Tag: canaratv news ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್‌ನಿಂದ ರಕ್ತದಾನ ಶಿಬಿರ ಕೆನರಾಟಿವಿ

LATEST NEWS

ಬಜಿಲಕೇರಿಯಲ್ಲಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್‌ನಿಂದ ಯಶಸ್ವಿ ರಕ್ತದಾನ ಶಿಬಿರ

ಮಂಗಳೂರು: ನಗರದ ಪ್ರತಿಷ್ಠಿತ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಹಾಗೂ ಕೆಎಂಸಿ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಭಾನುವಾರ ಬಜಿಲಕೇರಿಯ ‘ಸೇವಾಂಜಲಿ ಏರೆನಾ’ದಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಪ್ರಮುಖರಾದ ಹನುಮಂತ ಕಾಮತ್ ಅವರು ಮಾತನಾಡಿ, “ಮಂಗಳೂರಿನಲ್ಲಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದ ಕೊರತೆ ಇರುವುದು ನಮ್ಮ ಗಮನಕ್ಕೆ ಬಂದ ಕೂಡಲೇ ಈ ಶಿಬಿರವನ್ನು ಆಯೋಜಿಸಲು ನಿರ್ಧರಿಸಿದೆವು. ಅತೀ ಕಡಿಮೆ ಅವಧಿಯಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರೂ, ಯುವಜನತೆ ಮತ್ತು ದಾನಿಗಳಿಂದ ಅಭೂತಪೂರ್ವ ಸ್ಪಂದನೆ ದೊರೆತಿದೆ,” ಎಂದರು. ರಕ್ತದಾನದ ಮಹತ್ವವನ್ನು […]