ಬಂಟ್ವಾಳ : ಅಡಿಕೆ ಕಳ್ಳನ ಬಂಧನ- ಆರೋಪಿಗೆ ನ್ಯಾಯಾಂಗ ಬಂಧನ
ಬಂಟ್ವಾಳ : ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ನಡೆದಿದ್ದ ಒಣ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಪೈಚಾರು ನಿವಾಸಿ ಸತೀಶ್ (29) ಎಂದು ತಿಳಿದುಬಂದಿದೆ. ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ಜುಲೈ 3 ರಿಂದ 22 ರ ಅವಧಿಯಲ್ಲಿ ಸುಮಾರು 45 ಪ್ಲಾಸ್ಟಿಕ್ ಚೀಲದಲ್ಲಿದ್ದ 2.20 ಲಕ್ಷ ರೂ. ಮೌಲ್ಯದ ಒಣ ಅಡಿಕೆ ಕಳವಾಗಿರುವ ಬಗ್ಗೆ ಜುಲೈ 23 ರಂದು ಬಂಟ್ವಾಳ ಗ್ರಾಮಾಂತರ […]