DAKSHINA KANNADA
ವಿಟ್ಲ ಬೊಬ್ಬೆಕೇರಿ ರಸ್ತೆ ಕಾಂಕ್ರೀಟೀಕರಣಕ್ಕೆ ೬೦ ಲಕ್ಷ ರೂ. ಮಂಜೂರು: ಹಲವು ವರ್ಷಗಳ ಸಮಸ್ಯೆಗೆ ಶಾಸಕ ಅಶೋಕ್ ರೈ ಅವರಿಂದ ಮುಕ್ತಿ
ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಯ ಕಾಂಞಂ ಗಾಡು-ಕಡೂರು ರಾಜ್ಯ ಹೆದ್ದಾರಿಯ ಬೊಬ್ಬೆಕೇರಿ ಎಂಬಲ್ಲಿನ ರಸ್ತೆ ಸಮಸ್ಯೆಗೆ ಕೊನೆಗೂ ಶಾಶ್ವತ ಪರಿಹಾರ ದೊರೆತಿದೆ. ಇಲ್ಲಿನ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಾಗಿ ೬೦ ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಸಾರ್ವಜನಿಕರ ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಸಮಸ್ಯೆಯ ಹಿನ್ನೆಲೆ: ಅಂತರರಾಜ್ಯ ಸಂಪರ್ಕಿಸುವ ಪ್ರಮುಖ ಹೆದ್ದಾರಿಯ ಬೊಬ್ಬೆಕೇರಿಯಲ್ಲಿ ರಸ್ತೆ ಅತ್ಯಂತ ಕಿರಿದಾಗಿತ್ತು. ರಸ್ತೆಯ ಇಕ್ಕೆಲಗಳಲ್ಲಿ ಖಾಸಗಿ ಜಮೀನು ಇದ್ದ ಕಾರಣ ಅಗಲೀಕರಣ ಮಾಡಲು ಸಾಧ್ಯವಾಗಿರಲಿಲ್ಲ. ಸೂಕ್ತ ಚರಂಡಿ ವ್ಯವಸ್ಥೆಯೂ ಇಲ್ಲದ ಕಾರಣ ಮಳೆನೀರು ರಸ್ತೆಯಲ್ಲೇ […]


