Tag: ಕೆನರಾಟಿವಿ

DAKSHINA KANNADA HOME LATEST NEWS STATE

ಆರೋಪಿ ಬಳಿ ಹಣದ ಬೇಡಿಕೆ: ವಿಟ್ಲ ಠಾಣಾ ಎಸೈ ಸಸ್ಪೆಂಡ್‌

ವಿಟ್ಲ: ಆರೋಪಿಯೋರ್ವನ ಬಳಿ ಹಣದ ಬೇಡಿಕೆ ಮುಂದಿಟ್ಟ ಆರೋಪದಲ್ಲಿ ವಿಟ್ಲ ಠಾಣಾ ಎಸೈ ಕೌಶಿಕ್ ಬಿ.ಸಿ. ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಮೇ 8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿಯಾಡುತ್ತಿದ್ದ ಬಗ್ಗೆ ದೊರೆತ ಮಾಹಿತಿಯಂತೆ ಸ್ಥಳಕ್ಕೆ ಎಸ್ಸೈ ಕೌಶಿಕ್ ದಾಳಿ ಮಾಡಿದ್ದರು. ಈ ವೇಳೆ ಜುಗಾರಿ ಆಟದಲ್ಲಿ ನಿರತರಾಗಿದ್ದವರು ಪರಾರಿಯಾಗಿದ್ದರೆ, ಸ್ಥಳದಲ್ಲಿ ಬೈಕೊಂದು ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕಾನೂನಾತ್ಮಕವಾಗಿ ಕ್ರಮ ಜರುಗಿಸದ ಎಸ್ಸೈ ಕೌಶಿಕ್, ಬೈಕ್ ಮಾಲಕನಿಗೆ ಕರೆ ಮಾಡಿ ಠಾಣೆಗೆ ಬರಮಾಡಿಕೊಂಡಿದ್ದಾರೆ. ಅಲ್ಲದೇ, […]

DAKSHINA KANNADA HOME LATEST NEWS

ಡಿ. ಸಿ ಮನ್ನಾ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಜೊತೆ MLC ಐವನ್ ಡಿಸೋಜಾ ಸಮಾಲೋಚನೆ

ಮಂಗಳೂರು:  ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪರಿಶಿಷ್ಟರ ಮೀಸಲು ಭೂಮಿಯಾಗಿರುವ ಡಿ. ಸಿ ಮನ್ನಾ ಭೂಮಿಯ ಮಂಜೂರಾತಿಗೆ ಸಂಬಂಧಿಸಿದ ನ್ಯೂನತೆಗಳನ್ನು ಸರಿಪಡಿಸುವ ಬಗ್ಗೆ ನಿನ್ನೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾರವರು ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ನಾಯಕರು ಮತ್ತು ದಲಿತ ಸಂಘಟನೆಗಳ ಮುಖಂಡರ ಜೊತೆ ಸುಧೀರ್ಘ ಚರ್ಚೆಯನ್ನು ನಡೆಸಿದರು. ಬ್ರಿಟೀಷರು ಭಾರತಕ್ಕೆ ಬಂದಾಗ ಇಲ್ಲಿನ ಪರಿಶಿಷ್ಟರ ಸ್ಥಿತಿಗತಿಯನ್ನು ಆಧ್ಯಯನ ಮಾಡಿ 100 ವರ್ಷದ ಹಿಂದೆಯೇ ಭೂಮಿಯನ್ನು ಪರಿಶಿಷ್ಟರಿಗಾಗಿ ಮೀಸಲಿಟ್ಟಿದ್ದರು, […]

DAKSHINA KANNADA HOME LATEST NEWS STATE

ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ..!

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಂಗಳವಾರ ರಾತ್ರಿ […]

DAKSHINA KANNADA HOME LATEST NEWS STATE

ವಿವಾದಾತ್ಮಕ ಭಾಷಣ: ಪೊಲೀಸ್‌ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಚುನಾವಣೆ ವೇಳೆ ಮಾಡಿದ್ದ ವಿವಾದಾತ್ಮಕ ಭಾಷಣ ಸಂಬಂಧ ಮಾಜಿ ಸಚಿವ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ಬಂಟ್ವಾಳ ಠಾಣಾ ಪೊಲೀಸರು ನಡೆಸುತ್ತಿದ್ದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ. 2018ರ ವಿಧಾನಸಭಾ ಚುನಾವಣೆ ವೇಳೆ ಬಂಟ್ವಾಳದ ಕಲಡ್ಕದಲ್ಲಿ ರಾಜೇಶ್ ನಾಯ್ಕ್ ಪರ ಚುನಾವಣಾ ಪ್ರಚಾರ ನಡೆಸುವ ಸಂದರ್ಭದಲ್ಲಿ ಸುನಿಲ್ ಕುಮಾರ್, ‘ರಾಮ ಬೇಕೋ, ಅಲ್ಲಾ ಬೇಕೋ? ಎಂದು ಪ್ರಶ್ನೆ ಮಾಡಿದ್ದರು. ಈ ಕುರಿತು ಎಫ್‌ಐಆರ್ ದಾಖಲಾಗಿತ್ತು.   ಈ ಬಗ್ಗೆ ತನಿಖೆ ನಡೆಸಿದ ಬಂಟ್ವಾಳ […]

HOME LATEST NEWS

ಅಸೈಗೋಳಿಯ ಕ್ಸೇವಿಯರ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

ಮಂಗಳೂರು: ಮಂಗಳೂರಿನ ಹೊರವಲಯದ ಅಸೈಗೋಳಿಯಲ್ಲಿರುವ ಕ್ಸೇವಿಯರ್ ಕೈಗಾರಿಕಾ ತರಬೇತಿ ಸಂಸ್ಥೆಯ ಲ್ಲಿ ಜೂ. 9ರಂದು ಸೋಮವಾರ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಶಿಬಿರವು ಕ್ಸೇವಿಯರ್ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ಪಾನೀರ್ ಇವರ ಮಾರ್ಗದರ್ಶನದಲ್ಲಿ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಇಂಡಿಯನ್ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಮುರಳಿ ಅವರು, ಮಕ್ಕಳು ಮುಂದಿನ ಭವಿಷ್ಯದಲ್ಲಿ ಸಮಾಜದಲ್ಲಿ ಜೀವಿಸುವಾಗ ಜೀವನವನ್ನು ಹೇಗೆ ರೂಪಿಸಬೇಕು? ಹೆತ್ತವರಿಗೆ ಹಾಗೂ ಸಮಾಜಕ್ಕೆ ಹೇಗೆ ಮಾದರಿಯಾಗಿ ಬಾಳಬೇಕು ಮತ್ತು ವಿದ್ಯಾಭ್ಯಾಸದ ನಂತರ ಉದ್ಯೋಗವನ್ನು ಪಡೆಯುವುದರ […]

DAKSHINA KANNADA HOME LATEST NEWS

ಕಡಬ: ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ತಮ್ಮ- ನರಳಾಡಿ ಪ್ರಾಣ ಬಿಟ್ಟ ಅಣ್ಣ

ಕಡಬ: ಕೌಟುಂಬಿಕ ಕಲಹದಲ್ಲಿ ಸ್ವಂತ ಅಣ್ಣನನ್ನೇ ತಮ್ಮನೊಬ್ಬ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಬಜಕರೆ ಬಳಿ ರೈಲ್ವೇ ಟ್ರಾಕ್ ನಲ್ಲಿ ನಡೆದಿದೆ. ಬೆಂಕಿಯಿಂದ ಗಂಭೀರ ಗಾಯಗೊಂಡ ಅಣ್ಣ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ತಮ್ಮನನ್ನು ಮಂಗಳೂರು ವಿಭಾಗದ ರೈಲ್ವೇ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ (42) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಆತನ ತಮ್ಮ ನಿಂಗಪ್ಪ (21) […]

DAKSHINA KANNADA HOME LATEST NEWS

ಕೋಳಿ ಅಂಕದ ಮೇಲೆ ವಿಟ್ಲ ಪೊಲೀಸರಿಂದ ದಾಳಿ

ವಿಟ್ಲ: ಗುಡ್ಡೆಯಲ್ಲಿ ಕೋಳಿ ಅಂಕ ನಡೆಸುತ್ತಿದ್ದಾಗ ವಿಟ್ಲ ಪೊಲೀಸರು ದಿಢೀರ್‌ ಪೊಲೀಸ್‌ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕೋಳಿ ಸಮೇತ ಆರೋಪಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿರುವ ಪೊಲೀಸರು, ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಹರೆಬೆಟ್ಟು ಎಂಬ ಗುಡ್ಡೆಯಲ್ಲಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಈ ವೇಳೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ತಮ್ಮ ಸಿಬ್ಬಂದಿಯೊಂದಿಗೆ ಮರೆಯಲ್ಲಿ ನಿಂತು ಗಮನಿಸಿದಾಗ ಸದ್ರಿ ಗುಡ್ಡೆಯ ಸ್ಥಳದಲ್ಲಿ ಕೆಲವರು ಗುಂಪು ಸೇರಿ […]

DAKSHINA KANNADA HOME LATEST NEWS

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್‌: ಯತೀಶ್‌ ಪೆರುವಾಯಿ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್ ಹಂಚಿಕೊಂಡಿದ್ದ ಯುವಕನೋರ್ವನ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಗಳನ್ನು ಪ್ರಸಾರ ಮಾಡಿದ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು […]

DAKSHINA KANNADA HOME LATEST NEWS

ಭಾರಿ ಮಳೆ ಹಿನ್ನೆಲೆ: ದ.ಕ ಶಾಲೆಗಳಿಗೆ ಮೇ.31 ರಂದು ರಜೆ

ಮಂಗಳೂರು: ಕಳೆದ 24 ತಾಸುಗಳಲ್ಲಿ ಜಿಲ್ಲೆಯಾದ್ಯಂತ ತೀವ್ರ ಮಳೆಯಾಗುತ್ತಿದೆ. ಇದೇ ಹವಾಮಾನ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆ (ಮೇ. 31ರಂದು) ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

DAKSHINA KANNADA HOME LATEST NEWS STATE

ಕರಾವಳಿ ಪೊಲೀಸ್‌ ಇಲಾಖೆಗೆ ಭರ್ಜರಿ ಸರ್ಜರಿ ಎಸ್ಪಿ ಹಾಗೂ ಪೊಲೀಸ್‌ ಕಮೀಷನರ್‌ ಎತ್ತಂಗಡಿ

ಮಂಗಳೂರು: ಕರಾವಳಿಯಲ್ಲಿ ನಡೆದ ಕೋಮುಹತ್ಯೆಯನ್ನು ಹತ್ತಿಕ್ಕುವಲ್ಲಿ ವಿಫಲವಾದ ಪೊಲೀಸ್‌ ಇಲಾಖೆಗೆ ರಾಜ್ಯ ಸರ್ಕಾರ ಸರ್ಜರಿ ಮಾಡಿದ್ದು, ಇದರ ಮೊದಲ ಭಾಗವಾಗಿ ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗ್ರವಾಲ್‌ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯನ್ನು  ವರ್ಗಾವಣೆ ಮಾಡಲಾಗಿದೆ.  ನೂತನ ಪೊಲೀಸ್‌ ಆಯುಕ್ತರಾಗಿ ಸುಧೀರ್‌ ಕುಮಾರ್‌ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದ್ದು, ಎಸ್ಪಿ ಸ್ಥಾನಕ್ಕೆ ಹಾಲಿ ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್‌ ಕೆ ಅವರನ್ನು ನೇಮಿಸಲಾಗಿದೆ. 2010 ನೇ ಬ್ಯಾಚ್‌ನ ಐಪಿಎಸ್‌ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678