ಮೇ 4 ರಂದು ನೀಟ್ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 9080 ವಿದ್ಯಾರ್ಥಿಗಳು
ಮಂಗಳೂರು: ವೈದ್ಯಕೀಯ ಪದವಿ ಕೋರ್ಸುಗಳ ಪ್ರವೇಶಕ್ಕೆ ಮೇ ತಿಂಗಳಲ್ಲಿ ನಡೆಯಲಿರುವ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮಿತಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಸಭೆಯಲ್ಲಿ ಮಾತನಾಡಿ, ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಮಾತ್ರ ನೀಟ್ ಪರೀಕ್ಷಾ ಕೇಂದ್ರಗಳಿವೆ. ಮೇ 4 ರಂದು ನೀಟ್ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ತಯಾರಿಸಿ ಪರೀಕ್ಷಾ ಕೇಂದ್ರಗಳ ಕೊಠಡಿಯಲ್ಲಿ ಸಿ.ಸಿ ಕ್ಯಾಮೆರಾದ ವ್ಯವಸ್ಥೆ ಹಾಗೂ ಪೀಠೋಪಕರಣದ ವ್ಯವಸ್ಥೆಯನ್ನು ಕಾಲೇಜಿಗೆ ಭೇಟಿ […]