Tag: ಕೆನರಾಟಿವಿ

HOME LATEST NEWS NATIONAL

ಆಫೀಸ್‌ ಕೆಲ್ಸ ಮುಗಿದ ಮೇಲೆ ಫೋನ್‌ ಕಾಲ್-ಮೇಲ್ ಮಾಡೋ ಹಾಗಿಲ್ಲ: ಹೊಸ ಮಸೂದೆ

ನವದೆಹಲಿ: ಇತ್ತೀಚೆಗೆ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಮಸೂದೆಗಳನ್ನು ಜಾರಿ ಮಾಡುವ ಮೂಲಕ  ಕಾರ್ಮಿಕರಿಗೆ ಶುಭ ಸುದ್ದಿ ನೀಡಿತ್ತು. ಇದೀಗ ಇಂದು ಲೋಕಸಭೆಯಲ್ಲಿ ಮತ್ತೊಂದು ಮಹತ್ವದ ಮಸೂದೆ ಪ್ರಸ್ತಾಪವಾಗಿದ್ದು, ಕಚೇರಿ ಸಮಯ ಮುಗಿದ ನಂತರ ಫೋನ್ ಕರೆಗಳು, ಇಮೇಲ್‌ಗಳು ಮತ್ತು ವರ್ಕ್ ಮೆಸೇಜ್‌ಗಳಿಂದ ಮುಕ್ತಿ ನೀಡುವ ಉದ್ದೇಶದಿಂದ ರೈಟ್ ಟು ಡಿಸ್‌ಕನೆಕ್ಟ್ ಬಿಲ್ 2025 (Right to Disconnect Bill2025) ಅನ್ನು ಪರಿಚಯಿಸಲಾಗಿದೆ. ಈ ಬಿಲ್ ಉದ್ಯೋಗಿಗಳ ಮಾನಸಿಕ ಆರೋಗ್ಯ ಮತ್ತು ವೈಯಕ್ತಿಕ ಸಮಯವನ್ನು ರಕ್ಷಿಸುವ ಮಹತ್ವದ […]

COMMUNITY NEWS DAKSHINA KANNADA LATEST NEWS

ಐವನ್ ಡಿಸೋಜ ಅಧ್ಯಕ್ಷತೆಯಲ್ಲಿ ಸರ್ವಧರ್ಮ ಕ್ರಿಸ್ಮಸ್‌ ಆಚರಣೆಯ ಪೂರ್ವಭಾವಿ ಸಭೆ

ಮಂಗಳೂರು: ಸರ್ವಧರ್ಮಗಳ ಭಾವೈಕ್ಯದ ಸಂಗಮವಾದ ಕ್ರಿಸ್ಮಸ್ ಆಚರಣೆ ಬಗ್ಗೆ ಪೂರ್ವಬಾವಿ ಸಭೆಯು ಐವನ್ ಡಿಸೋಜ ಅಧ್ಯಕ್ಷತೆಯಲ್ಲಿ ಇತ್ತಿಚೆಗೆ ನಡೆಯಿತು. ಕಳೆದ 10 ವರ್ಷಗಳಿಂದ ಕ್ರಿಸ್ಮಸ್, ದೀಪಾವಳಿ, ರಮಝಾನ್ ಹಬ್ಬಗಳನ್ನು ಅಚರಿಸುತ್ತಾ ಬರಲಾಗಿದೆ. ಸಮಾಜದ ಎಲ್ಲಾ ವರ್ಗಗಳ ಜನರಿಂದ ಪ್ರಶಂಸೆ ವ್ಯಕ್ತವಾಗಿದೆ. ಈ ಬಾರಿ ಕ್ರಿಸ್ಮಸ್ ಹಬ್ಬವು ಡಿ.22ರಂದು ಅಪರಾಹ್ನ 3ರಿಂದ 10ರವರೆಗೆ ಜೆಪ್ಪುಸೈಂಟ್ ಅಂತೋನಿ ಆಶ್ರಮ ತೆರೆದ ಮೈದಾನದಲ್ಲಿ ನಡೆಯಲಿದೆ. ಈ ಹಬ್ಬದ ಪ್ರಯುಕ್ತ ಕ್ಯಾರಲ್ ಹಾಡುಗಳ ಸ್ಪರ್ಧೆ ಮತ್ತು ಕ್ರಿಸ್ಮಸ್ ಗೆ ಸಂಬಂಧಪಟ್ಟ ವಿವಿಧ ವಿನೋದಾವಳಿಗಳು […]

DAKSHINA KANNADA HOME LATEST NEWS

ಮಂಗಳೂರು ಮೂಲದ ರೌಡಿ ಶೀಟರ್‌ಗಳಿಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ

ಕಾರವಾರ:  ಮಂಗಳೂರು ಮೂಲದ ವಿಚಾರಣಾಧೀನ ರೌಡಿ ಶೀಟರ್‌ಗಳಿಬ್ಬರು ಕಾರವಾರ ಕಾರಾಗೃಹದಲ್ಲಿ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮಂಗಳೂರು ಮೂಲದ ರೌಡಿ ಶೀಟರ್‌ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳು. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇವರನ್ನು, ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾದ ಕಾರಣ ಕಾರವಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಮಾದಕ ವಸ್ತು ಒದಗಿಸುವಂತೆ ಗಲಾಟೆ ಮಾಡಿದ ಕೈದಿಗಳು ಪರಸ್ಪರ […]

DAKSHINA KANNADA HOME LATEST NEWS

ಸುಳ್ಯ : ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಸುಳ್ಯ : ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಪೂಜಾ ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ […]

HOME

MCC ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

ಮಂಗಳೂರು: ಎಂ.ಸಿ.ಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯು ಡಿ.೪ ರಂದು ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆಗೊಂಡಿತು. ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ ಮತ್ತು ವಿಷನ್ ಕೊಂಕಣಿಯ ಪ್ರವರ್ತಕ ಮೈಕಲ್ ಡಿಸೋಜಾ ಉದ್ಘಾಟಿಸಿದರು. ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು. ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಜೆಪ್ಪುವಿನ ಸೇಂಟ್ ಆ್ಯಂಟನಿ ಆಶ್ರಮದ ನಿರ್ದೇಶಕ ವಂದನೀಯ […]

HOME NATIONAL

SDPI ಹೆಸರಿನಲ್ಲಿ ನಿಷೇಧಿತ PFIನ ಹಿಂಬಾಗಿಲ ರಾಜಕೀಯ ಪ್ರವೇಶ: ಸಂಸತ್ತಿನಲ್ಲಿ ಕ್ಯಾ. ಚೌಟ

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಎಸ್‌ಡಿಪಿಐಯು ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ. […]

COMMUNITY NEWS DAKSHINA KANNADA HOME LATEST NEWS

ಕರಾವಳಿಯಾದ್ಯಂತ ಕ್ರೈಸ್ತರ ಮೋಂತಿ ಹಬ್ಬದ ಸಂಭ್ರಮ

ಮಂಗಳೂರು: ಕರಾವಳಿಯಾದ್ಯಂತ ಕಥೋಲಿಕ ಕ್ರೈಸ್ತರು ಮೋಂತಿ (ಮೇರಿ ಮಾತೆ) ಹಬ್ಬವನ್ನು ಸಡಗರದಿಂದ ಆಚರಿಸಿದರು. ತೆನೆ ಹಬ್ಬವೆಂದು ಕರೆಯುವ ಈ ಹಬ್ಬದ ದಿನವಾದ ಇಂದು ಹೊಸ ತೆನೆಯ ಆರ್ಶಿವಾದ, ವಿಶೇಷ ಬಲಿಪೂಜೆ ನಡೆಯಿತು. ಈ ಹಬ್ಬಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೇನಾ ನಡೆಯಿತು. ಮಕ್ಕಳು 9 ದಿನಗಳ ಕಾಲ ತಮ್ಮ ಹಿತ್ತಲಲ್ಲಿ ಸಿಕ್ಕ ಹೂಗಳನ್ನು ಚರ್ಚಿಗೆ ತಂದು ಮೇರಿ ಮಾತೆಗೆ ಅರ್ಪಿಸುತ್ತಾರೆ. ಈ ವೇಳೆ ಮಕ್ಕಳಿಗೆ ಸಿಹಿತಿನಿಸುಗಳನ್ನು ಹಂಚುತ್ತಾರೆ.ಕೊನೆಯ ದಿನವಾದ ಇಂದು ಎಲ್ಲರ ಮನೆಗಳಲ್ಲಿ ಕುಟುಂಬ ಸಮೇತ ಸಸ್ಯಹಾರಿ […]

DAKSHINA KANNADA HOME

ದ.ಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮತಗಳ್ಳತನ ವಿರುದ್ಧ ಪಂಜಿನ ಮೆರವಣಿಗೆ

ಮಂಗಳೂರು: ಮತಗಳ್ಳತನ‌ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ಪ್ರತಿಭಟನಾ ಸಭೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ವೇತೃತ್ವದಲ್ಲಿ ನಡೆಯಿತು. ಮಂಗಳೂರಿನ ನವಭಾರತ್ ಸರ್ಕಲ್ ನಿಂದ ಲಾಲ್‌ಭಾಗ್ ವರೆಗೆ ನಡೆದ ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಮತಗಳ್ಳತನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಸಚಿವ […]

DAKSHINA KANNADA HOME LATEST NEWS

ಮಂಗಳೂರು:  ಆ. 31ರಂದು ಕಲ್ಲಚ್ಚು ಪ್ರಶಸ್ತಿ ಪ್ರದಾನ

ಮಂಗಳೂರು:  ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಬೆಳ್ಳಿ ಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ” ಕಲ್ಲಚ್ಚು ಪ್ರಕಾಶನದ” 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಅಗಸ್ಟ್ 31 ಭಾನುವಾರ ಸಂಜೆ 4.00 ಗಂಟೆಗೆ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಲಿದೆ. ಈಗಾಗಲೇ ಕರ್ನಾಟಕದ ಪಂಚ ಸಾಧಕರಾದ ಡಾ. ಎಸ್ ಎಮ್ ಶಿವಪ್ರಕಾಶ್, ಜಬೀವುಲ್ಲಾ ಎಂ […]

DAKSHINA KANNADA HOME

ರಿಕ್ಷಾ ಚಾಲಕರ ಜೊತೆ ಸಮಾಲೋಚಿಸದೆ ಸಿಟಿ ಬಸ್ ಗೆ ಚಾಲನೆ ಬೇಡ: ಅಶೋಕ್ ರೈ

ಪುತ್ತೂರು: ಪುತ್ತೂರು ನಗರದ ರಿಕ್ಷಾ ಚಾಲಕ ಮಾಲಕರ ಎಲ್ಲಾ ಸಂಘದವರ ಜೊತೆ ಸಮಾಲೋಚನೆ ಮಾಡಿ, ಅವರನ್ನು ಕರೆಸಿ ಮಾತುಕತೆ ನಡೆಸಿದ ಬಳಿಕವೇ ಪುತ್ತೂರು ನಗರದಲ್ಲಿ ಸಿಟಿ ಬಸ್ ಗೆ ಚಾಲನೆ ನೀಡಬೇಕು ಎಂದು ಶಾಸಕರಾದ ಅಶೋಕ್ ರೈ ಅವರು ಕರ್ನಾಟಕ ಸಾರಿಗೆ ನಿಗಮದ ಡಿ ಸಿ ಅಮಲಿಂಗಯ್ಯ ಹೊಸಪೂಜಾರಿಯವರಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಶಾಸಕರ ಕಚೇರಿಯಲ್ಲಿ ಅಧಿಕಾರಿ ಜೊತೆ ಚರ್ಚೆ ನಡೆಸಿದ ಶಾಸಕರು ಪುತ್ತೂರು ಕೆಎಸ್ ಆರ್ ಟಿಸಿ ವಿಭಾಗದಲ್ಲಿ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಚರ್ಚೆ […]