಳ ಕಾಯ೯ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ಕಂಬಳವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಸಹಕಾರ ನೀಡಲಾಗುವುದು. ಬೆಂಗಳೂರಿನಲ್ಲಿಯೂ ಕಂಬಳ ನಡೆದಿದೆ. ಕಂಬಳ ಕ್ರೀಡೆಗೆ ಶಾಶ್ವತ ಪ್ರೋತ್ಸಾಹ ನೀಡಲು ಸರಕಾರ ನಿಧ೯ರಿಸಿದೆ ಎಂದು ಅವರು ಹೇಳಿದರು. ಕಂಬಳದ ಕೋಣಗಳನ್ನು ಸಾಕಿ, ಅದರೊಂದಿಗೆ ತೋರಿಸುವ ಪ್ರೀತಿ ಅನನ್ಯವಾದದ್ದು. ಜನಪದ ಸಂಸ್ಕೃತಿ ಉಳಿಸಲು ಸರಕಾರ ಸದಾ ನೆರವು ನೀಡಲಿದೆ ಎಂದು […]

DAKSHINA KANNADA HOME LATEST NEWS

ಮಂಗಳೂರು: ಶಿವಭಾಗ್‌ನಲ್ಲಿ ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ಗೆ ಭೂಮಿಪೂಜೆ

ಮಂಗಳೂರು: ರೋಹನ್ ಕಾರ್ಪೋರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ರೋಹನ್ ಗಾರ್ಡನ್ ಯೋಜನೆಗೆ ನಗರದ ಕದ್ರಿ ಶಿವಬಾಗ್ 2ನೇ ಕ್ರಾಸ್‌ನಲ್ಲಿ ಶನಿವಾರ ಭೂಮಿಪೂಜೆ ನಡೆಯಿತು. ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಚರ್ಚ್ ನ ಧರ್ಮಗುರುಗಳಾದ ಫಾದರ್ ವಾಲ್ಟರ್ ಡಿಸೋಜ ಭೂಮಿ ಪೂಜೆ ನೆರವೇರಿಸಿ, ದೇವರ ಮೇಲೆ ಅಚಲ ವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಮಹತ್ಸಾಧನೆ ಮಾಡಿ ಸಮಾಜ ಸೇವೆ ಮಾಡುವ ಕನಸಿಗೆ ರೋಹನ್ ಮೊಂತೇರೊ ನಿದರ್ಶನ. ಅವರ ಎಲ್ಲ ಕನಸುಗಳೂ ನನಸಾಗಲಿ ಎಂದು ಆಶೀರ್ವಚನ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ […]

COMMUNITY NEWS DAKSHINA KANNADA HOME LATEST NEWS

ಪೆಜಾರ್ ಸಂತ ಜೋಸಫ್‌ ಚರ್ಚ್‌ನಲ್ಲಿ ಏ.15ರಂದು 241 ನೇ “ಚಾರಿತ್ರಿಕ ಪವಿತ್ರ ಶಿಲುಬೆಯ ಹಾದಿ”

ಮಂಗಳೂರು: ಪ್ರಭು ಏಸುವಿನ ಜನನದ ಜುಬಿಲಿ ವರ್ಷದ ಪ್ರಯುಕ್ತ ಮಂಗಳೂರು ಕಥೋಲಿಕ ಧರ್ಮಪ್ರಾಂತ್ಯದ ಕಳವಾರು ಪೆಜಾರ್ ಸಂತ ಜೋಸಫರಿಗೆ ಸಮರ್ಪಿಸಿದ ಚರ್ಚಿನಲ್ಲಿ ಈ ಬಾರಿ 241 ನೇ ಚಾರಿತ್ರಿಕ ಪವಿತ್ರ ಶಿಲುಬೆಯ ಹಾದಿ ಏ.15 ರಂದು ನಡೆಯಲಿದೆ ಎಂದು ಚರ್ಚ್‌ನ ಧರ್ಮಗುರು ವಂ.ಲಾರೆನ್ಸ್‌ ರೊನಾಲ್ಡ್‌ ಡಿಸೋಜ ಅವರು ತಿಳಿಸಿದರು. ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ಮಾಹಿತಿ ನೀಡಿದ ಅವರು, 240 ವರ್ಷಗಳ ಹಿಂದೆ ಬೂದಿ ಬುಧವಾರ (ash wednesday) ದಂದು ಪ್ರಾರಂಭಗೊಂಡು ನಿರಂತರವಾಗಿ ನಡೆಯುತ್ತಾ ಬಂದ ಪವಿತ್ರ […]

DAKSHINA KANNADA HOME LATEST NEWS

ಯೂಟ್ಯೂಬರ್‌ ಎಂ.ಡಿ ಸಮೀರ್‌ ವಿರುದ್ಧ 10 ಕೋ. ರೂ. ಮಾನನಷ್ಟ ಮೊಕದ್ದಮೆ

ಬೆಂಗಳೂರು: ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರಕರಣ ಸಂಬಂಧ ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ತಡೆಯಾಜ್ಞೆ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678