DAKSHINA KANNADA
HOME
ವಿಟ್ಲ ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 32 ಸಾವಿರ ರೂ. ದಂಡ
ವಿಟ್ಲ: ಅ 16 : ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಕಾರಣಕ್ಕೆ ವಾಹನ ಮಾಲಕನಿಗೆ ಬಂಟ್ವಾಳ ನ್ಯಾಯಾಲಯವು 32 ಸಾವಿರ ರೂ. ದಂಡ ವಿಧಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಕಳೆದ ಸೆಪ್ಟೆಂಬರ್ ನಲ್ಲಿ ಪುತ್ತೂರು ಕಡೆಯಿಂದ ವಿಟ್ಲದತ್ತ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕ ಚಲಾಯಿಸುತ್ತಿದ್ದ ಇನ್ನೊಂದು ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಬಂಟ್ವಾಳ ಎಸಿಜೆ […]


