Tag: canaratv

DAKSHINA KANNADA HOME LATEST NEWS STATE

ಎ.12ಕ್ಕೆ ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ರೈಲು ಸೇವೆ ಆರಂಭ

ಮಂಗಳೂರು: ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಎ.12ಕ್ಕೆ ಹೊಸ ರೈಲು ಆರಂಭಿಸಲಾಗುತ್ತಿದ್ದು, ದಿನಕ್ಕೆ 4 ಬಾರಿ ಸಂಚರಿಸಲಿದೆ ಎಂದು ಕೇಂದ್ರ ರೈಲ್ವೇ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದರು. ರೈಲಿನ ವೇಳಾಪಟ್ಟಿ: ಮಂಗಳೂರು ಸೆಂಟ್ರಲ್‌-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್‌ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ. ಸುಬ್ರಹ್ಮಣ್ಯ-ಮಂಗಳೂರು (56626) ಪ್ಯಾಸೆಂಜರ್‌ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. […]

DAKSHINA KANNADA HOME LATEST NEWS STATE

ಕಾಂಗ್ರೆಸ್ ಆಡಳಿತದಲ್ಲಿ ಮುಸ್ಲಿಂ ಓಲೈಕೆಯೇ ನಡೆಯುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಗುಜರಾತ್ ಬಳಿಕ ರಾಜ್ಯವೇ ಅಭಿವೃದ್ಧಿಯಲ್ಲಿ ಅಗ್ರಪಂಕ್ತಿಯಲ್ಲಿತ್ತು. ಆದರೆ ಸಿದ್ದರಾಮಯ್ಯ ಸರಕಾರ ಬಂದ ಬಳಿಕ ರ‍್ನಾಟಕ ಭ್ರಷ್ಟಾಚಾರದಲ್ಲಿ ನಂ.1 ಆಗಿದೆ. ಇದನ್ನು ಸಿಎಂ ಅವರ ರ‍್ಥಿಕ ಸಲಹೆಗಾರ ಬಸವರಾಯರೆಡ್ಡಿ ಅವರೇ ಹೇಳಿದ್ದಾರೆ. ಇದುವೇ ಕಾಂಗ್ರೆಸ್ನ ನಿಜವಾದ ಆಡಳಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಬಿಜೆಪಿ ನೇತೃತ್ವದಲ್ಲಿ ನಗರದ ಅಂಬೇಡ್ಕರ್‌ ವೃತ್ತದಿಂದ ಕ್ಲಾಕ್‌ ಟವರ್‌ ವರೆಗೆ ಬುಧವಾರ ಆಯೋಜಿಸಲಾದ ಜನಾಕ್ರೋಶ ಯಾತ್ರೆಯ ಪ್ರತಿಭಟನೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯ […]

DAKSHINA KANNADA HOME LATEST NEWS

ಇಂದು ಸುರತ್ಕಲ್‌, ಕೃಷ್ಣಾಪುರ ಸೇರಿ ಹಲವೆಡೆ ವಿದ್ಯುತ್‌ ನಿಲುಗಡೆ

ಮಂಗಳೂರು: ಸುರತ್ಕಲ್ ಇಂಡಸ್ಟ್ರಿಯಲ್ ಫೀಡರ್ ಹಾಗೂ ಕಾಟಿಪಳ್ಳ ಉಪಕೇಂದ್ರದ ವ್ಯಾಪ್ತಿಯ ಪ್ರದೇಶಗಳಲ್ಲಿ ಎ.10ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಸುರತ್ಕಲ್, ಕಾನ, ಕಟ್ಲ, ತಡಂಬೈಲ್, ಮುಂಚೂರು, ಮುಕ್ಕ, ಸಸಿಹಿತ್ಲು, ಚೇಳ್ಯಾರು, ಮಧ್ಯ, ಕೃಷ್ಣಾಪುರ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 4ನೇ ಬ್ಲಾಕ್, 5ನೇ ಬ್ಲಾಕ್, 6ನೇ ಬ್ಲಾಕ್, 7ನೇ ಬ್ಲಾಕ್, 8ನೇ ಬ್ಲಾಕ್, 9ನೇ ಬ್ಲಾಕ್ ಕೃಷ್ಣಾಪುರ, ಚೊಕ್ಕಬೆಟ್ಟು, ಕೋಟೆ, ಕುತ್ತೆತ್ತೂರು, ಆದರ್ಶನಗರ, ರಾಜೀವನಗರ, ಸೂರಿಂಜೆ, ಶಿಬರೂರು, ಬಾಳ, ಮಂಗಳಪೇಟೆ, ಹಾಗೂ ಸುತ್ತಮುತ್ತಲಿನಪ್ರದೇಶಗಳಲ್ಲಿ ವಿದ್ಯುತ್ […]

DAKSHINA KANNADA HOME LATEST NEWS

ಮಂಗಳೂರು: ಸಿಇಟಿ ಪರೀಕ್ಷೆ- ನಿಷೇಧಾಜ್ಞೆ ಜಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ 8 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ – 2025, ಏಪ್ರಿಲ್ 16 ಮತ್ತು 17ರಂದು ನಡೆಯಲಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಯನ್ನು ಶಾಂತಿಯುತವಾಗಿ ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ 8 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೆೀಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ. […]

HOME LATEST NEWS STATE

ಗಣಿ ಗುತ್ತಿಗೆ ನವೀಕರಣ : ಗೊಂದಲ ಸೃಷ್ಟಿಸುವ ಯತ್ನ-ಸಿಎಂ

ಬೆಂಗಳೂರು: ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳಲ್ಲಿ ಪ್ರಕಟಗೊಂಡ 8 ಗಣಿ ಕಂಪೆನಿಗಳ ಕುರಿತಾಗಿ ಪ್ರಕಟಗೊಂಡ ಸುದ್ದಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಪತ್ರಿಕಾ ಹೇಳಿಕೆ ವಿವರ ಹೀಗಿದೆ. 2015 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್‌-1957 […]

DAKSHINA KANNADA HOME LATEST NEWS STATE

ಕೇಂದ್ರವನ್ನು ಪ್ರಶ್ನಿಸುವ ತಾಕತ್ತು ಬಿಜೆಪಿಗರಿಗಿಲ್ಲ: MLC ಮಂಜುನಾಥ ಭಂಡಾರಿ

ಮಂಗಳೂರು: ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ. ಬಿಜೆಪಿ ನಾಯಕರಿಗೆ ಪ್ರತಿಭಟನೆ ಬಿಡಿ, ಕೇಂದ್ರ ನಾಯಕರ ವಿರುದ್ಧ ಉಸಿರೆತ್ತುವ ತಾಕತ್ತು ಇಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಲೇವಡಿ ಮಾಡಿದರು. ಕೇಂದ್ರ ಸರಕಾರ ಅಡುಗೆ ಸಿಲಿಂಡರ್ ದರವನ್ನು 50ರೂ. ಏರಿಕೆ ಮಾಡಿದೆ. ಭರವಸೆಗಳ ಸುರಿಮಳೆಯನ್ನೇ ಸುರಿಸಿ […]

DAKSHINA KANNADA HOME LATEST NEWS

ಎ. 11 ರಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು:   ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಎ. 11 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ  2:55 – ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:30 – ಉಳ್ಳಾಲ ದರ್ಗಾ ಆವರಣದಲ್ಲಿ  ಉಳ್ಳಾಲ ದರ್ಗಾ  ಉರೂಸ್ ಕುರಿತು ಪೂರ್ವಭಾವಿ ಸಭೆ. ಸಂಜೆ 4:30 –  ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ  ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ನೂತನ ಶವಗಾರ ಕಟ್ಟಡ,  […]

DAKSHINA KANNADA HOME LATEST NEWS

ಕರಿಮಣ ಸರ ಕಳವುಗೈದ ಪ್ರಕರಣ: ಆರೋಪಿ ಬಂಧನ

ಮಂಗಳೂರು:  ತಾಲೂಕಿನ  ಬೆಳುವಾಯಿಯಲ್ಲಿ ಮಾ.31ರಂದು ಮಹಿಳೆಯೊಬ್ಬರ ಕುತ್ತಿಗೆಯಿಂದ   ಚಿನ್ನದ ಕರಿಮಣ ಸರ ಕಳವುಗೈದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು  ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕಾಂತಾವರದ ಕಂದಿಲ ನಿವಾಸಿ  ಆರೋಪಿ ಪ್ರಶಾಂತ್ ಸಾಲಿಯನ್   ಯಾನೆ ಪಚ್ಚು (34) ಬಂಧಿತ ಆರೋಪಿ.   ಆರೋಪಿ  ಕೈಯಿಂದ ಚಿನ್ನದ ಮಾಂಗಲ್ಯ ಕರಿಮಣಿ ಸರ ಹಾಗೂ ಚಿನ್ನದ ಸರದ ಒಂದು ತುಂಡು ಸ್ವಾಧೀನಪಡಿಸಿಕೊಂಡಿದ್ದು ಹಾಗೂ ಆರೋಪಿಯು ಕೃತ್ಯಕ್ಕೆ ಬಳಸಿದ ಬೈಕನ್ನು   ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೈಯಿಂದ  ವಶಪಡಿಸಿಕೊಂಡ  ಸೊತ್ತುಗಳ ಅಂದಾಜು ಮೌಲ್ಯ ಸುಮಾರು 3,30,000 ರೂ.  ಆಗಬಹುದು […]

HOME INETRNATIONAL LATEST NEWS NATIONAL

ಭಾರತಕ್ಕೆ ಬಂದಿಳಿದ ದುಬೈ ಯುವರಾಜ: ಪ್ರಧಾನಿ ಮೋದಿ ಭೇಟಿ

ಹೊಸದಿಲ್ಲಿ: ದುಬೈನ ಯುವರಾಜ ಹಮ್ದಾನ್ ಬಿನ್ ಮುಹಮ್ಮದ್ ಬಿನ್ ರಶೀದ್ ಅಲ್ ಮಖ್ತೂಮ್ ಅವರು ಮಂಗಳವಾರ ತಮ್ಮ ಮೊದಲ ಅಧಿಕೃತ ಭೇಟಿಗಾಗಿ ಹೊಸದಿಲ್ಲಿಗೆ ಆಗಮಿಸಿದ್ದು, ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ದಿಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ದುಬೈ ಯುವರಾಜ ಮುಹಮ್ಮದ್ ಬಿನ್ ರಶೀದ್ ಅಲ್ ಮಖ್ತೂಮ್ ಅವರನ್ನು ಕೇಂದ್ರ ಪ್ರವಾಸೋದ್ಯಮ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಖಾತೆ ಸಚಿವ ಸುರೇಶ್ ಗೋಪಿ ಸ್ವಾಗತಿಸಿದರು. ಬಳಿಕ ದುಬೈ ಯುವರಾಜನಿಗೆ ವಿದ್ಯುಕ್ತವಾಗಿ ಸರಕಾರಿ ಗೌರವವನ್ನು ನೀಡಲಾಗಿದೆ.  […]

HOME LATEST NEWS STATE

PUC ಫಲಿತಾಂಶ ಪ್ರಕಟ: ಉಡುಪಿ ಪ್ರಥಮ-ವಿದ್ಯಾರ್ಥಿನಿಯರದ್ದೇ ಮೇಲುಗೈ

ಬೆಂಗಳೂರು : 2024-25ನೇ ಸಾಲಿನ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಶೇ.73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,37,805 ವಿದ್ಯಾರ್ಥಿಗಳು ಬರೆದಿದ್ದರು. ಈ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇಕಡಾ 53.29ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 76.07ರಷ್ಟು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡಾ 82.54ರಷ್ಟು ಉತ್ತೀರ್ಣರಾಗಿದ್ದಾರೆ. ಶೇಕಡಾವರು ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678