Tag: ಕೆನರಾಟಿವಿ

LATEST NEWS

ಬಡವರ ನೋವಿಗೆ ಸ್ಪಂದಿಸಿದ ಪುತ್ತೂರು ಶಾಸಕ ಅಶೋಕ್ ರೈ: ವೃದ್ಧೆಯ ಕಣ್ಣೀರು ಒರೆಸಿದ ಜನನಾಯಕ

ಪುತ್ತೂರು, ಜೂನ್ 08 : ಅಧಿಕಾರ ಎನ್ನುವುದು ಕೇವಲ ಕಚೇರಿಯ ಎಸಿ ರೂಮಿನಲ್ಲಿ ಕುಳಿತು ಆದೇಶ ಮಾಡುವುದಲ್ಲ, ಅದು ಜನರ ನಡುವೆ ಹೋಗಿ ಅವರ ಕಷ್ಟ ಸುಖಗಳಿಗೆ ಭಾಗಿಯಾಗುವುದು ಎಂಬುದನ್ನು ಪುತ್ತೂರು ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ಅವರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಬಲ್ನಾಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಶಾಸಕರ ಬಡವರ ಪರ ಕಾಳಜಿಗೆ ಸಾಕ್ಷಿಯಾಗಿದೆ. ಮೇಲಿನ ಚಿತ್ರವನ್ನು ನೋಡಿ, ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ರೈ ಅವರು ವೃದ್ದ ತಾಯಿಯೋರ್ವರಿಗೆ ಎರಡು ಕೈಗಳನ್ನು ಜೋಡಿಸಿ ಕೈ […]

LATEST NEWS

ಕಲಾಂಗಣದಲ್ಲಿ ಹಾಸ್ಯರಸ ಉಕ್ಕಿಸಿದ ‘ಉಪ್ರಾಂತ್‌ಚ್‌ ಕಳ್ಚೆಂ’ ನಾಟಕ

ಮಂಗಳೂರು: ಪ್ರಸಿದ್ಧ ಕೊಂಕಣಿ ಸಾಂಸ್ಕೃತಿಕ ಸಂಘಟನೆ ‘ಮಾಂಡ್‌ ಸೊಭಾಣ್‌’ ಇದರ ತಿಂಗಳ ಸರಣಿಯ 294 ನೇ ಕಾರ್ಯಕ್ರಮವು ಜೂನ್ 07 ರಂದು ಶಕ್ತಿನಗರದ ಕಲಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಸಂಗೀತ ಉಪಕರಣಗಳ ಮಾರಾಟ ಮಳಿಗೆ ‘ಸಿಂಫನಿ’ ಇದರ ಮಾಲಕರಾದ ಲೊಯ್‌ ನೊರೊನ್ಹಾ ಇವರು ಸಾಂಪ್ರದಾಯಿಕವಾಗಿ ಗಂಟೆ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಮಾಂಡ್ ಸೊಭಾಣ್ ಅಧ್ಯಕ್ಷರಾದ ಲುವಿ ಪಿಂಟೊ ಮತ್ತು ಕಾರ್ಯದರ್ಶಿ ರೊನಿ ಕ್ರಾಸ್ತಾ ಉಪಸ್ಥಿತರಿದ್ದರು. ಉದ್ಘಾಟನೆಯ ನಂತರ ಪ್ರಸಿದ್ಧ ‘ಕೊಮಿಡಿ ಕಂಪೆನಿ’ ನಾಟಕ […]

LATEST NEWS

ಕಡಬ ಪತ್ರಕರ್ತರ ಸಮಾಜ ಸೇವೆ ಮಾದರಿ: ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಮನ್ನಾ ಜಬಿನ್ ಶ್ಲಾಘನೆ

ಕಡಬ: ಜೂನ್,08 : ಪತ್ರಕರ್ತರು ತಮ್ಮ ದಿನನಿತ್ಯದ ಕರ್ತವ್ಯದ ಜೊತೆಗೆ ಸಮಾಜದ ಜನರ ಅನುಕೂಲಕ್ಕಾಗಿ ಇಂತಹ ಶಿಬಿರಗಳನ್ನು ಆಯೋಜಿಸುತ್ತಿರುವುದು ಹೆಮ್ಮೆಯ ವಿಷಯ. ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ಶ್ರವಣ ಯಂತ್ರಕ್ಕೆ ಸಹಾಯಧನ ನೀಡುವ ಮೂಲಕ ಕಡಬದ ಪತ್ರಕರ್ತರ ಸಂಘ ಮಾದರಿ ಕೆಲಸ ಮಾಡುತ್ತಿದೆ ಎಂದು ಕಡಬ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಮನ್ನಾ ಜಬಿನ್ ಹೇಳಿದರು. ಅವರು ಸೋಮವಾರ ಕಡಬ ಪ್ರೆಸ್ ಕ್ಲಬ್ ಕಚೇರಿಯಲ್ಲಿ ಕಡಬ ತಾಲೂಕು ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ […]

LATEST NEWS

ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ ಹಾನಿಯಾದರೆ ಇಂಜಿನಿಯರ್ ಗಳೇ ಹೊಣೆ ಸಚಿವ ಖಾದರ್ ಎಚ್ಚರಿಕೆ

ಮಂಗಳೂರು: ಜೂನ್, 08: ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಗಳು ರಸ್ತೆಯಲ್ಲಿ ನೀರು ನಿಲ್ಲುವ ಪ್ರಕರಣಗಳನ್ನು ಸಮನ್ವಯದಿಂದ ನಿರ್ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ವ್ಯಾಪ್ತಿ ಮೀರಿ ಕ್ರಮ ಕೈಗೊಳ್ಳಬೇಕು ಎಂದರು. […]

LATEST NEWS

ವಿಟ್ಲ ರಸ್ತೆ ಕಾಮಗಾರಿ- ಸಂಚಾರ ಮಾರ್ಗ ಬದಲಾವಣೆ

ವಿಟ್ಲ ,ಜೂನ್ 08 : ಪುತ್ತೂರು ವಿಧಾನಸಭಾ ಕ್ಷೇತ್ರದ ಕಡೂರು-ಕಾಂಞಂಗಾಡ್ ರಾಜ್ಯ ಹೆದ್ದಾರಿಯ ವಿಟ್ಲ ಬೊಬ್ಬೆಕೇರಿ ಎಂಬಲ್ಲಿ ರಸ್ತೆ ಪುನರ್ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಜೂನ್ 5 ರಿಂದ ಮುಂದಿನ 3 ತಿಂಗಳವರೆಗೆ ಅನ್ವಯವಾಗುವಂತೆ ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಮತ್ತು ಚಾಲಕರು ಕೆಳಗಿನ ಪರ್ಯಾಯ ಮಾರ್ಗಗಳನ್ನು ಬಳಸಲು ಕೋರಲಾಗಿದೆ: ವಿಟ್ಲದಿಂದ ಕಲ್ಲಡ್ಕ ಕಡೆಗೆ ಹೋಗುವ ವಾಹನಗಳು: […]

COMMUNITY NEWS

ಪೆರುವಾಯಿ ಚರ್ಚ್‌ನಲ್ಲಿ ಕ್ರೈಸ್ತ ಶಿಕ್ಷಣ ವರ್ಷದ ಪ್ರಾರಂಭೋತ್ಸವ ಹಾಗೂ ಸಾಧಕರಿಗೆ ಸನ್ಮಾನ

ವಿಟ್ಲ ,ಜೂನ್ 07: ಮಂಗಳೂರು ಕ್ಯಾಥೋಲಿಕ್ ಧರ್ಮಕ್ಷೇತ್ರದ ಪೆರುವಾಯಿ ಮುಚ್ಚಿರಪದವಿನಲ್ಲಿರುವ ಫಾತಿಮಾ ಮಾತೆಯ ದೇವಾಲಯದಲ್ಲಿ 2026-27ನೇ ಸಾಲಿನ ಕ್ರೈಸ್ತ ಶಿಕ್ಷಣ ವರ್ಷದ ಪ್ರಾರಂಭೋತ್ಸವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಜೂನ್ 07ರ ಭಾನುವಾರದಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಶೈಕ್ಷಣಿಕ ವರ್ಷವನ್ನು ” ಆಮ್ಚಿಂ ಭುರ್ಗಿಂಬಾಳಾಂ, ದೆವಾಚ್ಯಾ ರಾಜಾಚಿಂ ಫಳಾಂ” ( ನಮ್ಮ ಮಕ್ಕಳು, ದೇವರ ರಾಜ್ಯದ ಫಲಗಳು) ಎಂಬ ಅರ್ಥಪೂರ್ಣ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಚರ್ಚ್‌ನ ಧರ್ಮಗುರುಗಳು, ಕ್ರೈಸ್ತ ಶಿಕ್ಷಣದ ಮಕ್ಕಳು, ಶಿಕ್ಷಕರು, ಪೋಷಕರು […]

COMMUNITY NEWS

ಮಂಗಳೂರು ಧರ್ಮಕ್ಷೇತ್ರ ಚರ್ಚ್‌ಗಳಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ವರ್ಷ ಉದ್ಘಾಟನೆ

ಮಂಗಳೂರು, ಜೂನ್ 07 : ಮಂಗಳೂರು ಧರ್ಮಕ್ಷೇತ್ರ ವ್ಯಾಪ್ತಿಗೆ ಒಳಪಡುವ ಎಲ್ಲಾ ಚರ್ಚ್ ಹಮ್ಮಿಕೊಳ್ಳಲಾಗಿರುವ 2026-27ನೇ ಸಾಲಿನ ‘ಕ್ರೈಸ್ತ ಧಾರ್ಮಿಕ ಶಿಕ್ಷಣ’ (Catechism) ವರ್ಷಕ್ಕೆ ಭಾನುವಾರ ಚಾಲನೆ ನೀಡಲಾಯಿತು ನಗರದ ಪ್ರಸಿದ್ಧ ರೊಸಾರಿಯೋ ಕೆಥೆಡ್ರಲ್‌ನಲ್ಲಿ ನಡೆದ ವಿಶೇಷ ಪ್ರಾರ್ಥನಾ ವಿಧಿಯೊಂದಿಗೆ ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪೌಲ್ ಸಲ್ದಾನ್ಹ ಅವರು ದೀಪ ಬೆಳಗಿಸಿ ಈ ಹೊಸ ಸಾಲಿನ ಧಾರ್ಮಿಕ ಶಿಕ್ಷಣವನ್ನು ಅಧಿಕೃತವಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಷಪ್ ಅವರು ಧಾರ್ಮಿಕ ಶಿಕ್ಷಣದ ಮಹತ್ವದ […]

COMMUNITY NEWS

ಮೈಸೂರು ಡೋರ್ನಹಳ್ಳಿಯ ಸಂತ ಅಂತೋನಿಯವರ ಪುಣ್ಯಕ್ಷೇತ್ರದಲ್ಲಿ ಮೂರನೇ ದಿನದ ನೊವೆನಾ ಭಕ್ತಿ ಸೇವೆ

ಮೈಸೂರು: ಡೋರ್ನಹಳ್ಳಿಯ ಸಂತ ಅಂತೋನಿಯವರ ವಾರ್ಷಿಕ ಮಹೋತ್ಸವದ ಅಂಗವಾಗಿ ಮೂರನೇ ದಿನದ ನೊವೆನಾ ಪ್ರಾರ್ಥನಾ ಕಾರ್ಯಕ್ರಮವು ಶನಿವಾರ (ಜೂನ್ 6) ಡೋರ್ನಹಳ್ಳಿಯ ಸಂತ ಅಂತೋನಿಯವರ ಬೆಸಿಲಿಕಾದಲ್ಲಿ ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು. ಮೈಸೂರಿನ ಬೋಗಾದಿಯ ‘ಧ್ಯಾನ ಸಾಧನ’ ಸಂಸ್ಥೆಯ ವಂದನೀಯ ಫಾದರ್ ಆರ್ಚಿಬಾಲ್ಡ್ ಗೊನ್ಸಾಲ್ವಿಸ್ (OCD) ಅವರು ಪವಿತ್ರ ಬಲಿಪೂಜೆಯ ಮುಖ್ಯ ಕಾರ್ಮಿಕರಾಗಿ ಭಾಗವಹಿಸಿದ್ದರು. ಡೋರ್ನಹಳ್ಳಿ ಬೆಸಿಲಿಕಾದ ರೆಕ್ಟರ್ ವಂದನೀಯ ಫಾದರ್ ಡೇವಿಡ್ ಸಗಾಯರಾಜ್ ಮತ್ತು ಆಡಳಿತಾಧಿಕಾರಿ ವಂದನೀಯ ಫಾದರ್ ಪ್ರವೀಣ್ ಪೆದ್ರು ಅವರು ಬಲಿಪೂಜೆಯಲ್ಲಿ ಜೊತೆಯಾಗಿದ್ದರು. ಈ […]

HOME

ಮಕ್ಕಳ ಹೆಸರಲ್ಲಿ ಸಸಿ ನೆಟ್ಟು ಪೋಷಿಸಿ: ಪಿಯೂಸ್ ಎಲ್. ರೋಡ್ರಿಗಸ್

ಬಂಟ್ವಾಳ: ಜೂನ್ 06 :”ನಾವು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ವರ್ಷದ 365 ದಿನಗಳನ್ನೂ ಪರಿಸರ ದಿನಗಳನ್ನಾಗಿ ಆಚರಿಸಬೇಕು. ಹೆತ್ತವರು ತಮ್ಮ ಮಕ್ಕಳ ಹೆಸರಿನಲ್ಲಿ ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸಬೇಕು” ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಹಾಗೂ ಬುಡಾ ಮಾಜಿ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ ಹೇಳಿದರು. ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಪರಿಸರ ಕುರಿತ ಭಾಷಣ […]

LATEST NEWS

ದ ಕ ಜಿಲ್ಲಾ ಬಿಜೆಪಿ ವತಿಯಿಂದ ‘ಜನ ಕಲ್ಯಾಣದ 12 ವರ್ಷಗಳು’ ಅಭಿಯಾನ: ಶಕ್ತಿನಗರದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ “ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು” ಅಭಿಯಾನದ ಅಂಗವಾಗಿ ಮಂಗಳೂರಿನ ಶಕ್ತಿನಗರದ ನಾಲ್ಯಪದವು ಸರ್ಕಾರಿ ಶಾಲಾ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಮಹಿಳಾ ಮೋರ್ಚಾದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಈ ಪರಿಸರ ಸ್ನೇಹಿ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ಅವರು ಗಿಡ ನೆಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಅಭಿವೃದ್ಧಿ […]