Tag: canaratv

DAKSHINA KANNADA HOME LATEST NEWS

ಮಂಗಳೂರು:  ಆ. 31ರಂದು ಕಲ್ಲಚ್ಚು ಪ್ರಶಸ್ತಿ ಪ್ರದಾನ

ಮಂಗಳೂರು:  ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಬೆಳ್ಳಿ ಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ” ಕಲ್ಲಚ್ಚು ಪ್ರಕಾಶನದ” 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಅಗಸ್ಟ್ 31 ಭಾನುವಾರ ಸಂಜೆ 4.00 ಗಂಟೆಗೆ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಲಿದೆ. ಈಗಾಗಲೇ ಕರ್ನಾಟಕದ ಪಂಚ ಸಾಧಕರಾದ ಡಾ. ಎಸ್ ಎಮ್ ಶಿವಪ್ರಕಾಶ್, ಜಬೀವುಲ್ಲಾ ಎಂ […]

DAKSHINA KANNADA HOME LATEST NEWS

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಶುಭಾರಂಭ

ಮಂಗಳೂರು : ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ.   ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ ಕಾಂಪ್ಲೆಕ್ಸ್ ಚರ್ಚ್ ರೋಡ್ ಹತ್ತಿರ ಬೆಳ್ತಂಗಡಿ ಇಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು […]

DAKSHINA KANNADA HOME

ರಿಕ್ಷಾ ಚಾಲಕರ ಜೊತೆ ಸಮಾಲೋಚಿಸದೆ ಸಿಟಿ ಬಸ್ ಗೆ ಚಾಲನೆ ಬೇಡ: ಅಶೋಕ್ ರೈ

ಪುತ್ತೂರು: ಪುತ್ತೂರು ನಗರದ ರಿಕ್ಷಾ ಚಾಲಕ ಮಾಲಕರ ಎಲ್ಲಾ ಸಂಘದವರ ಜೊತೆ ಸಮಾಲೋಚನೆ ಮಾಡಿ, ಅವರನ್ನು ಕರೆಸಿ ಮಾತುಕತೆ ನಡೆಸಿದ ಬಳಿಕವೇ ಪುತ್ತೂರು ನಗರದಲ್ಲಿ ಸಿಟಿ ಬಸ್ ಗೆ ಚಾಲನೆ ನೀಡಬೇಕು ಎಂದು ಶಾಸಕರಾದ ಅಶೋಕ್ ರೈ ಅವರು ಕರ್ನಾಟಕ ಸಾರಿಗೆ ನಿಗಮದ ಡಿ ಸಿ ಅಮಲಿಂಗಯ್ಯ ಹೊಸಪೂಜಾರಿಯವರಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಶಾಸಕರ ಕಚೇರಿಯಲ್ಲಿ ಅಧಿಕಾರಿ ಜೊತೆ ಚರ್ಚೆ ನಡೆಸಿದ ಶಾಸಕರು ಪುತ್ತೂರು ಕೆಎಸ್ ಆರ್ ಟಿಸಿ ವಿಭಾಗದಲ್ಲಿ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಚರ್ಚೆ […]

DAKSHINA KANNADA HOME LATEST NEWS

ಮಂಗಳೂರು: ಟ್ರಾಫಿಕ್‌ ಫೈನ್‌ ಮೇಲೆ 50% ರಿಯಾಯಿತಿ- ಸೆ.12ರವರೆಗೆ ಮಾತ್ರ

ಮಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದ ವಾಹನಿಗರಿಗೆ ಪ್ರಕರಣಗಳ ಇತ್ಯರ್ಥ ಪಡಿಸಿಕೊಳ್ಳುವುದಕ್ಕಾಗಿ ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಸಲು ಆ.23ರಿಂದ ಸೆ.12ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಬಳಿ (ಎಎಸ್‌ಐ-ಪಿಐ ಡಿವೈಸ್) ಲಾಲ್‌ಬಾಗ್‌ನಲ್ಲಿರುವ ಮನಪಾ ಕಮಾಂಡ್ ಕಂಟ್ರೋಲ್ ಸೆಂಟರ್‌ಗಳಲ್ಲಿ ಪಾವತಿಸಬಹುದು. ಉಳಿದಂತೆ ಕದ್ರಿಯ ಪೂರ್ವ ಸಂಚಾರ ಠಾಣೆ, ಪಾಂಡೇಶ್ವರದ ಪಶ್ಚಿಮ ಸಂಚಾರ ಠಾಣೆ, ಬೈಕಂಪಾಡಿಯ ಮಂಗಳೂರು ಉತ್ತರ ಠಾಣೆ, ಜಪ್ಪಿನಮೊಗರಿನ ದಕ್ಷಿಣ ಸಂಚಾರ ಠಾಣೆ […]

DAKSHINA KANNADA LATEST NEWS

ಲಕ್ಕಿ ಸ್ಕೀಂ- 13 ಸಾವಿರ ಮಂದಿಗೆ 15 ಕೋ.ರೂ ವಂಚನೆ: ನಾಲ್ವರ ಬಂಧನ

ಮಂಗಳೂರು: ಸುರತ್ಕಲ್‌ ವ್ಯಾಪ್ತಿಯಲ್ಲಿ ಲಕ್ಕಿ ಸ್ಕೀಮ್‌ಗಳ ಮೂಲಕ ಗ್ರಾಹಕರಿಗೆ ನಾನಾ ರೀತಿಯ ಬಹುಮಾನಗಳ ಆಮಿಷ ತೋರಿಸಿ 15ಸಾವಿರ ಮಂದಿಗೆ 15ಕೋಟಿ ರೂ.ಗೂ ಮಿಕ್ಕಿ ಹಣ ಸಂಗ್ರಹ ಮಾಡಿ ಬಳಿಕ ವಂಚನೆಗೈದ ಪ್ರತ್ಯೇಕ ಎರಡು ಪ್ರಕರಣದಲ್ಲಿ ನಾಲ್ವರನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ನ್ಯೂ ಶೈನ್‌ ಎಂಟರ್‌ ಪ್ರೈಸಸ್‌ ಎಂಬ ಲಕ್ಕಿ ಸ್ಕೀಮ್‌ನಲ್ಲಿವಂಚನೆ ಮಾಡಿದ್ದ ಕಾಟಿಪಳ್ಳ ಒಂದನೇ ಬ್ಲಾಕ್‌ನ ಮಹಾಕಾಳಿ ದೈವಸ್ಥಾನದ ಬಳಿಯ ನಿವಾಸಿ ಅಹಮ್ಮದ್‌ ಖುರೇಶಿ (34), ಕಾಟಿಪಳ್ಳ ಎರಡನೇ ಬ್ಲಾಕ್‌ನ ಕೋರ್ದಬ್ಬು ದ್ವಾರದ ನಝೀರ್‌ ನಾಸೀರ್‌ (39) ಹಾಗೂ […]

DAKSHINA KANNADA HOME LATEST NEWS

ಕಡಬ: ಮಗ ಚಲಾಯಿಸುತ್ತಿದ್ದ ಜೀಪು ತಂದೆಯ ಮೇಲೆ ಮಗುಚಿ ಬಿದ್ದು ಸಾವು

ಕಡಬ: ಮಗ ಚಲಾಯಿಸುತ್ತಿದ್ದ ಜೀಪು ತಂದೆಯ ಮೇಲೆಯೇ ಮಗುಚಿ ಬಿದ್ದ ಪರಿಣಾಮ ತಂದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಡಬ ತಾಲೂಕಿನ  ಬಿಳಿನೆಲೆ ಗ್ರಾಮದಲ್ಲಿ ಆ.7 ರಂದು ನಡೆದಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಕಡಬ ತಾಲೂಕಿನ  ಬಿಳಿನೆಲೆ ಗ್ರಾಮದ ಕಚ್ಚಾ ಮಣ್ಣಿನ ಏರು ರಸ್ತೆಯಲ್ಲಿ ದಿನೇಶ್ ಎಂಬುವವರು ಕೆಎ- 19-ಎಂ-8745 ನೋಂದಣಿಯ ಜೀಪು ಚಲಾಯಿಸುತ್ತಿದ್ದಾಗ ಹತ್ತದೇ ಅರ್ಧದಲ್ಲಿ ನಿಂತಿದೆ. ಆಗ ಜೀಪಲ್ಲಿ ಇದ್ದ ಅವರ ದಿನೇಶ್  ಅವರ ತಂದೆ ಧರ್ಮಪಾಲ […]

DAKSHINA KANNADA HOME LATEST NEWS

ಮಂಗಳೂರು: 7 ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ

ಮಂಗಳೂರು: ತನ್ನ 7 ತಿಂಗಳ ಮಗುವಿನೊಂದಿಗೆ ತಾಯಿಯು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ವಿವರ ಸೆಲ್ವಿನ್‌ ಮಾಚಾದೋ ಅವರು ಇಂಟೀರಿಯರ್ ಡೆಕೊರೇಟರ್ ಆಗಿ ಕೆಲಸ ಮಾಡಿಕೊಂಡಿದ್ದು, ಕಳೆದೆರಡು ವರ್ಷಗಳಿಂದ   ಹೆಂಡತಿ ಬೆಲಿಂಡ ರೋಡ್ರಿಗಸ್ (30) ಮತ್ತು 7 ತಿಂಗಳ ಮಗ ಬ್ರೂಸ್ ಮಚಾಡೋ ಎಂಬುವವರ ಜೊತೆ ನಗರದ ಸೂಟರ್ ಪೇಟೆಯಲ್ಲಿ  ವಾಸವಾಗಿದ್ದರು. ಆ.7 ರಂದು ಸೆಲ್ವಿನ್‌ ಮಾಚಾದೋ ಕೆಲಸ ನಿಮಿತ್ತ ಹೊರಹೋಗಿದ್ದರು. ಅದೇ ದಿನ ಸಂಜೆ 7 ಗಂಟೆಗೆ ಮನೆಗೆ […]

DAKSHINA KANNADA HOME LATEST NEWS

ಸ್ನೇಹಿತರೊಂದಿಗೆ ಮಂಗಳೂರಿಗೆ ಹೋಗಿ ಬರುತ್ತೇನೆಂದ 23ರ ಯುವತಿ ನಾಪತ್ತೆ

ಮಂಗಳೂರು: 23 ವರ್ಷದ ಯುವತಿಯೋರ್ವಳು ಸ್ನೇಹಿತೆಯರೊಂದಿಗೆ ಮಂಗಳೂರು ಪೇಟೆಗೆ ಹೋಗಿ ತಿರುಗಾಡಿ ಬರುತ್ತೇನೆಂದು ಹೇಳಿ ಮನೆಯಿಂದ ಹೋದವಳು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖೈರುನ್ನಿಸ ಮಹಮ್ಮದ್ ನಾಸೀರ ಎಂಬುವವರ ಮಗಳಾದ ಶಾಹಿನ ಬಾನು  ಆ.7 ರಂದು ನಾನು ಸ್ನೇಹಿತೆಯರೊಂದಿಗೆ ಮಂಗಳೂರು ಪೇಟೆಗೆ ಹೋಗಿ ತಿರುಗಾಡಿ ಬರುತ್ತೇನೆಂದು ಹೇಳಿ ಮನೆಯಿಂದ ಹೊರಗೆ ಹೋಗಿದ್ದಾರೆ. ತಡರಾತ್ರಿಯಾದರೂ ಮನೆಗೆ ಬಾರದೆ ಇರುವುದರಿಂದ, ಗಾಬರಿಗೊಂಡ ಮನೆಯವರು ನೆರೆಕರೆ ಮನೆಯವರಲ್ಲಿ ವಿಚಾರಿಸಿ ಸುತ್ತ ಮುತ್ತ ಪ್ರದೇಶಗಳಲ್ಲಿ ಹುಡುಕಾಡಿದರೂ ಆಕೆಯ ಬಗ್ಗೆ […]

DAKSHINA KANNADA HOME LATEST NEWS

ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ದಾನ ಕಚೇರಿಗಳಲ್ಲಿ ಶೋಧ

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನ ಮತ್ತಿತರರ ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರೆಕ್ಟೊರೇಟ್ ಆಫ್ ಎನ್‌ಫೋರ್ಸ್‌ಮೆಂಟ್ ಮಂಗಳೂರು ಸಬ್ ರೆನಲ್ ಕಚೇರಿಯು ಹಣ ವರ್ಗಾವಣೆ ತಡೆ ಕಾಯ್ದೆಯಡಿ ನಗರದ 5 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ನೆಪದಲ್ಲಿ ಅನೇಕ ಉದ್ಯಮಿಗಳಿಂದ ಸ್ಟಾಂಪ್ ಟ್ಯೂಟಿಗಾಗಿ ಹಣ ವಸೂಲಿ ಮಾಡಿ, ಭರವಸೆ ನೀಡಿದ ಸಾಲಗಳನ್ನು ನೀಡದೆ ವಂಚನೆ ಮಾಡಿದ ರೋಶನ್ ಸಲ್ದಾನ, ಆತನ ಪತ್ನಿ ಡಫ್ನಿ ನೀತು ಡಿಸೋಜ ಮತ್ತಿತರರ ವಿರುದ್ಧ ಕಾನೂನು […]

DAKSHINA KANNADA HOME LATEST NEWS

ಫೇಸ್‌ಬುಕ್‌ನಲ್ಲಿ ಕೋಮುದ್ವೇಷ & ಸುಳ್ಳು ಸುದ್ದಿ ಪ್ರಸಾರ: SDPI ಅಧ್ಯಕ್ಷನ ಮೇಲೆ FIR

ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕೋಮುದ್ವೇಷ ಹಾಗೂ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಪಕ್ಷದ ಅಧ್ಯಕ್ಷನ ಮೇಲೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ವಿವರ ಜು. 14 ರಂದು ಪುತ್ತೂರು ಕಸಬಾ ಗ್ರಾಮದ ಬೊಳುವಾರು ಎಂಬಲ್ಲಿ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಧ್ಯಕ್ಷ ಆಶ್ರಪ್ ಬಾವು ಎಂಬಾತ ಘಟನೆಯ ಬಗ್ಗೆ, ನೈಜತೆಯನ್ನು ಪರಿಶೀಲಿಸದೇ […]