LATEST NEWS
ಮಹಾನಗರ ಪಾಲಿಕೆ ವತಿಯಿಂದಲೇ ಕುದ್ಮುಲ್ ರಂಗರಾವ್ ಜಯಂತಿ ಆಚರಿಸಲು ಶಾಸಕ ವೇದವ್ಯಾಸ ಕಾಮತ್ ಸೂಚನೆ
ಮಂಗಳೂರು: ದಲಿತೋದ್ದಾರಕ ಕುದ್ಮುಲ್ ರಂಗರಾಯರ ಜಯಂತಿಯನ್ನು ಮಂಗಳೂರು ಮಹಾನಗರ ಪಾಲಿಕೆ ವತಿಯಿಂದಲೇ ಆಚರಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ದಲಿತ ಮುಖಂಡರು ಮತ್ತು ಪಾಲಿಕೆ ಅಧಿಕಾರಿಗಳ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, “ಕಳೆದ ಬಾರಿ ಪಾಲಿಕೆ ವತಿಯಿಂದ ಕುದ್ಮುಲ್ ರಂಗರಾಯರ ಜಯಂತಿ ಆಚರಿಸದಿರುವುದು ಅತ್ಯಂತ ಬೇಸರದ ಸಂಗತಿ. ಈ ಬಗ್ಗೆ ದಲಿತ ಮುಖಂಡರು ಕುಂದುಕೊರತೆ ಸಭೆಯಲ್ಲೂ ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ತಪ್ಪುಗಳು ಮುಂದೆ ಮರುಕಳಿಸಬಾರದು,” ಎಂದು ಅಧಿಕಾರಿಗಳಿಗೆ […]


