DAKSHINA KANNADA
HOME
LATEST NEWS
STATE
ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ- ಹುಲ್ಲುಗಾವಲು ಭಸ್ಮ
ಬೆಳ್ತಂಗಡಿ: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿಘಾಟ್ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಗಾಳಿ ವೇಗವಾಗಿ ಬೀಸುತ್ತಿರುವುದರಿಂದ ಜ್ವಾಲೆ ಹೆಚ್ಚುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ.


