ನಾಳೆ ಚಂದ್ರಗ್ರಹಣ: ಧರ್ಮಸ್ಥಳದಲ್ಲಿ ಪೂಜಾ ಸಮಯ ಬದಲಾವಣೆ
ಧರ್ಮಸ್ಥಳ : ಮಾರ್ಚ್ 3ಕ್ಕೆ ಚಂದ್ರಗ್ರಹಣ ಸಂಭವಿಸುತ್ತಿದ್ದು, ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಪೂಜಾ ಸಮಯ ಬದಲಾವಣೆ ಆಗಿದೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳ ದೇವರ ದರ್ಶನ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಮಾರ್ಚ್ 3 ರಂದು ಮಧ್ಯಾಹ್ನ 1:30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ಅಂದರೆ ರಾತ್ರಿ 7:30ರಿಂದ ಪುನಃ ದೇವರ ದರ್ಶನವನ್ನು ಪ್ರಾರಂಭಿಸಲಾಗುವುದು ಎಂದು […]











