SDPI ಹೆಸರಿನಲ್ಲಿ ನಿಷೇಧಿತ PFIನ ಹಿಂಬಾಗಿಲ ರಾಜಕೀಯ ಪ್ರವೇಶ: ಸಂಸತ್ತಿನಲ್ಲಿ ಕ್ಯಾ. ಚೌಟ
ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಎಸ್‌ಡಿಪಿಐಯು ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ. […]




