“ಮಸೀದಿ, ಮದರಸ, ಖಬರಸ್ತಾನ, ದೋಚಲು ಬಿಡುವುದಿಲ್ಲ” ವಕ್ಫ್ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ SDPI ಬೃಹತ್ ಪ್ರತಿಭಟನೆ
ಮಂಗಳೂರು: ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ, ಎಸ್‌ಡಿಪಿಐ ಜಿಲ್ಲಾ ಘಟಕದ ನೇತೃತ್ವದಲ್ಲಿ ಬುಧವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, “ಮಸೀದಿ, ಮದರಸ, ಖಬರಸ್ತಾನ, ದೋಚಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ಈ ಮಸೂದೆ ಹಿಂಪಡೆಯುವವರೆಗೂ ಹೋರಾಟ ಮುಂದುವರಿಯುತ್ತದೆ. ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಐದು ತಿಂಗಳುಗಳಲ್ಲಿ ನಾಲ್ಕು ಪ್ರತಿಭಟನೆ ನಡೆಸಲಾಗಿದೆ. ಎಸ್‌ಡಿಪಿಐ, ಜಾತ್ಯತೀತ ಸಂಘಟನೆಗಳಿಗೆ ಆಕ್ಷೇಪ ವ್ಯಕ್ತಪಡಿಸಲು […]