DAKSHINA KANNADA
HOME
ಭಾರೀ ಮಳೆಗೆ ಹಲವೆಡೆ ಪ್ರಾಕೃತಿಕ ಅನಾಹುತ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ
ಮಂಗಳೂರು ಜುಲೈ 18 ನಗರದೆಲ್ಲೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಪ್ರಾಕೃತಿಕ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸತತ ಮಳೆಯಿಂದಾಗಿ ಅಡುಮರೋಳಿ ಶೋಭಾ ಶೆಟ್ಟಿ ಎಂಬುವವರ ಮನೆಯ ಎತ್ತರದ ಕಾಂಪೌಂಡ್ ಕುಸಿದು ಅಪಾರ ನಷ್ಟವುಂಟಾಗಿದೆ. ಅಲ್ಲದೇ ಪಾಂಪು ಮನೆ, ಸುಶಾಂತ್ ಪೂಜಾರಿ, ಮಹಾಬಲ ಎಂಬುವವರ ಮನೆಯ ಹಿಂಬದಿಯ ಗುಡ್ಡ ಕುಸಿದಿದ್ದು ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ. […]