DAKSHINA KANNADA
*ಮಹಾನಗರ ಪಾಲಿಕೆ ಬಜಾಲ್ ವಾರ್ಡಿನಲ್ಲಿ ಸುಮಾರು 1 ಕೋಟಿ ರೂ ಕಾಮಗಾರಿಗಳ ಗುದ್ದಲಿ ಪೂಜೆ: ಶಾಸಕ ವೇದವ್ಯಾಸ ಕಾಮತ್
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನಲ್ಲಿ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ನಡೆಯಲಿರುವ ಹದಿನೈದಕ್ಕೂ ಹೆಚ್ಚು ಕಾಮಗಾರಿಗಳ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬಹುಕಾಲದ ಬೇಡಿಕೆಯಂತೆ ಅತೀ ಅಗತ್ಯವಿರುವ ರಸ್ತೆ ಕಾಂಕ್ರೀಟೀಕರಣ, ತಡೆಗೋಡೆ ನಿರ್ಮಾಣ, ಕಾಲುದಾರಿ, ಆರ್.ಸಿ.ಸಿ ಚರಂಡಿ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅನುದಾನವನ್ನು ಹೊಂದಿಸಿಕೊಂಡು ಸಕಲ ವ್ಯವಸ್ಥೆ […]


