Tag: ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

DAKSHINA KANNADA HOME STATE

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರನ್ನು ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ. ಸಮಿತಿಯ ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ., ಡಾ|ಚಂದ್ರಶೇಖರ ಬಸವರಾಜ ಪಾಟೀಲ, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ, ರಾಮೋಜಿಗೌಡ ಅವರನ್ನು ಇದೇ ಸಂದರ್ಭದಲ್ಲಿ ನೇಮಕ ಮಾಡಲಾಗಿದೆ.