ಪೆಹಲ್ಗಾಮ್ ದುಷ್ಕೃತ್ಯ: ಬಿಷಪ್ ಖಂಡನೆ
ಮಂಗಳೂರು: ಭಾರತದ ಮುಕುಟಮಣಿ ಎನ್ನಿಸಿರುವ ಕಾಶ್ಮೀರದಲ್ಲಿ ಪ್ರವಾಸಕ್ಕಾಗಿ ತೆರಳಿದ್ದ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ಕೃತ್ಯ ಅತ್ಯಂತ ಖಂಡನೀಯ, ಯಾವುದೇ ತಪ್ಪೆಸಗದವರ ಮೇಲೆ ಏಕಾಏಕಿ ಗುಂಡಿಟ್ಟು ಕೊಂದಿರುವುದು ಮಾನವತೆಗೆ ಕಳಂಕ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ.ಪೀಟರ್ ಪಾವ್ಲ್ ಸಾಲ್ಡನ್ಹಾ ಅವರು ಖೇದ ವ್ಯಕ್ತಪಡಿಸಿದ್ದಾರೆ. ರಜೆಯಲ್ಲಿ ಕುಟುಂಬಗಳು, ಮಹಿಳೆಯರು ಮಕ್ಕಳ ಸಹಿತ ಕಾಶ್ಮೀರ ಪಹಲ್ಗಾಮ್‌ಗೆ ಪ್ರವಾಸ ತೆರಳಿದ್ದರು. ಅಲ್ಲಿ ಮುಖ್ಯವಾಗಿ ಪುರುಷರನ್ನೇ ಗುರಿಯಾಗಿಸಿ ಉಗ್ರರು 26 ಮಂದಿಯ ತಲೆಗೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. […]