ಜನ ನನ್ನನ್ನು ಬಂಡೆ ಎಂದು ಕರೆಯುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್
ಉಡುಪಿ “ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಮಠಾಧೀಶರಾದ ಶ್ರೀ ಸುಗಣೇಂದ್ರತೀರ್ಥ ಶ್ರೀಪಾದರ 64ನೇ ಜನ್ಮನಕ್ಷತ್ರೋತ್ಸವ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾನು ಏನು ಮಾತನಾಡಿದರೂ ಅದರಲ್ಲಿ ತಪ್ಪು […]