Tag: ಮಂಗಳೂರು

DAKSHINA KANNADA HOME LATEST NEWS

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಕಾಯ್ದೆಯಡಿ ಓರ್ವನ ಬಂಧನ

ಸುರತ್ಕಲ್: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಕ್ಸೊ ಕಾಯ್ದೆಯಡಿ ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ಅಬ್ದುಲ್ ಇಸ್ಮಾಯೀಲ್ ಬಂಧಿತ ಆರೋಪಿ. ಚೊಕ್ಕಬೆಟ್ಟು ಪೇಟೆಯಲ್ಲಿ ಹನಿ ಫ್ಯಾಶನ್ ಮತ್ತು ಜನರಲ್ ಸ್ಟೋರ್ ನಡೆಸಿಕೊಂಡಿರುವ ಆರೋಪಿ ಇಸ್ಮಾಯೀಲ್ ತನ್ನ ಅಂಗಡಿಗೆ ಚಾಕಲೇಟು ಖರೀದಿಸಲೆಂದು ಬಂದಿದ್ದ 11 ವರ್ಷದ ಬಾಲಕನ ಕೈ-ಕಾಲನ್ನು ಕಟ್ಟಿ ಅಂಗಡಿಯ ಒಂದು ಕೊಠಡಿಯಲ್ಲಿ ಕೂಡಿಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕನ ತಾಯಿ ಸುರತ್ಕಲ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. […]

DAKSHINA KANNADA HOME LATEST NEWS

ಮಂಗಳೂರು ಮೂಲದ ರೌಡಿ ಶೀಟರ್‌ಗಳಿಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ

ಕಾರವಾರ:  ಮಂಗಳೂರು ಮೂಲದ ವಿಚಾರಣಾಧೀನ ರೌಡಿ ಶೀಟರ್‌ಗಳಿಬ್ಬರು ಕಾರವಾರ ಕಾರಾಗೃಹದಲ್ಲಿ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮಂಗಳೂರು ಮೂಲದ ರೌಡಿ ಶೀಟರ್‌ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳು. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇವರನ್ನು, ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾದ ಕಾರಣ ಕಾರವಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಮಾದಕ ವಸ್ತು ಒದಗಿಸುವಂತೆ ಗಲಾಟೆ ಮಾಡಿದ ಕೈದಿಗಳು ಪರಸ್ಪರ […]

DAKSHINA KANNADA HOME LATEST NEWS

ಸುಳ್ಯ : ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಸುಳ್ಯ : ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಪೂಜಾ ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ […]

HOME

MCC ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

ಮಂಗಳೂರು: ಎಂ.ಸಿ.ಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯು ಡಿ.೪ ರಂದು ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆಗೊಂಡಿತು. ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ ಮತ್ತು ವಿಷನ್ ಕೊಂಕಣಿಯ ಪ್ರವರ್ತಕ ಮೈಕಲ್ ಡಿಸೋಜಾ ಉದ್ಘಾಟಿಸಿದರು. ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು. ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಜೆಪ್ಪುವಿನ ಸೇಂಟ್ ಆ್ಯಂಟನಿ ಆಶ್ರಮದ ನಿರ್ದೇಶಕ ವಂದನೀಯ […]

HOME NATIONAL

SDPI ಹೆಸರಿನಲ್ಲಿ ನಿಷೇಧಿತ PFIನ ಹಿಂಬಾಗಿಲ ರಾಜಕೀಯ ಪ್ರವೇಶ: ಸಂಸತ್ತಿನಲ್ಲಿ ಕ್ಯಾ. ಚೌಟ

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಎಸ್‌ಡಿಪಿಐಯು ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ. […]

COMMUNITY NEWS HOME STATE

ಕಥೋಲಿಕ್ ಚರ್ಚ್‌ಗಳಲ್ಲಿ ಬ್ರ. ಸಜಿತ್ ಜೋಸೆಫ್‌ಗೆ ನಿಷೇಧ: ಭಾರೀ ಪರ- ವಿರೋಧ ಚರ್ಚೆ

ಮಂಗಳೂರು : ಕರಾವಳಿ ಕರ್ನಾಟಕದಲ್ಲಿ ಕಡಿಮೆ ಸಮಯದಲ್ಲಿ ಅತೀ ಹೆಚ್ಚು ಸುದ್ದಿ ಮಾಡಿ,  ತನ್ನ ವಿಶೇಷ ಬೋಧನೆಯಿಂದ ಸಾವಿರಾರು ಭಕ್ತರನ್ನು ಒಂದೆಡೆ ಸೇರಿಸುವ ಮೂಲಕ ಖ್ಯಾತಿ ಪಡೆದಿದ್ದ ಕೇರಳ ಮೂಲದ ಸಜಿತ್ ಜೋಸೆಫ್ ಅವರನ್ನು ಕೇರಳದ ಸಿರಿಯನ್ ಕೆಥೋಲಿಕ್ ಮಲಬಾರ್ ಚರ್ಚ್ ಆಡಳಿತವು ದಿಢೀ‌ರ್ ಆಗಿ ಬೋಧಕ ಸ್ಥಾನದಿಂದ ತೆರವು ಮಾಡಿದ್ದು ಆತನನ್ನು ಯಾವುದೇ ಚರ್ಚ್ ಗಳಲ್ಲಿ ಪ್ರಾರ್ಥನೆಗೆ ಬಳಸಿಕೊಳ್ಳದಂತೆ ನಿಷೇಧ ವಿಧಿಸಿದೆ. ಜೊತೆಗೆ ಕರ್ನಾಟಕದಲ್ಲೂ ಕಥೋಲಿಕ ಕ್ರೈಸ್ತರ ಚರ್ಚ್‌ಗಳಲ್ಲಿ ಆತನಿಗೆ ನಿಷೇಧ ಹೇರಿದ್ದಾರೆ. ಸಿರಿಯನ್ ಕೆಥೋಲಿಕ್ […]

COMMUNITY NEWS DAKSHINA KANNADA HOME LATEST NEWS

ಕರಾವಳಿಯಾದ್ಯಂತ ಕ್ರೈಸ್ತರ ಮೋಂತಿ ಹಬ್ಬದ ಸಂಭ್ರಮ

ಮಂಗಳೂರು: ಕರಾವಳಿಯಾದ್ಯಂತ ಕಥೋಲಿಕ ಕ್ರೈಸ್ತರು ಮೋಂತಿ (ಮೇರಿ ಮಾತೆ) ಹಬ್ಬವನ್ನು ಸಡಗರದಿಂದ ಆಚರಿಸಿದರು. ತೆನೆ ಹಬ್ಬವೆಂದು ಕರೆಯುವ ಈ ಹಬ್ಬದ ದಿನವಾದ ಇಂದು ಹೊಸ ತೆನೆಯ ಆರ್ಶಿವಾದ, ವಿಶೇಷ ಬಲಿಪೂಜೆ ನಡೆಯಿತು. ಈ ಹಬ್ಬಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೇನಾ ನಡೆಯಿತು. ಮಕ್ಕಳು 9 ದಿನಗಳ ಕಾಲ ತಮ್ಮ ಹಿತ್ತಲಲ್ಲಿ ಸಿಕ್ಕ ಹೂಗಳನ್ನು ಚರ್ಚಿಗೆ ತಂದು ಮೇರಿ ಮಾತೆಗೆ ಅರ್ಪಿಸುತ್ತಾರೆ. ಈ ವೇಳೆ ಮಕ್ಕಳಿಗೆ ಸಿಹಿತಿನಿಸುಗಳನ್ನು ಹಂಚುತ್ತಾರೆ.ಕೊನೆಯ ದಿನವಾದ ಇಂದು ಎಲ್ಲರ ಮನೆಗಳಲ್ಲಿ ಕುಟುಂಬ ಸಮೇತ ಸಸ್ಯಹಾರಿ […]

DAKSHINA KANNADA HOME LATEST NEWS

ಸಂತ ರೀಟಾ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಸೈಂಟ್ ರೀಟಾ ವಿದ್ಯಾ ಸಂಸ್ಥೆ ವಿಟ್ಲ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ 2025-26 ಆಯೋಜಿಸಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಎಂ. ಜಿ. ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ವಂ. ಫಾ. ಐವನ್ ಮೈಕಲ್ ರೋಡ್ರಿಗಸ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕ್ರೀಡಾ ಪರಿವೀಕ್ಷಕರಾದ ಆಶಾ ನಾಯಕ್, […]

DAKSHINA KANNADA HOME

ದ.ಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮತಗಳ್ಳತನ ವಿರುದ್ಧ ಪಂಜಿನ ಮೆರವಣಿಗೆ

ಮಂಗಳೂರು: ಮತಗಳ್ಳತನ‌ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ಪ್ರತಿಭಟನಾ ಸಭೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ವೇತೃತ್ವದಲ್ಲಿ ನಡೆಯಿತು. ಮಂಗಳೂರಿನ ನವಭಾರತ್ ಸರ್ಕಲ್ ನಿಂದ ಲಾಲ್‌ಭಾಗ್ ವರೆಗೆ ನಡೆದ ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಮತಗಳ್ಳತನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಸಚಿವ […]

HOME

ಭಾರೀ ಮಳೆ ಹಿನ್ನೆಲೆ: ಶಾಲೆಗಳಿಗೆ ರಜೆ

ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕಿನ ಅಂಗನವಾಡಿ ಕೇಂದ್ರಗಳು ಸರಕಾರಿ ಪ್ರಾಥಮಿಕ /ಪ್ರೌಢ ಶಾಲೆಗಳು ಮತ್ತು ಖಾಸಗಿ ವಿದ್ಯಾ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಬಂಟ್ವಾಳ, ಮೂಲ್ಕಿ, ಉಳ್ಳಾಲ, ಪುತ್ತೂರು ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಸ್ಥಳೀಯ ತಹಶೀಲ್ದಾರರು ಆದೇಶಿಸಿದ್ದಾರೆ.