Tag: canaratv

LATEST NEWS

*ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ*

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು. ಈ ವೇಳೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ತಮ್ಮ ಭಾಗದ ಸಮಸ್ಯೆ, ಬೇಡಿಕೆಗಳು ಮತ್ತು ಅಹವಾಲುಗಳನ್ನು ಸಂಸದರ ಗಮನಕ್ಕೆ ತಂದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಸಂಸದರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಲ್ಲದೇ ಸಾರ್ವಜನಿಕ ಭೇಟಿ ವೇಳೆ ವಿವಿಧ […]

COMMUNITY NEWS

ಮಂಗಳೂರು ಮಿಲಾಗ್ರೇಸ್ ಚರ್ಚ್‌ನ ನೂತನ ಧರ್ಮಗುರುಗಳಾಗಿ ವಂ| ಐವನ್ ಮೈಕಲ್ ರೊಡ್ರಿಗಸ್ ಅಧಿಕಾರ ಸ್ವೀಕಾರ

ಮಂಗಳೂರು: ಪ್ರಸಿದ್ಧ ಮಿಲಾಗ್ರೇಸ್ ಚರ್ಚ್‌ನ ನೂತನ ಧರ್ಮಗುರುಗಳಾಗಿ (Parish Priest) ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಮಂಗಳವಾರ ಮೇ 19,ಸಂಜೆ ಅಧಿಕಾರ ಸ್ವೀಕರಿಸಿದರು. ವಿಟ್ಲ ಚರ್ಚ್‌ನಿಂದ ಆಗಮಿಸಿದ ಅವರಿಗೆ ಮಿಲಾಗ್ರೇಸ್ ಧರ್ಮಕೇಂದ್ರದ ವತಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು. ಸಂಜೆ 4:00 ಗಂಟೆಗೆ ನಡೆದ ಈ ಪದಗ್ರಹಣ ಮತ್ತು ಸ್ವಾಗತ ಸಮಾರಂಭದಲ್ಲಿ ಮಂಗಳೂರು ಬಿಷಪರ ಪ್ರತಿನಿಧಿಯಾಗಿ ವಂ| ಫಾದರ್ ವಲೇರಿಯನ್ ಡಿಸೋಜಾ ಉಪಸ್ಥಿತರಿದ್ದರು. ಸಮಾರಂಭದಲ್ಲಿ 14 ಕ್ಕೂ ಹೆಚ್ಚು ಧರ್ಮಗುರುಗಳು, ವಿವಿಧ ಕಾನ್ವೆಂಟ್‌ಗಳ ಧರ್ಮಭಗಿನಿಯರು ಹಾಗೂ ಅಪಾರ […]

COMMUNITY NEWS

ಬೊರಿಮಾರು ಚರ್ಚ್ ಹಾಗೂ ICYM ಘಟಕದ ಕುರಿತಾದ ಸುಳ್ಳು ಸುದ್ದಿಗಳಿಗೆ ಫಾದರ್ ಪ್ಯಾಟ್ರಿಕ್ ಸಿಕ್ವೇರಾ ಸ್ಪಷ್ಟನೆ

ಬಂಟ್ವಾಳ: ಸಂತ ಜೋಸೆಫ್ ಚರ್ಚ್ ಬೊರಿಮಾರು ಹಾಗೂ ಐ.ಸಿ.ವೈ.ಎಂ. (ICYM) ಬೊರಿಮಾರು ಘಟಕದ ಕುರಿತು ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಸತ್ಯಾಸತ್ಯತೆಯಿಲ್ಲದ ಮತ್ತು ದಾರಿತಪ್ಪಿಸುವ ಸುದ್ದಿಗಳು ಪ್ರಕಟವಾಗುತ್ತಿದ್ದು, ಈ ಕುರಿತು ಸಾರ್ವಜನಿಕರಿಗೆ ನೈಜ ಸಂಗತಿಯನ್ನು ತಿಳಿಸಲು ಈ ಮಾಧ್ಯಮ ಸ್ಪಷ್ಟನೆ ನೀಡಲಾಗುತ್ತಿದೆ. ಇತ್ತೀಚೆಗೆ ನಡೆದ ಬೊರಿಮಾರು ಐ.ಸಿ.ವೈ.ಎಂ. ಘಟಕದ ಚುನಾವಣೆಯು ಕೇಂದ್ರೀಯ ಸಮಿತಿಯ ನಿಯಮಾವಳಿಗಳಿಗೆ ಅನುಸಾರವಾಗಿ ಅತ್ಯಂತ ಪಾರದರ್ಶಕ ಮತ್ತು ವ್ಯವಸ್ಥಿತವಾಗಿ ನಡೆದಿದೆ. ಈ ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಅನಿಯಮಿತತೆಗಳು ಸಂಭವಿಸಿಲ್ಲ. ಚರ್ಚಿನ ಅಭಿವೃದ್ಧಿ […]

LATEST NEWS

*ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ*

ಮಂಗಳೂರು: ಮಂಗಳೂರು ನಗರದ ಹೊರವಲಯದ ಪ್ರಮುಖ ಹೆದ್ದಾರಿ ಜಂಕ್ಷನ್‌ಗಳಾದ ಬೈಕಂಪಾಡಿ ಮತ್ತು ಕೂಳೂರು ಬಳಿ ಸುಗಮ ಸಂಚಾರ ಹಾಗೂ ಅಪಘಾತ ಮುಕ್ತ ವಲಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವದ ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ರಾ. ಹೆ. 66ರಲ್ಲಿ ಬರುವ ಈ ಎರಡು ಪ್ರಮುಖ ಜಂಕ್ಷನ್‌ನಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಅಂಡರ್‌ಪಾಸ್ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು […]

LATEST NEWS

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜನ್ಮದಿನ: ಜೆಡಿಎಸ್‌ನಿಂದ ರಕ್ತದಾನ ಶಿಬಿರ

ಮಂಗಳೂರು: ಮಾಜಿ ಪ್ರಧಾನಮಂತ್ರಿ, ಜನತಾದಳ (ಜಾತ್ಯತೀತ) ಪಕ್ಷದ ಹಿರಿಯ ನಾಯಕ ಹಾಗೂ ದೇಶದ ಹಿರಿಯ ರಾಜಕಾರಣಿಗಳಾದ ಶ್ರೀ ಎಚ್.ಡಿ. ದೇವೇಗೌಡರವರ ಜನ್ಮದಿನದ ಅಂಗವಾಗಿ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಂಗಳೂರಿನ ಲೇಡಿಗೋಷನ್ ಸಮೀಪದ ರೆಡ್ ಕ್ರಾಸ್ ರಕ್ತ ನಿಧಿ ಕೇಂದ್ರದಲ್ಲಿ ಅರ್ಥಪೂರ್ಣ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ದೇವೇಗೌಡರವರ ಜನ್ಮದಿನವನ್ನು ಆಚರಿಸುವ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಯುವಕರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವನ್ನು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ […]

LATEST NEWS

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬ: ನಿರಾಶ್ರಿತರಿಗೆ ಊಟ ಹಂಚಿದ ಯುವ ಜನತಾದಳ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ವತಿಯಿಂದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬವನ್ನು ನಗರದ ನಿರಾಶ್ರಿತರಿಗೆ ಊಟ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಅಕ್ಷಿತ್ ಸುವರ್ಣ, “ದೇಶದ 11ನೇ ಪ್ರಧಾನಿಯಾಗಿ ಹೆಚ್.ಡಿ. ದೇವೇಗೌಡರು ಮಾಡಿದ ಅಭಿವೃದ್ಧಿ ಕಾರ್ಯಗಳು ಸದಾ ಸ್ಮರಣೀಯ. ಮಹಿಳಾ ಮೀಸಲಾತಿ, ಕಾಶ್ಮೀರ ಸಮಸ್ಯೆ ಪರಿಹಾರ, ರೈತರಿಗೆ ರಸಗೊಬ್ಬರ […]

COMMUNITY NEWS

ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ವರು ಕಾರ್ಮೆಲೈಟ್ ಡೀಕನ್‌ಗಳಿಗೆ ಪವಿತ್ರ ಗುರುದೀಕ್ಷೆ

ಮಂಗಳೂರು, ಮೇ 15: ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಮೇ 14 ನಡೆದ ಭವ್ಯ ಸಮಾರಂಭದಲ್ಲಿ ನಾಲ್ವರು ಡಿಸ್ಕಾಲ್ಡ್ ಕಾರ್ಮೆಲೈಟ್ ಡೀಕನ್‌ಗಳಿಗೆ ಪವಿತ್ರ ಗುರುದೀಕ್ಷೆ ನೀಡಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ವಂ. ಆಲ್ವಿನ್ ಡಿಸೋಜಾ, ವಂ. ಲೋಯ್ ಜಾಕ್ಸನ್ ಕ್ರಾಸ್ತಾ, ವಂ. ಎಲ್ಸ್ಟನ್ ಮೊಂತೇರೊ ಮತ್ತು ವಂ. ಹಿಲರಿ ರೊಡ್ರಿಗಸ್ ಅವರಿಗೆ ಪವಿತ್ರ ದೀಕ್ಷೆ ಅನುಗ್ರಹಿಸಿದರು. ಈ ಸಂದರ್ಭದಲ್ಲಿ ಪ್ರವಚನ ನೀಡಿದ ಬಿಷಪ್ ಡಾ. ಪೀಟರ್ ಪೌಲ್ […]

DAKSHINA KANNADA HOME LATEST NEWS NATIONAL

Breaking: ಪೆಟ್ರೋಲ್ – ಡೀಸೆಲ್ ಬೆಲೆ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂಧನ ಮಿತ ಬಳಕೆ ಹಾಗೂ ಚಿನ್ನ ಖರೀದಿ ನಿಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದ ಬೆನ್ನಲ್ಲೇ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ರಾಜ್ಯದಲ್ಲಿ ಪೆಟ್ರೋಲ್ ದರ ಲೀಟರ್​​ಗೆ 3.27 ರೂಪಾಯಿ ಏರಿಕೆಯಾಗಿದ್ದು, ಡಿಸೇಲ್ ಬೆಲೆ ಲೀಟರ್​​ಗೆ 3.12 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ ಪೆಟ್ರೋಲ್ ಬೆಲೆ 102.90 […]

DAKSHINA KANNADA HOME LATEST NEWS

ವಿಟ್ಲ ಸುತ್ತಮುತ್ತ ಹಾರಾಡಿದ 2 ಪ್ಯಾಸೆಂಜರ್ ವಿಮಾನ: ಸ್ಥಳೀಯರಲ್ಲಿ ಆತಂಕ

ವಿಟ್ಲ: ಬಂಟ್ವಾಳ ತಾಲೂಕಿನ ಕಲ್ಲಡ್ಕ, ವಿಟ್ಲ ಸೇರಿದಂತೆ ಹಲವೆಡೆ ಸಂಜೆಯ ವೇಳೆಗೆ ಎರಡು ವಿಮಾನಗಳು ಕೆಳಮಟ್ಟದಲ್ಲಿ ಹಾರಾಡುತ್ತಿದ್ದುದು ಸ್ಥಳೀಯರಿಗೆ ಕೌತುಕದ ಜೊತೆಗೆ ಆತಂಕ ಸೃಷ್ಟಿ ಮಾಡಿತ್ತು. ಸದ್ಯ ಈ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಿಂದ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಮಂಗಳೂರಿನಾದ್ಯಂತ ಹವಾಮಾನ ವೈಪರಿತ್ಯದಿಂದ ಲ್ಯಾಂಡ್‌ ಆಗಿರಲಿಲ್ಲ. ಈ ಹಿನ್ನೆಲೆ ಬಂಟ್ವಾಳ, ಕಲ್ಲಡ್ಕ, ವಿಟ್ಲ ಆಸುಪಾಸಿನಲ್ಲಿ ಕಾಣಿಸಿಕೊಂಡಿತ್ತು. ಈ ಬಗ್ಗೆ ವಿಮಾನ ನಿಲ್ಧಾಣದ ಸಾರ್ವಜನಿಕ ಸಂಪರ್ಕಾಧಿಕಾರಿ ಸ್ಪಷ್ಟನೆ ನೀಡಿ ಎರಡೂ ವಿಮಾನಗಳು […]

HOME LATEST NEWS

ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಶ್ರೀ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ದೂರದೃಷ್ಟಿಯ ಸೇವೆಯನ್ನು ಸ್ಮರಿಸಲಾಯಿತು ಹಾಗೂ ಸಹಕಾರಿ ಕ್ಷೇತ್ರದಲ್ಲಿ ಬ್ಯಾಂಕ್ ಸಾಧಿಸಿರುವ ನಿರಂತರ ಪ್ರಗತಿ ಹಾಗೂ ಸ್ಥೈರ್ಯವನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ಮಂಗಳೂರು ಇದರ ಉಪಕುಲಪತಿ ರೆವ್. ಡಾ. ಪ್ರವೀಣ್ ಮಾರ್ಟಿಸ್ […]