ಜಾಗತಿಕ ಸವಾಲುಗಳ ನಡುವೆಯೂ ಭಾರತ ವಿಶ್ವದಲ್ಲೇ ಅತಿ ವೇಗದ ಆರ್ಥಿಕ ಬೆಳವಣಿಗೆ ಸಾಧಿಸಿದೆ: ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್
ಮಂಗಳೂರು, ಜೂನ್.13: ರಷ್ಯಾ-ಉಕ್ರೇನ್ ಸಂಘರ್ಷ, ಅಮೆರಿಕ-ಇರಾನ್ ಉದ್ವಿಗ್ನತೆ ಮತ್ತು ಜಾಗತಿಕ ಆರ್ಥಿಕ ಹಿಂಜರಿತದಂತಹ ಸವಾಲುಗಳ ನಡುವೆಯೂ ಭಾರತವು ಶೇಕಡಾ 7.7 ರಷ್ಟು ಜಿಡಿಪಿ ಬೆಳವಣಿಗೆಯ ದರವನ್ನು ಸಾಧಿಸುವ ಮೂಲಕ ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸಂಸದರಾದ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ತಿಳಿಸಿದ್ದಾರೆ. ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ದೀರ್ಘ ಅಧಿಕಾರಾವಧಿ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳೂರಿನ ಪಾಲೇಮಾರ್ ಗಾರ್ಡನ್‌ನಲ್ಲಿ […]











