ಬೆಳೆ ವಿಮೆಯಲ್ಲಿನ ಲೋಪ: ಸದನದಲ್ಲಿ ಶಾಸಕ ಅಶೋಕ್ ರೈ & ಸ್ಪೀಕರ್ ಮಧ್ಯೆ ಜಟಾಪಟಿ
ಪುತ್ತೂರು: ೨೦೨೪ರ ೨೦೨೪ ಪ್ರಾಕೃತಿಕ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ಪಾವತಿಸಿದ ಪರಿಹಾರ ಮೊತ್ತಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ತಡವಾಗಿರುವ ಮತ್ತು ಪರಿಹಾರ ಮೊತ್ತ ಕಡಿಮೆಯಾಗಿರುವ ಬಗ್ಗೆ ಬುಧವಾರ ಬೆಳಗಾವಿಯಲ್ಲಿ ನಡೆದ ವಿಧಾಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಪ್ರಸ್ತಾಪ ಮಾಡಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ನೇತೃತ್ವದಲ್ಲಿ ತೋಟಗಾರಿಕಾ ಸಚಿವರು, ವಿಮಾಕಂಎಪನಿ ಮತ್ತು ದಕ ಹಾಗೂ ಉಡುಪಿ ಜಿಲ್ಲೆಯ ಶಾಸಕರ ಸಭೆಯನ್ನು ನಡೆಸುವುದಾಗಿ ತೀರ್ಮಾನವನ್ನು ಕೈಗೊಳ್ಳಲಾಯಿತು. […]











