ಕದ್ರಿ ದಕ್ಷಿಣ ವಾರ್ಡ್‌ನಲ್ಲಿ 1 ಕೋಟಿ ರೂ. ವೆಚ್ಚದ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿ ಪೂಜೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನ ಮೈದಾನದಿಂದ ಕದ್ರಿ ಕಂಬಳ ಜಂಕ್ಷನ್ ವರೆಗಿನ ರಸ್ತೆಯನ್ನು ಸುಮಾರು 1 ಕೋಟಿ ರೂ. ಅನುದಾನದಲ್ಲಿ ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, “ಈ ಭಾಗದ ರಸ್ತೆ ಅಭಿವೃದ್ಧಿಯು ಬಹಳ ಕಾಲದ ಬೇಡಿಕೆಯಾಗಿತ್ತು. ಪ್ರತಿ ಮಳೆಗಾಲದಲ್ಲಿ ರಸ್ತೆ ಹಾಳಾಗಿ ಸ್ಥಳೀಯರು ಮತ್ತು ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಪಾಲಿಕೆಯ ಬಿಜೆಪಿ ಆಡಳಿತದ ಅವಧಿಯಲ್ಲಿ […]



