ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜನ್ಮದಿನ: ಜೆಡಿಎಸ್ನಿಂದ ರಕ್ತದಾನ ಶಿಬಿರ
ಮಂಗಳೂರು: ಮಾಜಿ ಪ್ರಧಾನಮಂತ್ರಿ, ಜನತಾದಳ (ಜಾತ್ಯತೀತ) ಪಕ್ಷದ ಹಿರಿಯ ನಾಯಕ ಹಾಗೂ ದೇಶದ ಹಿರಿಯ ರಾಜಕಾರಣಿಗಳಾದ ಶ್ರೀ ಎಚ್.ಡಿ. ದೇವೇಗೌಡರವರ ಜನ್ಮದಿನದ ಅಂಗವಾಗಿ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಂಗಳೂರಿನ ಲೇಡಿಗೋಷನ್ ಸಮೀಪದ ರೆಡ್ ಕ್ರಾಸ್ ರಕ್ತ ನಿಧಿ ಕೇಂದ್ರದಲ್ಲಿ ಅರ್ಥಪೂರ್ಣ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ದೇವೇಗೌಡರವರ ಜನ್ಮದಿನವನ್ನು ಆಚರಿಸುವ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಯುವಕರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವನ್ನು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ […]



