Tag: ಮಂಗಳೂರು

HOME

ಮಂಜೇಶ್ವರ: ಸ್ನೇಹಾಲಯದಲ್ಲಿ ಮಹಿಳಾ ದಿನಾಚರಣೆ ಸಂಭ್ರಮ

ಮಂಜೇಶ್ವರ: ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಾ.8ರಂದು ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿರುವ ಸ್ನೇಹಾಲಯ ಸಭಾಂಗಣದಲ್ಲಿ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಹಿಳೆಯರ ಶಕ್ತಿ ಮತ್ತು ಕೊಡುಗೆಗಳನ್ನು ಗೌರವಿಸುವುದರ ಜೊತೆಗೆ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶವನ್ನು ವ್ಯಕ್ತಪಡಿಸಿದರು. ಪರಿಸರ ಜಾಗೃತಿಯನ್ನು ಪ್ರತಿಬಿಂಬಿಸುವಂತೆ ಸಸಿಯನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ವ್ಯಸನಮುಕ್ತಿ ಕೇಂದ್ರದ ವ್ಯವಸ್ಥಾಪಕರಾದ ರಾಕೇಶ್ ಲೋಬೋ ಅವರು ಸ್ವಾಗತ ಭಾಷಣ ಮಾಡಿ ಅಂತರಾಷ್ಟ್ರೀಯ ಮಹಿಳಾ ದಿನದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ […]

DAKSHINA KANNADA HOME LATEST NEWS

ಮಂಗಳೂರು: 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು : ಕೊಲೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರೌಡಿ ಶೀಟರ್ ಸಫ್ವಾನ್ ಹುಸೈನ್ ಸಹಚರನೋರ್ವವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಳ್ಳಾರಿ ಜಿಲ್ಲೆಯ ಸದ್ಯ ಬೆಂಗಳೂರಿನ ಶ್ಯಾಮ್ ಪುರ ಬೇಕರಿ ಬಳಿಯ ನಿವಾಸಿ ಸುಫಿಯಾನ್ ಹುಸೈನ್ ಯಾನೆ ಕೊಟ್ರೇಶಿ (31) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯು ಗುಲ್ಬರ್ಗಾ, ಬಳ್ಳಾರಿ , ಮುಂಬೈ ಆಂಧ್ರ ಪ್ರದೇಶದಲ್ಲಿ ತಲೆ ಮರೆಸಿಕೊಂಡು ಬಳಿಕ ಬೆಂಗಳೂರಿನಲ್ಲಿ ಹುಸೈನ್ ಎಂದು ಬದಲಿಸಿ ಆಧಾರ್ ಕಾರ್ಡ್, […]

COMMUNITY NEWS DAKSHINA KANNADA HOME LATEST NEWS

ವಿಶ್ವಶಾಂತಿಗಾಗಿ ಕ್ರೈಸ್ತರು ಮಾ.13ರಂದು ಉಪವಾಸ -ಪ್ರಾರ್ಥನೆ ಮಾಡಿ: ಮಂಗಳೂರು ಬಿಷಪ್‌ ಕರೆ

ಮಂಗಳೂರು: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಭಾರತದ ಬಿಷಪರ ಮಂಡಳಿ ಅಧ್ಯಕ್ಷ ಅ.ವಂ. ಫಿಲಿಫ್‌ ನೆರಿ ಕಾರ್ಡಿನಲ್‌ ಫೆರಾವೋ ಅವರು ಎಂದು ಕರೆ ನೀಡಿದ್ದು, ಅದರಂತೆ ಮಂಗಳೂರು ಕಥೊಲಿಕ ಧರ್ಮಪ್ರಾಂತ್ಯದಲ್ಲಿ ಮಾರ್ಚ್ 8 ರಂದು ಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಜೊತೆಗೆ  ಮಾರ್ಚ್ 8ರಿಂದ 14ರವರೆಗೆ ಪ್ರತಿದಿನವೂ ಶಾಂತಿಗಾಗಿ ವಿಶೇಷವಾಗಿ ಪವಿತ್ರ ಜಪಸರ ಪ್ರಾರ್ಥನೆ ಮಾಡುವಂತೆ  ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ಅ.ವಂ.ಡಾ. ಪೀಟರ್‌ ಪಾವ್ಲ್‌ ಸಲ್ಡಾನ […]

DAKSHINA KANNADA HOME LATEST NEWS

ಇಂದು ಮಂಗಳೂರಿನಿಂದ ಗಲ್ಫ್‌ ರಾಷ್ಟ್ರಗಳಿಗೆ ತೆರಳುವ ವಿಮಾನಗಳು ರದ್ದು

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಮಾ.5ರಂದು ಮಂಗಳೂರು-ದೋಹಾ (ಐಎಕ್ಸ್ 821), ದೋಹಾ – ಮಂಗಳೂರು (ಐಎಕ್ಸ್ 822), ಮಂಗಳೂರು-ದುಬೈ (ಐಎಕ್ಸ್ 831), ದುಬೈ-ಮಂಗಳೂರು (ಐಎಕ್ಸ್ 832), ಮಂಗಳೂರು – ದುಬೈ (ಐಎಕ್ಸ್ 813), ಮಾ.6ರ ದುಬೈ-ಮಂಗಳೂರು (ಐಎಕ್ಸ್ 814), ಮಾ5ರ ಮಂಗಳೂರು-ಬಹರೇನ್(ಐಕ್ಸ್ 841), ಮಾ.6ರ ಬಹರೇನ್-ಮಂಗಳೂರು (ಐಎಕ್ಸ್ 842), ಮಾ.5ರ ಮಂಗಳೂರು-ಕುವೈತ್ (ಐಎಕ್ಸ್ 851), ಮಾ.6ರ ಕುವೈತ್-ಮಂಗಳೂರು (ಐಎಕ್ಸ್ 852), ಮಾ.5ರ ಮಂಗಳೂರು-ದಮ್ಮಾಮ್ (ಐಎಕ್ಸ್ 847), ಮಾ.6ರ ದಮ್ಮಾಮ್-ಮಂಗಳೂರು (ಐಎಕ್ಸ್ 848), ಮಾ.5ರ ಮಂಗಳೂರು-ಅಬುಧಾಬಿ (ಐಎಕ್ಸ್ 815), […]

DAKSHINA KANNADA HOME LATEST NEWS

ರೈಲ್ವೆ ಹಳಿಯಲ್ಲಿ ಕುಳಿತಿದ್ದ ಅಪ್ರಾಪ್ತರ ಮೇಲೆ ನೈತಿಕ ಪೊಲೀಸ್‌ಗಿರಿ: ಇಬ್ಬರ ಬಂಧನ

ಮಂಗಳೂರು: ನೈತಿಕ ಪೊಲೀಸ್‌ಗಿರಿಯಲ್ಲಿ ಸೈಲೆಂಟ್‌ ಆಗಿದ್ದ ಮಂಗಳೂರಿನಲ್ಲಿ ಇದೀಗ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ರೈಲ್ವೆ ಹಳಿಯಲ್ಲಿ ಕುಳಿತಿದ್ದ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದ ಮೇಲೆ ತಂದೆ ಮತ್ತು ಮಗನನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂದು ಗುರುತಿಸಲಾಗಿದೆ. ಮಂಗಳೂರು ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕ ಮತ್ತು […]

COMMUNITY NEWS DAKSHINA KANNADA HOME LATEST NEWS

ಕರಾವಳಿಯಲ್ಲಿ ಇಂದು ಕ್ರೈಸ್ತರ ಬೂದಿ ಬುಧವಾರ- “ಪ್ರಾರ್ಥನೆ, ತ್ಯಾಗ, ದಾನಧರ್ಮ ಮಾಡಿ”

ಮಂಗಳೂರು: ಇಂದಿನಿಂದ ವಿಶ್ವ ಕಥೋಲಿಕ ಕ್ರೈಸ್ತ ಸಮುದಾಯ ಬೂದಿ ಬುಧವಾರ (ಆ್ಯಶ್‌ ವೆಡ್ನಸ್‌ ಡೇ), ವಿಭೂತಿ ಬುಧವಾರ ಆಚರಿಸುತ್ತಾರೆ. ಅದರ ಭಾಗವಾಗಿ ಕರಾವಳಿಯ ಕಥೋಲಿಕ ಕ್ರೈಸ್ತ ಸಮುದಾಯ ಇಂದು ಬೆಳಗ್ಗೆಯಿಂದ ಬೂದಿ ಬುಧವಾರ ಆಚರಿಸಿದರು. ಈ ಮೂಲಕ ಕ್ರೈಸ್ತರು ಇಂದಿನಿಂದ ತಪಸ್ಸು ಕಾಲ ಆರಂಭಿಸುತ್ತಿದ್ದಾರೆ. ಈ ಬೂದಿ ಬುಧವಾರದ ವಿಶೇಷತೆ ಎಂದರೆ ಎಲ್ಲ ಚರ್ಚ್‌ಗಳಲ್ಲಿ ಬುಧವಾರ ಬೆಳಗ್ಗೆ ಹಾಗೂ ಸಂಜೆ ವಿಶೇಷ ಪೂಜೆಯ ಜತೆಗೆ ಬೂದಿಯಲ್ಲಿ ಶಿಲುಬೆಯ ಚಿಹ್ನೆಯನ್ನು ಭಕ್ತರಿಗೆ ಹಾಕುವ ಮೂಲಕ ಕಪ್ಪು ದಿನದ ಆಚರಣೆಗೆ […]

DAKSHINA KANNADA HOME LATEST NEWS

ಅಪ್ರಾಪ್ತೆಯ ಅತ್ಯಾಚಾರ ಕೇಸ್‌: ಪ್ರಾಸಿಕ್ಯೂಷನ್‌ ವಿಫಲ- ಆರೋಪಿ ಖುಲಾಸೆ

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ವಿರುದ್ಧ ಹೊರಿಸಲಾದ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತೀರ್ಮಾನಿಸಿದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ  ಕೆ.ಎಸ್. ಮಾನು ಅವರು ಈ ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದ ವಿವರ: 2025ರ ಜುಲೈ ಎರಡನೇ ವಾರದಲ್ಲಿ ಮೂಲ್ಕಿ ಬಪ್ಪನಾಡು ದೇವಸ್ಥಾನದ ಬಳಿಯಿಂದ ಅಪ್ರಾಪ್ತ ಬಾಲಕಿಯನ್ನು […]

DAKSHINA KANNADA HOME LATEST NEWS

9 ಯುವತಿಯರಿಗೆ ವಂಚನೆ: ಇಬ್ಬರ ಜೊತೆ ಮದುವೆಯಾದ ‘ಮ್ಯಾಟ್ರಿಮೋನಿ’ ಮಾವ-ಅಳಿಯನ ಬಂಧನ

ಮಂಗಳೂರು: ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಲ್ಲಿ ಯುವತಿಯರನ್ನು ವಂಚಿಸುತ್ತಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ (Matrimony) ವರ ಹುಡುಕುತ್ತಿದ್ದ ಯುವತಿಯರನ್ನು ಗುರಿಯಾಗಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತನನ್ನು ಸುಶಾಂತ್ ಪೂಜಾರಿ ಎಂದು ಗುರುತಿಸಲಾಗಿದ್ದು, ಈತನ ವಂಚನೆಗೆ ಸಾಥ್ ನೀಡಿದ್ದ ಮುಲ್ಕಿ ನಿವಾಸಿ ಭಾಸ್ಕರ್‌ನನ್ನೂ ಪೊಲೀಸರು ಬಂಧಿಸಿದ್ದಾರೆ. ಸುಶಾಂತ್ ತನ್ನ ಅಳಿಯ ಎಂದು ಹೇಳಿ ಸಂತ್ರಸ್ತೆಯ ಕುಟುಂಬದವರಿಗೆ ನಂಬಿಕೆ ಮೂಡಿಸಲು ಭಾಸ್ಕರ್ ಧಾರ್ಮಿಕ ವಿಧಿವಿಧಾನಗಳಲ್ಲೂ ಭಾಗವಹಿಸಿದ್ದಾನೆ […]

DAKSHINA KANNADA HOME LATEST NEWS

ಮಂಗಳೂರು-ಮೂಡಬಿದ್ರೆ ಹೆದ್ದಾರಿ ದುರಸ್ತಿ: 30 ದಿನ ಬದಲಿ ರಸ್ತೆ ಉಪಯೋಗಿಸಲು ಸಲಹೆ

ಮಂಗಳೂರು: ತಾಲೂಕಿನ ಬಜ್ಪೆ ಎಡಪದವಿನ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಇದೀಗ ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಹಾಗೂ ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ವಾಹನಗಳ ಓಡಾಟಕ್ಕೆ ಇದ್ದ ಹಳೆ ರಸ್ತೆಯು ಘನ ವಾಹನಗಳ ಓಡಾಟದಿಂದಾಗಿ ಬಿರುಕು ಬಿಟ್ಟು ಅಲ್ಲಲ್ಲಿ ಕುಸಿಯಲು ಪ್ರಾರಂಭಿಸಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫೆ. 12ರಿಂದ ಮಾ.13ರವರೆಗೆ 30 ದಿನಗಳ ಕಾಲ ರಸ್ತೆ ದುರಸ್ತಿ ಕಾಮಗಾರಿ ನಡೆಯಲಿದೆ. ರಸ್ತೆ ದುರಸ್ತಿ ಕಾಮಗಾರಿ ನಡೆಯುವ ಸಮಯ ಸಾರ್ವಜನಿಕ ಹಿತದೃಷ್ಠಿಯಿಂದ […]

DAKSHINA KANNADA HOME LATEST NEWS

19 ವರ್ಷದ ಒಳಗಿನ ಮಕ್ಕಳಿಗೆ ಜಂತುಹುಳ ಮಾತ್ರೆ: ಇಂದಿನಿಂದ ವಿತರಣೆ

ಮಂಗಳೂರು: ಇಂದಿನ ಮಕ್ಕಳು ಭವಿಷ್ಯದಲ್ಲಿ ಗುಣಮಟ್ಟದ ಜೀವನ ನಡೆಸಲು ಉತ್ತಮ ಶಿಕ್ಷಣ ಲಭಿಸಬೇಕಾಗಿದ್ದು, ಇದಕ್ಕಾಗಿ ಪೌಷ್ಠಿಕಯುಕ್ತವಾದ ಸುಧಾರಿತ ಆರೋಗ್ಯ ಹೊಂದಿರಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಂತುಹುಳಗಳು ಮನುಷ್ಯನ ಕರುಳಿನಿಂದ ಆಹಾರವನ್ನು ಪಡೆದು ಜೀವಿಸುವಂತಹ ಉಪಜೀವಿಗಳಾಗಿವೆ. ಫೆಬ್ರವರಿ 10 ರಂದು ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತದೆ. 1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಜಂತುಹುಳ ಕಾಣಿಸಿಕೊಳ್ಳುತ್ತಿರುವುದರಿಂದ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ […]