Tag: canaratv news

DAKSHINA KANNADA HOME LATEST NEWS

ಬೆಳ್ತಂಗಡಿ: ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಬಂದ ಇಬ್ಬರು ಅಂದರ್‌

ಬೆಳ್ತಂಗಡಿ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ನಕಲಿ ಚಿನ್ನ ಅಡವಿರಿಸಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಪ್ರಮೋದ್ ಪಿ. (50) ಹಾಗೂ ಉಳಿ ಗ್ರಾಮದ ಅಬ್ದುಲ್ ನಝೀರ್ (43) ಬಂಧಿತರು. ಪ್ರಕರಣದ ವಿವರ; ದಿನಾಂಕ: 02.02.2026 ರಂದು ಬೆಳ್ತಂಗಡಿ ತಾಲೂಕು ಪಾರೆಂಕಿ ಗ್ರಾಮದ ಮಡಂತ್ಯಾರು ಶಾಖೆಯಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 2 ಗ್ರಾಹಕರು ಬಂದು […]

HOME LATEST NEWS NATIONAL

ತನ್ನ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಅಣ್ಣಾಮಲೈ….!

ಚೆನ್ನೈ : ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ, ಆರು ವಿಧಾನಸಭಾ ಕ್ಷೇತ್ರಗಳಿಗೆ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಆದರೆ ತನ್ನ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ, ಆರು ವಿಧಾನಸಭಾ ಕ್ಷೇತ್ರಗಳಿಗೆ ಅಣ್ಣಾಮಲೈ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಬರೀ, ಆರು ವಿಧಾನಸಭಾ ಕ್ಷೇತ್ರಗಳಿಗೆ ತಮ್ಮನ್ನು ಸೀಮಿತಗೊಳಿಸಿರುವುದು ಅವರ ಬೇಸರಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ತಂದೆ ಕೊಯಂಬತ್ತೂರಿನಲ್ಲಿ ಇದ್ದಾರೆ, ಅವರ ಆರೋಗ್ಯ ಸರಿಯಿಲ್ಲ. ಓಡಾಡಲು ಕಷ್ಟವಾಗುತ್ತದೆ ಎನ್ನುವ […]

HOME LATEST NEWS NATIONAL

ಬಾಲಿವುಡ್‌ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್‌ ನಿರ್ದೇಶಕ ಹಾಗೂ ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಮುಂಬೈನ ಜುಹುವಿನಲ್ಲಿರುವ  ಈ ಘಟನೆ ಶನಿವಾರ ರಾತ್ರಿ ನಡೆದಿದೆ. ಐದು ಸುತ್ತು ಗುಂಡು ಹಾರಿಸಲಾಗಿದೆ. ಈ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಪೊಲೀಸರು ಧೃಡಪಡಿಸಿದ್ದಾರೆ. ಸದ್ಯ ಈ  ಪ್ರಕರಣದಲ್ಲಿ ನಾಲ್ಕು ಜನರನ್ನು ಬಂಧಿಸಿದ್ದಾರೆ. ಬಂಧಿತರು ಪುಣೆಯ ನಿವಾಸಿಗಳಾಗಿದ್ದಾರೆ. ಈ ದಾಳಿಯ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಂಪರ್ಕ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ರೋಹಿತ್ […]

HOME LATEST NEWS

ಮಂಜೇಶ್ವರ: ಅಪ್ಪನಿಂದಲೇ ಮಗಳ ಕೊಲೆ ಪ್ರಕರಣ- ಮತ್ತೋರ್ವ ಸಾವು

ಮಂಜೇಶ್ವರ: ತಾಲೂಕಿನ ತೂಮಿನಾಡು ಹಿಲ್ ಟಾಪ್ ಎಂಬಲ್ಲಿ ಸೋಮವಾರ ಸಂಜೆ ನಡೆದ ಕೌಟುಂಬಿಕ ಕಲಹದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ. ಇರಿತಕ್ಕೆ ಒಳಗಾಗಿ ಮಾರಣಾಂತಿಕ ಗಾಯಗೊಂಡಿದ್ದ ಶೇಕುಂಞಿ ಎಂಬವರು ಮಂಗಳವಾರ ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮಗಳ ಜೊತೆ ಆರೋಪಿ ಫಾರೂಕ್‌ ಶೇಕುಂಞಿ ಅವರ ಪತ್ನಿಯ ಅಕ್ಕನ ಮಗಳು ಜುಮೈಲಾ (17) ಸೋಮವಾರ ಸಂಜೆ ಮೃತ ಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಇದೀಗ ಕೊನೆಯುಸಿರೆಳೆದಿದ್ದಾರೆ. ಜುಮೈಲಾ ಅವರ ತಂದೆ ಉಮರ್ ಫಾರೂಕ್ ಕೊಲೆ ಆರೋಪಿಯಾಗಿದ್ದು, ಆತನನ್ನು […]

DAKSHINA KANNADA HOME LATEST NEWS

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬೆಳ್ತಂಗಡಿ: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನು ರಹಿತ ವಾರೆಂಟ್ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಟ್ವಾಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ದ್ವೇಷ ಭಾಷಣ ಮಾಡಿದ ಆರೋಪದಡಿ ಬೆಳ್ತಂಗಡಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ, ಮಹೇಶ್ ಶೆಟ್ಟಿ ತಿಮರೋಡಿ ಅವರು ನ್ಯಾಯಾಲಯಕ್ಕೆ ಹಾಜರಾಗದೇ ಇದ್ದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಬಂಟ್ವಾಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ […]

DAKSHINA KANNADA HOME LATEST NEWS

ಎಲ್ಲಾ ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡ ಹೆಸರು ಕಡ್ಡಾಯ: ದ.ಕ.ಜಿಲ್ಲಾಧಿಕಾರಿ

ಮಂಗಳೂರು: ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು, ಹೊಟೇಲ್ ಸಹಿತ ವಾಣಿಜ್ಯ ಸಂಸ್ಥೆಗಳ ನಾಮಪಲಕಗಳಲ್ಲಿ ಹೆಸರುಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಮೂದಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್‌ವಿ ಸೂಚಿಸಿದ್ದಾರೆ. ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ದ.ಕ.ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಷರತ್ತು ವಿಧಿಸಿ ಮಂಜೂರು ಮಾಡಬೇಕು. ಈ ಬಗ್ಗೆ ಆಗ್ಗಿಂದಾಗೆ […]

HOME LATEST NEWS STATE

ಪೊಲೀಸ್‌ ಕೆಲಸಕ್ಕಿಂತ ಎಗ್‌ರೈಸ್‌ ಮಾರಿಕೊಂಡು ಬದುಕುವುದು ಉತ್ತಮ: ಪೇದೆ ಪೋಸ್ಟರ್‌ ವೈರಲ್‌

ಬೆಂಗಳೂರು: ಪೊಲೀಸ್‌ ಕೆಲಸಕ್ಕಿಂತ ಎಗ್‌ರೈಸ್‌ ಮಾರಿಕೊಂಡು ಬದುಕುವುದು ಉತ್ತಮ ಎಂದು ವಾಟ್ಸ್‌ಆ್ಯಪ್‌ ಸ್ಟೇಟಸ್ ಹಾಕಿದ್ದ ಪೊಲೀಸ್ ಪೇದೆ ಬ್ರಹ್ಮಾನಂದ ಎಂಬುವರ ಪೋಸ್ಟ್‌ ಚರ್ಚೆಗೆ ಕಾರಣವಾಗಿದೆ. ಇದು ಪೊಲೀಸ್ ಇಲಾಖೆಯ ಕೆಲಸದ ಒತ್ತಡ ಮತ್ತು ರಜೆ ರಹಿತ ದುಡಿಮೆಯ ಬಗ್ಗೆ ಕೆಲವು ಸಿಬ್ಬಂದಿ ಅಸಮಾಧಾನಗೊಂಡಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹನುಮಸಾಗರ ಪೊಲೀಸ್ ಠಾಣೆಯ ಪೇದೆ ಬ್ರಹ್ಮಾನಂದ ಎಂಬುವರು, ‘365 ದಿನವೂ ಡ್ಯೂಟಿ, ಒಂದು ದಿನವೂ ರಜೆ ಇಲ್ಲ. ಪೊಲೀಸ್ ಕರ್ತವ್ಯಕ್ಕೆ ಬರುವ ಮುನ್ನ ನೂರು ಬಾರಿ ಯೋಚಿಸಿ, ಬೇರೆ ಇಲಾಖೆಗೆ […]

DAKSHINA KANNADA HOME LATEST NEWS STATE

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ- ಹುಲ್ಲುಗಾವಲು ಭಸ್ಮ

ಬೆಳ್ತಂಗಡಿ: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿಘಾಟ್​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಗಾಳಿ ವೇಗವಾಗಿ ಬೀಸುತ್ತಿರುವುದರಿಂದ ಜ್ವಾಲೆ ಹೆಚ್ಚುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ.

DAKSHINA KANNADA HOME LATEST NEWS

ಕಡಬ: ಪೋಲ್ಯಾಂಡ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು ದಂಪತಿಯಿಂದ ₹ 5 ಲಕ್ಷ ದೋಖಾ

ಕಡಬ: ಪೋಲೆಂಡ್ ದೇಶದಲ್ಲಿ ಉದ್ಯೋಗ ವೀಸಾ ಕಲ್ಪಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 4.50 ಲಕ್ಷ ರೂ. ಹಣ ಪಡೆದು ವಂಚನೆ ನಡೆಸಿದ ಆರೋಪದಡಿ ಬೆಳ್ತಂಗಡಿ ತಾಲೂಕಿನ ದಂಪತಿ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ  ಮನೋಜ್ ಎಂಬುವವರು ವಿದೇಶದಲ್ಲಿ ಉದ್ಯೋಗ ಹುಡುಕುತ್ತಿದ್ದರು. ಈ ವೇಳೆ ಬೆಳ್ತಂಗಡಿ ತಾಲೂಕು ರೇಖ್ಯಾ ಗ್ರಾಮದ ಇಂಜಿರ ನಿವಾಸಿಗಳಾದ ಪರಂಬಿಲ್ ಜೋಸೆಫ್ ಮನೋಜ್ ಹಾಗೂ ಅವರ ಪತ್ನಿ ಸ್ಮಿತಾ ಮನೋಜ್ ಎಂಬವರ ಪರಿಚಯವಾಗಿದೆ. ಈ ವೇಳೆ “ಪೋಲೆಂಡ್ […]

DAKSHINA KANNADA HOME LATEST NEWS

ಮಂಜೇಶ್ವರ: 18ರ ಹರೆಯದ ಮಗಳನ್ನೇ ಬರ್ಬರ ಹತ್ಯೆಗೈದ ಪಾಪಿ ತಂದೆ

ಮಂಜೇಶ್ವರ: ತಂದೆಯೋರ್ವ ತನ್ನ ಮಗಳನ್ನೇ ಕೊಚ್ಚಿ ಕೊಲೆ ಗೈದ ದಾರುಣ ಘಟನೆಯೊಂದು ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ. ತೂಮಿನಾಡಿನ ಜುಮೈಲಾ(18) ಕೊಲೆಗೀಡಾದ ಯುವತಿ. ಕೃತ್ಯ ನಡೆಸಿದ ಆರೋಪದಲ್ಲಿ ತಂದೆ ಉಮ್ಮರ್ ಫಾರೂಕ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಜುಮೈಲಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಜೀವ […]