Tag: canaratv

HOME LATEST NEWS UDUPI

ಉಡುಪಿ: ಮುಸ್ಲಿಂ ಯುವಕನಿಂದ ಕ್ರೈಸ್ತ ಯುವತಿಯ ಕಿಡ್ನಾಪ್‌

ಉಡುಪಿ: ಮುಸ್ಲಿಂ ಯುವಕನೋರ್ವ ಕ್ರೈಸ್ತ ಧರ್ಮದ ಯುವತಿಯನ್ನು ಅಪಹರಿಸಿದ್ದಾನೆ ಎಂದು ಯುವತಿಯ ತಂದೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿತ ಮುಸ್ಲಿಂ ಯುವಕ ಉಡುಪಿಯ ಉಪ ನೊಂದಾವಣಿ ಕಚೇರಿಯಲ್ಲಿ ವಿಶೇಷ ವಿವಾಹದಡಿ ಅರ್ಜಿ ಸಲ್ಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬಾತ ಮಾ. 20 ರಂದು ಕಾಲೇಜಿನಿಂದ ವಾಪಾಸು ಮನೆಗೆ ತೆರಳುತ್ತಿದ್ದಾಗ ಕ್ರೈಸ್ತ ಧರ್ಮಕ್ಕೆ ಸೇರಿದ ಯುವತಿಯ ಅಪಹರಣವಾಗಿದೆ ಎಂದು ತಂದೆ ಗಾಡ್ವಿನ್ ದೇವದಾಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಇದಾದ […]

DAKSHINA KANNADA HOME LATEST NEWS

ಮಂಗಳೂರು ಸಂಸದ ಹಾಗೂ ಶಾಸಕ ಪೂಂಜಾರಿಂದ ಸಚಿವ ನಿತಿನ್ ಗಡ್ಕರಿ ಭೇಟಿ

ನವದೆಹಲಿ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ ಜತೆಗೆ ಇಂದು ನವದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿರುವ ಕ್ಯಾ. ಚೌಟ ಅವರು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿರುವ ಪ್ರಮುಖ […]

HOME LATEST NEWS STATE

BJPಯಿಂದ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಉಚ್ಛಾಟನೆ

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ಕೊನೆಗೂ ಪಕ್ಷದಿಂದ ಉಚ್ಛಾಟಿಸಿದೆ. ಯತ್ನಾಳ್‌ ಅವರು ಉಚ್ಛಾಟನೆಯಾಗುತ್ತಿರುವುದು ಇದು ಎರಡನೇ ಬಾರಿ. ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ. ಪಕ್ಷದ ಕೇಂದ್ರ […]

DAKSHINA KANNADA HOME LATEST NEWS

ಮೇ 4 ರಂದು ನೀಟ್ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 9080 ವಿದ್ಯಾರ್ಥಿಗಳು

ಮಂಗಳೂರು: ವೈದ್ಯಕೀಯ ಪದವಿ ಕೋರ್ಸುಗಳ ಪ್ರವೇಶಕ್ಕೆ ಮೇ ತಿಂಗಳಲ್ಲಿ ನಡೆಯಲಿರುವ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮಿತಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಸಭೆಯಲ್ಲಿ ಮಾತನಾಡಿ, ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಮಾತ್ರ ನೀಟ್ ಪರೀಕ್ಷಾ ಕೇಂದ್ರಗಳಿವೆ. ಮೇ 4 ರಂದು ನೀಟ್ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ತಯಾರಿಸಿ ಪರೀಕ್ಷಾ ಕೇಂದ್ರಗಳ ಕೊಠಡಿಯಲ್ಲಿ ಸಿ.ಸಿ ಕ್ಯಾಮೆರಾದ ವ್ಯವಸ್ಥೆ ಹಾಗೂ ಪೀಠೋಪಕರಣದ ವ್ಯವಸ್ಥೆಯನ್ನು ಕಾಲೇಜಿಗೆ ಭೇಟಿ […]

DAKSHINA KANNADA HOME LATEST NEWS

ಮಂಗಳೂರು: ವಾರ್ತಾ ಇಲಾಖೆಗೆ ಸಿಎಂ ಮಾಧ್ಯಮ ಸಲಹೆಗಾರರ ಭೇಟಿ

ಮಂಗಳೂರು : ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ಅವರು ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗೆ ಭೇಟಿ ನೀಡಿದರು. ಕಚೇರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಇಲಾಖಾ ಪ್ರಗತಿ ಮಾಹಿತಿ ಪಡೆದರು. ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆ ಹಾಗೂ ಪತ್ರಕರ್ತರ ಪ್ರವಾಸಕ್ಕೆ ಹೊಸ ಬಸ್ ಒದಗಿಸುವ ಬಗ್ಗೆ ಶೀಘ್ರದಲ್ಲಿ ಸರಕಾರ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಅವರು ತಿಳಿಸಿದರು. ಗ್ರಾಮಾಂತರ ಪತ್ರಕರ್ತರ ಬಸ್ ಪಾಸ್ ಹಾಗೂ ಪತ್ರಕರ್ತರ ಪಿಂಚಣಿ ಯೋಜನೆ ಕುರಿತು ಅವರು ಚರ್ಚಿಸಿದರು. ಈ ಸಂದರ್ಭದಲ್ಲಿ […]

HOME INETRNATIONAL LATEST NEWS

ಪೋಪ್ ಫ್ರಾನ್ಸಿಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್:‌ 2 ತಿಂಗಳು ವಿಶ್ರಾಂತಿ

ವ್ಯಾಟಿಕನ್‌: ತೀವ್ರ ಉಸಿರಾಟದ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಕ್ರೈಸ್ತರ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್‌ ಈಗ ಗುಣಮುಖರಾಗಿದ್ದ, 5 ವಾರಗಳ ಬಳಿಕ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾದರು. ಬಿಡುಗಡೆಗೂ ಮುನ್ನ ಕ್ಷಣ ಹೊತ್ತು ಆಸ್ಪತ್ರೆಯ ಬಾಲ್ಕನಿಯಿಂದ ನೆರೆದಿದ್ದ ಜನರಿಗೆ ಧನ್ಯವಾದ ಸಲ್ಲಿಸಿದರು. ರೋಮ್‌ನ ಆಸ್ಪತ್ರೆಯಿಂದ ಗಾಲಿ ಕುರ್ಚಿ ಸಹಾಯದಿಂದ ವಿಶೇಷ ವಾಹನಗಳ ಮೂಲಕ ಪೋಪ್‌ರನ್ನು ವ್ಯಾಟಿಕನ್‌ಗೆ ಕರೆತರಲಾಯಿತು. ಈ ವೇಳೆ ಸಾವಿರಾರು ಭಕ್ತರು ‘ಫ್ರಾನ್ಸಿಸ್‌, ಫ್ರಾನ್ಸಿಸ್‌’ ಎಂದು ಘೋಷಣೆ ಕೂಗಿದರು. ಪೋಪ್‌ ಶ್ವಾಸಕೋಶದ ಸೋಂಕು ಮತ್ತು […]

HOME LATEST NEWS STATE

ಶೀಘ್ರದಲ್ಲಿ ಮತ್ತೆ ಹಾಲಿನ ದರ ಹೆಚ್ಚಳ…!

ಬೆಂಗಳೂರು: ಹಾಲಿನ ದರ 5 ರೂ. ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಹಾಲು ಒಕ್ಕೂಟಗಳ ಜೊತೆಗಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸುದೀರ್ಘ ಸಭೆ ನಡೆಸಿದರು. ಈ ವೇಳೆ ಹಾಲಿನ ದರವನ್ನು ಲೀಟರ್​​ಗೆ 5 ರೂ. ಏರಿಕೆ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ […]

COMMUNITY NEWS LATEST NEWS

ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ 2024ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ ಕಾರ್ಯಕ್ರಮವು 23 ಮಾರ್ಚ್ 2025ರಂದು ಮೈಸೂರಿನ ʼಕೊಂಕಣ್ ಭವನʼದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ. ಹರೀಶ್ ಗೌಡರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿದರು. ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಿದ್ದಕ್ಕೆ ಮತ್ತು ಪುಸ್ತಕ ಪುರಸ್ಕೃತರು ಕನ್ನಡ ಲಿಪಿಯಲ್ಲಿ ಪುಸ್ತಕ ಬರೆದ್ದಕ್ಕೆ ಸಂತೋಷಪಟ್ಟರು. ಕೊಂಕಣಿ ಭಾಷೆಯ ಸಾಹಿತ್ಯ, ಕಲೆ ಇನ್ನು ಬೆಳೆಯಲಿ. […]

COMMUNITY NEWS LATEST NEWS

ಮಂಗಳೂರು ಧರ್ಮಪ್ರಾಂತ್ಯದ ಮೆಗಾ ಬೈಬಲ್ ಸಮ್ಮೇಳನ ಸಮರೋಪ

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಸೇವಾ ಕಮ್ಯುನಿಯನ್ (MDSC) ಮತ್ತು ಬೈಬಲ್ ಆಯೋಗವು ಮಂಗಳೂರಿನ ಕಾರ್ಡೆಲ್ ಹೋಲಿ ಕ್ರಾಸ್ ಚರ್ಚ್‌ ಮೈದಾನದಲ್ಲಿ ಆಯೋಜಿಸಿದ ನಾಲ್ಕು ದಿನದ ಮೆಗಾ ಬೈಬಲ್ ಸಮಾವೇಶವು ಫೆಬ್ರವರಿ 25 ರಂದು ತೆರೆಕಂಡಿತು. ಸರಿಸುಮಾರು 10,000 ಭಕ್ತಾದಿಗಳು ಅವರ ಕುಟುಂಬಗಳೊಂದಿಗೆ ಹಾಜರಿದ್ದು ಆಧ್ಯಾತ್ಮಿಕ ಬೆಳವಣಿಗೆ ಮತ್ತು ಸಾಮುದಾಯಿಕ ನವೀಕರಣಕ್ಕೆ ಸಾಕ್ಷಿಯಾದರು. ಕೇರಳದ ಡಿವೈನ್ ರಿಟ್ರೀಟ್ ಸೆಂಟರ್‌ನಿಂದ ರೆ.ಫಾ. ಜೋಸೆಫ್ ಎಡಟ್ಟು ವಿ.ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಈ ಸಮಾವೇಶನದಲ್ಲಿ ದೇವರ ಸ್ತುತಿ ಸ್ತೋತ್ರ, ವಿಮೋಚನೆಯ ಪ್ರಾರ್ಥನೆಗಳು, […]

COMMUNITY NEWS HOME LATEST NEWS

MLC ಐವನ್ ಡಿಸೋಜಾಗೆ ಕಥೊಲಿಕ್ ಸಭಾದಿಂದ ಅಭಿನಂದನೆ

ಮಂಗಳೂರು: ವಿಧಾನ್ ಪರಿಷತ್ ಕಲಾಪದಲ್ಲಿ ಅಲ್ಪಸಂಖ್ಯಾತರ ಪರವಾಗಿ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿದ MLC ಐವನ್ ಡಿಸೋಜಾ ಅವರನ್ನು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ವತಿಯಿಂದ ಅಭಿನಂದಿಸುವ ಕಾರ್ಯಕ್ರಮ ಮಂಗಳೂರಿನಲ್ಲಿ ಶನಿವಾರ ನಡೆಯಿತು. “ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ ವಿಧೇಯಕ” ತಿದ್ದುಪಡಿ 2025 ರಲ್ಲಿ ಪ್ರವರ್ಗ-2ಬಿ ನಲ್ಲಿ – ಕರ್ನಾಟಕ ಸರಕಾರವು, ತನ್ನ ನಿರ್ಮಾಣದ ಕೆಲಸ ಕಾರ್ಯಗಳಿಗೆ ಕಾಂಟ್ರಾಕ್ಟ್ ಗಳನ್ನು ನೀಡುವಾಗ ಅದರಲ್ಲಿನ 4% ಕಾಂಟ್ರಾಕ್ಟ್ ಗಳನ್ನು ಅಲ್ಪಸಂಖ್ಯಾತ ವರ್ಗದವರಿಗೆ ಮೀಸಲಾತಿಯನ್ನು ನೀಡಬೇಕು ಎಂಬ ಹೊಸ ಪ್ರಸ್ತಾವನೆಯನ್ನು […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678