‘ಭಜರಂಗಿ ಗೋ ಕಳ್ಳರು’ ವಾಟ್ಸಾಪ್ ಗ್ರೂಪ್‌ನಲ್ಲಿ ಧಾರ್ಮಿಕ ಭಾವನೆ ಕೆರಳಿಸಿದ ಪ್ರಕರಣ: ಹೈಕೋರ್ಟ್ ಕಿಡಿ
ಬೆಂಗಳೂರು: ‘ಭಜರಂಗಿ ಗೋ ಕಳ್ಳರು’ ಹೆಸರಿನಲ್ಲಿ ವಾಟ್ಸ್ ಆ್ಯಪ್ ಗ್ರೂಪ್ ರಚಿಸಿ ಅದರಲ್ಲಿ, ಹಿಂದೂ ದೇವತೆಗಳನ್ನು ಮತ್ತು ರಾಜಕೀಯ ನಾಯಕರನ್ನು ಅಶ್ಲೀಲವಾಗಿ ಬಿಂಬಿಸಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪವಿರುವ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ತನ್ನ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕು ಕುಪ್ಪೆಟ್ಟಿ ಕರಾಯ ಗ್ರಾಮದ ಸಿರಾಜುದ್ದೀನ್ ಬಿನ್ ಮೊಹಮದ್ ಇಸ್ಮಾಯಿಲ್ (30) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ […]


