DAKSHINA KANNADA
HOME
ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ ಸಂಸದ ಕ್ಯಾ. ಬ್ರಿಜೇಶ್ ಚೌಟ
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆಯಡಿ 2023-24 ಹಾಗೂ 2024-25ನೇ ಸಾಲಿನಲ್ಲಿ ದುರಸ್ತಿಗೊಳಿಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಸಮಗ್ರ ಶಿಕ್ಷಾ ಯೋಜನೆಡಿ ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇಲೆ ಆದ್ಯತೆಯಾಗಿ ಶಾಲೆಗಳನ್ನು ದುರಸ್ತಿಗೊಳಿಸುವ ಕಾರ್ಯ ನಡೆಯುತ್ತಿದೆ. […]