Tag: ಕೆನರಾಟಿವಿ

DAKSHINA KANNADA HOME LATEST NEWS

ಫೇಸ್ಬುಕ್ ನಲ್ಲಿ ಕೋಮುಸೌಹಾರ್ದತೆಗೆ ಧಕ್ಕೆ: FIR ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ  ಬೆಳ್ತಂಗಡಿ ಠಾಣೆಯಲ್ಲಿ ಓರ್ವನ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಉಜಿರೆಯ ನಿವಾಸಿಯೋರ್ವರು ನೀಡಿದ ದೂರಿನಂತೆ, ಸದ್ರಿಯವರು ತನ್ನ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸುತ್ತಿದ್ದಾಗ, ಸಾಮಾಜಿಕ ಜಾಲತಾಣವಾದ ಪೇಸ್ ಬುಕ್ ನ ಕುಲುಮೆ ಎಂಬ ಗ್ರೂಪ್ ನಲ್ಲಿ AyshuAysha ಎಂಬ ಫೇಸ್ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಿಭಿನ್ನ ಕೋಮುಗಳ ನಡುವೆ ವೈಮನಸ್ಸು ಉಂಟಾಗುವಂತಹ ಸುಳ್ಳು ವದಂತಿಗಳಿರುವ ವರದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ […]

DAKSHINA KANNADA HOME LATEST NEWS

ಬಪ್ಪಳಿಗೆ-ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ಬಪ್ಪಳಿಗೆ-ಸಿಂಗಾಣಿ ಇದರ 4ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಈ ವೇಳೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ಬಪ್ಪಳಿಗೆ-ಸಿಂಗಾಣಿಯ ಗೌರವಾಧ್ಯಕ್ಷ ರಾಮಚಂದ್ರ ಕೆ. ರಾವ್, ಅಧ್ಯಕ್ಷ ಮೋಹನ್ ಗೌಡ ಸಿಂಗಾಣಿ, ಪ್ರಧಾನ ಕಾರ್ಯದರ್ಶಿ ಲಿಖಿತ್ ರಾಜ್ ಅರಸ್, ಮಾಜಿ ಅಧ್ಯಕ್ಷ ರವಿ […]

DAKSHINA KANNADA HOME

ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ಆಟಿದ ಐಸಿರ

ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ನಗರದ ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮವು ನಡೆಯಿತು. ಉಪಸ್ಥಿತರಿದ್ದ ಹಲವು ಗಣ್ಯರು ತುಳುನಾಡಿನ ಹಿಂದಿನ ಶೈಲಿಯಂತೆ ಕಡೆಯುವ ಕಲ್ಲಿನಲ್ಲಿ ಮಸಾಲೆ ಅರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಜುಲೈ-ಆಗಸ್ಟ್ ನಲ್ಲಿ ಆಟಿ ಕಳಂಜದ್ದೇ ಸುದ್ದಿ. ಮನೆ ಮನೆಯ ರೋಗ-ರುಜಿನಗಳನ್ನು ದೂರ ಮಾಡಲೆಂದೇ ಆಟಿ ಕಳಂಜ ಬರುವನೆಂಬ ನಮ್ಮ ಹಿರಿಯರ ನಂಬಿಕೆ […]

DAKSHINA KANNADA HOME LATEST NEWS NATIONAL STATE

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 14 ಕಡೆ ಏಕಕಾಲಕ್ಕೆ NIA ದಾಳಿ

ಮಂಗಳೂರು:  ಹಿಂದೂ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಇಂದು ಬೆಳಗ್ಗೆ ಜಿಲ್ಲೆಯ ವಿವಿಧೆಡೆ ಏಕಕಾಲಕ್ಕೆ 14 ಕಡೆ ದಾಳಿ ನಡೆಸಿದ್ದಾರೆ. ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ದಾಳಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಸೇರಿದಂತೆ ಸುಮಾರು 14 ಕಡೆಗಳಲ್ಲಿ ಎನ್ ಐ ಎ ಅಧಿಕಾರಿಗಳು ಇಂದು ಬೆಳಗ್ಗೆ ಆರು ಗಂಟೆಯ ಸುಮಾರಿಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಮೇ 1ರಂದು […]

DAKSHINA KANNADA HOME LATEST NEWS

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆಗೈದ ರೆಮೋನಾಗೆ ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ

ಮಂಗಳೂರು: ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ಶುಕ್ರವಾರ ವಿಶೇಷವಾಗಿ ಸನ್ಮಾನಿಸಿದೆ. ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕರಾದ ಡಾ.ರೋಹನ್ ಮೊಂತೇರೊರವರು ರೆಮೋನಾ ಪಿರೇರಾ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ […]

HOME STATE

ರೇಪ್‌ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ- ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆ ಸಾಧ್ಯತೆ

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಅಪಹರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದೆ. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗುವ ಸಾಧ್ಯತೆ ಇದೆ. ಪ್ರಕರಣದ ಹಿನ್ನೆಲೆ ಏನು? 2024ರ ಲೋಕಸಭೆಗೆ  ನಡೆದ ಚುನಾವಣೆ ವೇಳೆ ಪ್ರಜ್ವಲ್‌ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ. ಈ ವೇಳೆ ಸಂಸದನಾಗಿದ್ದ ಪ್ರಜ್ವಲ್‌ನದ್ದು ಎನ್ನಲಾದ ಲೈಂಗಿಕ ದೌರ್ಜನ್ಯ ಕೃತ್ಯಗಳ ಹಲವು ವಿಡಿಯೊಗಳು ಹಾಗೂ ಅಶ್ಲೀಲ […]

DAKSHINA KANNADA HOME LATEST NEWS NATIONAL STATE

ಬರೋಬ್ಬರಿ 8 ಜನರನ್ನು ವರಿಸಿ 9ನೇ ಮದುವೆಗೆ ರೆಡಿಯಾಗುತ್ತಿದ್ದ ಆಂಟಿ ಅರೆಸ್ಟ್‌

ಮುಂಬೈ: 35 ವರ್ಷದ ಮಹಿಳೆಯೊಬ್ಬಳು ಬರೋಬ್ಬರಿ 8 ಸಲ ಮದುವೆಯಾಗಿ, ಅದೇ ಗಂಡಂದಿರಿಗೆ ಮೂರು ನಾಮ ಇಕ್ಕು 9ನೇ ಮದುವೆಯಾಗಲು ಸಿದ್ಧತೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 35ರ ಹರೆಯದ ಸಮೀರಾ ಫಾತಿಮಾ ಈ ಪ್ರಕರಣದ ಆರೋಪಿತೆ.  ವಿಶೇಷ ಅಂದರೆ ಫಾತಿಮಾ ವೃತ್ತಿಯಲ್ಲಿ ಶಾಲಾ ಶಿಕ್ಷಕಿಯಾಗಿದ್ದು, 12 ವರ್ಷದ ಮಗುವನ್ನು ಹೊಂದಿದ್ದಾಳೆ. ಆ ಮಗು ಯಾವ ಗಂಡನದ್ದು ಎಂದು ತಿಳಿದುಬಂದಿಲ್ಲ. ಸಮೀರಾ ಫಾತಿಮಾ ಮ್ಯಾಟ್ರಿಮೊನಿ ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ […]

DAKSHINA KANNADA HOME LATEST NEWS STATE

ಧರ್ಮಸ್ಥಳ ಪ್ರಕರಣ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ

ಬೆಂಗಳೂರು : ಧರ್ಮಸ್ಥಳದ ತಲೆಬುರುಡೆ ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ತನಿಖೆ ಹಂತದಲ್ಲಿದೆ. ಹೀಗಾಗಿ, ಸುಳ್ಳು ಸುದ್ದಿ ಹಬ್ಬಿಸುವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುವುದು. ಈ ಸಂಬಂಧ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ನಿಗಾ ಇರಿಸಿದ್ದಾರೆ ಎಂದು ತಿಳಿಸಿದರು. ಎಸ್‍ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದ ತನಿಖೆ ಮಾಡುತ್ತಿದ್ದಾರೆ. […]

DAKSHINA KANNADA HOME LATEST NEWS

ಪುತ್ತೂರು: ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: 7 ವರ್ಷಗಳ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತನಾಗಿ ಬಿಡುಗಡೆಗೊಂಡು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಹನೀಫ್(55) ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ  2018ರಲ್ಲಿ ನಡೆದ ಪ್ರಕರಣವೊಂದರಲ್ಲಿ ಈತನ ಬಂಧನವಾಗಿತ್ತು ಬಳಿಕ ಜಾಮೀನು ಪಡೆದು,  ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಕೊಡಗು ಜಿಲ್ಲೆಯ ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ […]

DAKSHINA KANNADA HOME LATEST NEWS

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಹಿತ ಮೂವರ ಬಂಧನ

ಮಂಗಳೂರು: ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಹಿತ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಆಡೂರಿನ ಮಸೂದ್ ಎಂ.ಕೆ. (45), ಕಾಸರಗೋಡು ಜಿಲ್ಲೆಯ ದೇಲಂಪಾಡಿಯ ಮುಹಮ್ಮದ್ ಆಶಿಕ್ (24) ಮತ್ತು ಸುಬೇರ್ (30) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ ಎರಡು ಕಾರು ಮತ್ತು 123 ಕೆ.ಜಿ. ಗಾಂಜಾ ಹಾಗೂ 5 ಮೊಬೈಲ್ ಫೋನ್‌ಗಳನ್ನು ವಶಪಡಿಸಲಾಗಿದೆ. ಆರೋಪಿಗಳು ಗಾಂಜಾವನ್ನು ಆಂಧ್ರಪ್ರದೇಶದಿಂದ ತಂದು ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಮಾರಾಟ […]