Tag: canaratv news

LATEST NEWS

ಮಂಜನಾಡಿ ಭೀಕರ ಗುಡ್ಡ ಕುಸಿತ: ನೊಂದ ಅಶ್ವಿನಿ ಮನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ; ನ್ಯಾಯದ ಹೋರಾಟದಲ್ಲಿ ಸದಾ ಜೊತೆಗಿರುವ ಅಭಯ

ಮಂಗಳೂರು: ಕಳೆದ ವರ್ಷ ಮಂಗಳೂರು ಸಮೀಪದ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ತನ್ನ ಇಡೀ ಪ್ರಪಂಚವನ್ನೇ ಕಳೆದುಕೊಂಡು, ಅತೀವ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ನೊಂದ ಮಹಿಳೆ ಶ್ರೀಮತಿ ಅಶ್ವಿನಿ ಅವರ ಮನೆಗೆ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಖುದ್ದಾಗಿ ಭೇಟಿ ನೀಡಿ ಸಾಂತ್ವನ ಹೇಳಿದರು. ಕರುಳು ಹಿಂಡುವ ಈ ದುರಂತದ ಬಳಿಕ ಚಿಂತಾಜನಕ ಪರಿಸ್ಥಿತಿಯಲ್ಲಿರುವ ಕುಟುಂಬಕ್ಕೆ ವೈಯಕ್ತಿಕವಾಗಿ ಹಾಗೂ ಸರ್ಕಾರದ ಮಟ್ಟದಲ್ಲಿ […]

LATEST NEWS

ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ್ ದಿವಸ್ ಸಂಸ್ಮರಣ ಕಾರ್ಯಕ್ರಮ

ಮಂಗಳೂರು, ಜೂನ್ 23: ದೇಶದ ಏಕತೆ ಮತ್ತು ಅಖಂಡತೆಗಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಮಹಾನ್ ರಾಷ್ಟ್ರಭಕ್ತ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ‘ಬಲಿದಾನ್ ದಿವಸ್’ ಸಂಸ್ಮರಣ ಕಾರ್ಯಕ್ರಮ ವು ಮಂಗಳೂರಿನ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಇಂದು ಜರುಗಿತು. ಕಾರ್ಯಕ್ರಮದ ಆರಂಭದಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಮೂಡಾದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್ ಅವರು, “ಒಂದೇ […]

LATEST NEWS

ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಚಾಲನೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅರಳ ಗ್ರಾಮಸ್ಥರ ಬಹುಕಾಲದ ಬೇಡಿಕೆಯಾಗಿದ್ದ ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ₹20 ಲಕ್ಷ ವಿಶೇಷ ಅನುದಾನ ಮಂಜೂರಾಗಿದೆ. ಈ ಮಹತ್ವದ ಕಾಮಗಾರಿಯ ಉದ್ಘಾಟನೆಯನ್ನು ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರು ನೆರವೇರಿಸಿದರು. ಗ್ರಾಮದ ಜನರ ಬಹುದಿನಗಳ ಮನವಿಗೆ ಸ್ಪಂದಿಸಿ, ಈ ರಸ್ತೆ ಅಭಿವೃದ್ಧಿಗಾಗಿ ವಿಶೇಷ ಅನುದಾನವನ್ನು ಮಂಜೂರು ಮಾಡಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ವಿಶೇಷ […]

HOME LATEST NEWS

ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು, ಜೂ.23:ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. “ಪಕ್ಷಾತೀತವಾಗಿ ಎಲ್ಲಾ ಸರ್ಕಾರಗಳ ಜನಪರ ಕಾರ್ಯಕ್ರಮಗಳ ಯಶಸ್ಸಿಗೆ ಕರೆ ನೀಡುತ್ತಿದ್ದರು. ಕರ್ನಾಟಕದಲ್ಲಿ ಇಂಧ್ರ ಧನುಷ್ ಲಸಿಕೆ ಕಾರ್ಯಕ್ರಮ ನಡೆದಾಗ ಮೊಹಲ್ಲಾಗಳಲ್ಲಿ ಇದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದ್ದರು. ಗೌರವಾನ್ವಿತ ಧಾರ್ಮಿಕ ನಾಯಕರಾಗಿ ಮುಸ್ಲಿಂ ಸಮುದಾಯದ ಏಳಿಗೆಗೆ ಸಾಕಷ್ಟು ಕೊಡುಗೆ ನೀಡಿದ್ದರು. ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಧರ್ಮದ […]

LATEST NEWS

ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ವಿಳಂಬ ಸಲ್ಲದು :- ಶಾಸಕ ಕಾಮತ್

ಮಂಗಳೂರು: ನಗರದ ಅತ್ತಾವರ ಬಾಬುಗುಡ್ಡೆ ಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸಮಾಧಿ ಬಳಿ ಪ್ರವಾಸಿ ತಾಣ, ಸಮಗ್ರ ಅಭಿವೃದ್ಧಿ ಕಾಮಗಾರಿ ಅನಗತ್ಯವಾಗಿ ವಿಳಂಬವಾಗುತ್ತಿದ್ದು, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಹಾಗೂ ಕಂದಾಯ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು, ದಲಿತೋದ್ದಾರಕ ಕುದ್ಮುಲ್ ರಂಗರಾವ್ ಅವರ ಸಮಾಧಿ ಅಭಿವೃದ್ಧಿಗಾಗಿ 2022ರ ಬಿಜೆಪಿ ಸರ್ಕಾರದ ಅವಧಿಯಲ್ಲೇ […]

HOME LATEST NEWS

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ

ವಿಟ್ಲ : ಪೆರುವಾಯಿ ಗ್ರಾಮದ ಜನರ ಜೀವಕ್ಕೆ ಸಂಚಕಾರ ತಂದೊಡ್ಡಿರುವ ಕಿರಿದಾದ ರಸ್ತೆ ಮತ್ತು ಹಳೆಯ ಸೇತುವೆಗಳ ಜಾಗದಲ್ಲಿ ಹೊಸ ಸೇತುವೆ ನಿರ್ಮಿಸುವಂತೆ ಹಾಗೂ ರಸ್ತೆಯನ್ನು ಪಿ.ಡಬ್ಲ್ಯೂ.ಡಿ (PWD) ಇಲಾಖೆಗೆ ಹಸ್ತಾಂತರಿಸುವಂತೆ ಆಗ್ರಹಿಸಿ ಜೂನ್ 22 ಪೆರುವಾಯಿ ಜಂಕ್ಷನ್‌ನಲ್ಲಿ ಸಾರ್ವಜನಿಕರು ಮತ್ತು ಪ್ರತಿಭಟನಾ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪೆರುವಾಯಿ ಜಂಕ್ಷನ್‌ನಿಂದ ಕೇವಲ 500 ಮೀಟರ್ ದೂರದಲ್ಲಿರುವ ಪೇರಡ್ಕದ ಕರ್ನಾಟಕ-ಕೇರಳ ಸಂಪರ್ಕ ಸೇತುವೆ ಮತ್ತು 150 ಮೀಟರ್ ದೂರದಲ್ಲಿರುವ ಪೆರುವಾಯಿ-ಮಾಣಿಲ ರಸ್ತೆಯ ಸೇತುವೆಗಳು ಹಲವು ದಶಕಗಳಷ್ಟು […]

LATEST NEWS

ಮಹಾನಗರ ಪಾಲಿಕೆ ವತಿಯಿಂದಲೇ ಕುದ್ಮುಲ್ ರಂಗರಾವ್ ಜಯಂತಿ ಆಚರಿಸಲು ಶಾಸಕ ವೇದವ್ಯಾಸ ಕಾಮತ್ ಸೂಚನೆ

ಮಂಗಳೂರು: ದಲಿತೋದ್ದಾರಕ ಕುದ್ಮುಲ್ ರಂಗರಾಯರ ಜಯಂತಿಯನ್ನು ಮಂಗಳೂರು ಮಹಾನಗರ ಪಾಲಿಕೆ ವತಿಯಿಂದಲೇ ಆಚರಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ದಲಿತ ಮುಖಂಡರು ಮತ್ತು ಪಾಲಿಕೆ ಅಧಿಕಾರಿಗಳ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, “ಕಳೆದ ಬಾರಿ ಪಾಲಿಕೆ ವತಿಯಿಂದ ಕುದ್ಮುಲ್ ರಂಗರಾಯರ ಜಯಂತಿ ಆಚರಿಸದಿರುವುದು ಅತ್ಯಂತ ಬೇಸರದ ಸಂಗತಿ. ಈ ಬಗ್ಗೆ ದಲಿತ ಮುಖಂಡರು ಕುಂದುಕೊರತೆ ಸಭೆಯಲ್ಲೂ ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ತಪ್ಪುಗಳು ಮುಂದೆ ಮರುಕಳಿಸಬಾರದು,” ಎಂದು ಅಧಿಕಾರಿಗಳಿಗೆ […]

HOME LATEST NEWS

ಶ್ರೀ ಕ್ಷೇತ್ರ ಕಾರಿಂಜದಲ್ಲಿ ಸಂಸದ ಕ್ಯಾ. ಚೌಟ ನೇತೃತ್ವದ ೩ನೇ ಆವೃತ್ತಿಯ ʼಯೋಗ ವಿದ್‌ ಯೋಧʼ ಕಾರ್ಯಕ್ರಮ

ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರ ಬೆಟ್ಟದ ಆವರಣದಲ್ಲಿ 3ನೇ ಆವೃತ್ತಿಯ ’ಯೋಗ ವಿದ್ ಯೋಧ’ ಬೃಹತ್ ಯೋಗಾಭ್ಯಾಸ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಪ್ರಕೃತಿ ಹಾಗೂ ದೈವಿಕತೆಯ ಮಡಿಲಲ್ಲಿ ಮನಸ್ಸನ್ನು ಶಾಂತಗೊಳಿಸಿ, ದೇಹವನ್ನು ಹತೋಟಿಗೆ ತರುವ ಈ ಅಪೂರ್ವ ಯೋಗಾಭ್ಯಾಸಕ್ಕೆ ಪ್ರಕೃತಿ ರುದ್ರ ರಮಣೀಯ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿ ಸಾಕ್ಷಿಯಾಯಿತು. ದ.ಕ. ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ನಡೆದ ಯೋಗಾಭ್ಯಾಸದಲ್ಲಿ ನೂರಾರು […]

LATEST NEWS

ರಚನಾ’ ಸಂಸ್ಥೆಯಿಂದ ಹೊಸ ಆದಾಯ ತೆರಿಗೆ ಕಾಯ್ದೆ 2025 ಕುರಿತು ಮಾಹಿತಿ ಕಾರ್ಯಾಗಾರ

ಮಂಗಳೂರು:ಕ್ಯಾಥೊಲಿಕ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಾದ ‘ರಚನಾ’ ತನ್ನ ಸದಸ್ಯರ ಮಹಾಸಭೆಯನ್ನು ಇತ್ತೀಚೆಗೆ ಬೆಂದೂರಿನ ಸೇಂಟ್ ಸೆಬಾಸ್ಟಿಯನ್ ಚರ್ಚ್ ಕಮ್ಯುನಿಟಿ ಹಾಲ್‌ನಲ್ಲಿ ಹಮ್ಮಿಕೊಂಡಿತ್ತು. ಕಾರ್ಯಕ್ರಮದಲ್ಲಿ “ಹೊಸ ಆದಾಯ ತೆರಿಗೆ ಕಾಯ್ದೆ 2025” ಕುರಿತು ವಿಶೇಷ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿದ್ದ ಮಂಗಳೂರಿನ ಆದಾಯ ತೆರಿಗೆ ಉಪ ಆಯುಕ್ತರಾದ (IRS) ಶ್ರೀ ವೈಶಾಖ್ ಪಿ.ಆರ್. ಅವರು ಮಾತನಾಡಿ, “ದೇಶದ ಪ್ರಗತಿ ಮತ್ತು ಸಾರ್ವಜನಿಕರ ಕಲ್ಯಾಣದಲ್ಲಿ ನಾವು ಕಟ್ಟುವ ತೆರಿಗೆ ಹಣ ಪ್ರಮುಖ […]

HOME LATEST NEWS

ಕಲುಷಿತ ನೀರು ಪೂರೈಕೆ ಹಿನ್ನೆಲೆ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಅಧಿಕಾರಿಗಳ ತುರ್ತು ಸಭೆ

ಮಂಗಳೂರು, ಜೂನ್.19: ಮಂಗಳೂರು ನಗರದ ಬಿಜೈ 31ನೇ ವಾರ್ಡಿನ ನೋಡು ಬಟ್ಟಗುಡ್ಡೆ ಪರಿಸರದಲ್ಲಿ ಕಲುಷಿತ ನೀರು ಪೂರೈಕೆಯಾಗಿ ಹಲವರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ, ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಸಾರ್ವಜನಿಕರ ಮತ್ತು ಪಾಲಿಕೆ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಯಿತು. ನೋಡು ಬಟ್ಟಗುಡ್ಡೆ ರಾಮಕೃಷ್ಣ ಭಜನಾ ಮಂದಿರದ ಆವರಣದಲ್ಲಿ ಈ ಸಭೆಯನ್ನು ಆಯೋಜಿಸಲಾಗಿತ್ತು. ಸ್ಥಳ ತಪಾಸಣೆ ಮತ್ತು ನೀರಿನ ಪರೀಕ್ಷೆ: ಕುಡಿಯುವ ನೀರಿಗೆ ಡ್ರೈನೇಜ್ ನೀರು ಸೇರಿರುವ ದೂರು ಬಂದ ತಕ್ಷಣ ಶಾಸಕರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ […]