HOME
NATIONAL
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ
ನವದೆಹಲಿ, ಜುಲೈ 25 : ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಪ್ರತಿಯೊಬ್ಬ ಪ್ರಜೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಔದ್ಯೋಗಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯುವುದು ಅತ್ಯಗತ್ಯ. ನಮ್ಮ ಸಂವಿಧಾನ ಸಾಮಾಜಿಕ ನ್ಯಾಯವನ್ನು ಬೆಂಬಲಿಸುತ್ತದೆ. ದೇಶಕ್ಕೆ ಸ್ವಾತಂತ್ರ್ಯ ಬಂದ […]