Tag: canaratv

DAKSHINA KANNADA HOME LATEST NEWS

ಶಬರಿಮಲೆ ಅಯ್ಯಪ್ಪ ಸ್ವಾಮಿ ಚಿನ್ನ ಕಳವು ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಅವರಿಗೆ ಕೇರಳದ ಕೊಲ್ಲಂನಲ್ಲಿರುವ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಕಾನೂನಿನ ಪ್ರಕಾರ 90 ದಿನಗಳ ಅವಧಿಯೊಳಗೆ ವಿಶೇಷ ತನಿಖಾ ತಂಡ ಆರೋಪಪಟ್ಟಿ ಸಲ್ಲಿಸಲು ವಿಫಲವಾದುದನ್ನು ಗಮನಿಸಿದ ವಿಚಾರಣಾ ಆಯುಕ್ತ ಮತ್ತು ವಿಶೇಷ ನ್ಯಾಯಾಧೀಶ ಮೋಹಿತ್‌ ಸಿ ಎಸ್‌ ಅವರು ಆರೋಪಿಗೆ ಕಾನೂನುಬದ್ಧ ಜಾಮೀನು ಪಡೆಯುವ ಹಕ್ಕು ದೊರೆತಿದೆ ಎಂದು ತಿಳಿಸಿದರು. ಶಬರಿಮಲೆ ದೇವಸ್ಥಾನದ ಗರ್ಭಗುಡಿಯ ಬಾಗಿಲುಗಳ ಚೌಕಟ್ಟಿಗೆ ಅಳವಡಿಸಿದ್ದ ಚಿನ್ನದ ರೇಕು […]

DAKSHINA KANNADA HOME LATEST NEWS

ನೇಪಾಳದಲ್ಲಿ ಕುಳಿತು Investment fraud ಮೂಲಕ ವಂಚಿಸುತ್ತಿದ್ದವರ ಬಂಧನ

ಮಂಗಳೂರು: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಉತ್ತರ ಭಾರತ ಮೂಲದ 11 ಮಂದಿಯನ್ನು ಮಂಗಳೂರು ಸೆನ್ ಕೈಂ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಬಂಧಿತರನ್ನು ಗುಜರಾತ್‌ನ ಮಕವನ್ ವಿಕ್ರಂ (25), ಪಶ್ಚಿಮ ಬಂಗಾಳದ ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ಜಾರ್ಖಂಡ್‌ನ ಪುಪ್ಲ ಶಿವಕುಮಾರ್ ರಾವ್ (32) ಮತ್ತು ರಾಜೇಶ್ ಮಂಡನ್ (30), ಮಿಥುನ್ ಕುಮಾರ್ ಮಂಗರಾಜ್ (38), ಉತ್ತರ ಪ್ರದೇಶದ ಗೌರವ್ ಪಾಂಡೆ (24) ಮತ್ತು […]

DAKSHINA KANNADA HOME LATEST NEWS

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಬೆಳ್ತಂಗಡಿಯ 60ರ ವೃದ್ಧನಿಗೆ 3 ವರ್ಷ ಕಠಿಣ ಸಜೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 60 ವರ್ಷದ ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತಗತಿ (ಪೊಕ್ಸೊ) ನ್ಯಾಯಾಲಯ–1 ಮೂರು ವರ್ಷಗಳ ಕಠಿಣ ಸಜೆ ವಿಧಿಸಿದೆ. ಈ ಪ್ರಕರಣದ ಸಂತ್ರಸ್ತೆಗೆ ₹2 ಲಕ್ಷ ಪರಿಹಾರ ನೀಡಬೇಕು ಎಂದೂ ನ್ಯಾಯಾಧೀಶರಾದ ಮೋಹನ ಜೆ.ಎಸ್‌ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಅಪರಾಧಿಯನ್ನು ಶಂಕರ ಗೌಡ (60) ಎಂದು ಗುರುತಿಸಲಾಗಿದೆ. ಪ್ರಕರಣದ ಹಿನ್ನೆಲೆ ಶಂಕರ ಗೌಡ 2025ರ ಮಾ 21ರಂದು 16 ವರ್ಷದ ಬಾಲಕಿ ಮನೆಯಲ್ಲಿ ಒಬ್ಬಳೇ ಇರುವುದನ್ನು […]

DAKSHINA KANNADA HOME LATEST NEWS

ಬೆಳ್ತಂಗಡಿ: ಸುಮಂತ್‌ ಪ್ರಕರಣ- ಪೊಲೀಸ್‌ ವರಿಷ್ಠಾಧಿಕಾರಿಯಿಂದ ಅಧಿಕೃತ ಸ್ಪಷ್ಟನೆ

ಮಂಗಳೂರು:  ಜ.14 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದಲ್ಲಿ ಬಾಲಕ ಸುಮಂತ್‌ ನಾಪತ್ತೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಧಿಕೃತ ಮಾಹಿತಿ ನೀಡಿದ್ದಾರೆ. ಈ ಹಿಂದೆ ಸುಮಂತ್‌ ಮೃತ್ಯುವಿನ ಕಾರಣ ಮುಳುಗು (drowning) ಆಗಿದೆ. ಆದರೆ ತಲೆಯಲ್ಲಿದ್ದ ಗಾಯದಿಂದ ಸಂಶಯ ಉಂಟಾದ ಕಾರಣ ಪ್ರಕರಣವನ್ನು ಸಂಪೂರ್ಣ ಹಾಗೂ ಸಮಗ್ರವಾಗಿ ತನಿಖೆ ನಡೆಸುವ ಉದ್ದೇಶದಿಂದ ಹತ್ಯೆ (murder) ಕಲಂನ್ನು ಸೇರಿಸಲಾಗಿದೆ. ವೈದ್ಯಕೀಯ ನ್ಯಾಯವಿಜ್ಞಾನ (Forensic) ಹಾಗೂ ಅಂತಿಮ […]

DAKSHINA KANNADA HOME LATEST NEWS

ನಂತೂರಿನಲ್ಲಿ ಅಪಘಾತ ಪ್ರಕರಣ: ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ದ FIR- ಕಮೀಷನರ್‌

ಮಂಗಳೂರು: ನಗರದ ನಂತೂರಿನಲ್ಲಿ ಬಸ್ಸು ಚಾಲಕನ ಬೇಜವಾಬ್ದಾರಿಯಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಗರ ಖಾಸಗಿ ಬಸ್ಸುಗಳ ಓಡಾಟದ ಧಾವಂತಕ್ಕೆ ಒಂದು ಜೀವ ಹೋಗಿದೆ. ಆರೋಪಿ ಬಸ್ಸು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಸಿ ಆರೋಪಿಗೆ ಶಿಕ್ಷೆ ಆಗುತ್ತಿದೆ ಎಂದರು. ಇನ್ನು ಮೃತಳ ಪಾರ್ಥೀವ ಶರೀರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವುದು ಸರಿಯಲ್ಲ. ಎಲ್ಲವೂ ಕಾನೂನುಬದ್ಧವಾಗಿಯೇ ಆಗುತ್ತದೆ. ನಿರ್ಲಕ್ಷ್ಯಕ್ಕೆ ಏನು ಶಿಕ್ಷೆ […]

HOME

ಫೆ.8 ರಂದು ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ Walk-in to Vidvath” A step into success

ಬೆಳ್ತಂಗಡಿ: ಪ್ರಸಕ್ತ ಶೈಕ್ಷಣಿಕ ವಿದ್ಯಮಾನದಲ್ಲಿ ಶಿಕ್ಷಣ ಕೇವಲ ಪದವಿಗೆ ಮಾತ್ರ ಸೀಮಿತವಾಗಿಲ್ಲ. ಜಗತ್ತು ಪ್ರತಿಭಾನ್ವೇಷಣೆಯಲ್ಲಿದೆ. ಈ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಮಕ್ಕಳು ವೃತ್ತಿಪರ ಕ್ಷೇತ್ರದಲ್ಲಿ ಮುನ್ನಡೆಯಲು ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಬಹಳ ಮಹತ್ವಪೂರ್ಣವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲೇ ಇದೇ ಮೊದಲ ಬಾರಿಗೆ ಎಂಬಂತೆ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನದ ಕಾರ್ಯಕ್ರಮವನ್ನು ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಿಂದ Walk-in to VIDVATH, A step into success […]

HOME STATE

“ಫೇಸ್‌ಬುಕ್‌ ಪೋಸ್ಟ್‌ಗಾಗಿ ಹಲ್ಲೆ ಮಾಡುವುದು ಸರಿಯಲ್ಲ” ಪುನೀತ್‌ ಕೆರೆಹಳ್ಳಿ ವಿರುದ್ಧ ಹೈ ಕಿಡಿ

ಬೆಂಗಳೂರು: “ರೀಲ್ಸ್‌ ಮತ್ತು ಫೇಸ್‌ಬುಕ್‌ ಪೋಸ್ಟ್‌ಗಾಗಿ ಹಲ್ಲೆ ಮಾಡುವುದು ಅಥವಾ ಪೊಲೀಸರನ್ನು ನಿಂದಿಸುವುದು ಸರಿಯಲ್ಲ” ಎಂದು ಪುನೀತ್‌ ಕೆರೆಹಳ್ಳಿಯ ವಿರುದ್ಧ ಕಿಡಿಕಾರಿರುವ ಕರ್ನಾಟಕ ಹೈಕೋರ್ಟ್‌, ಅವರ ವಿರುದ್ಧದ  ಆರೋಪ ಪಟ್ಟಿಗೆ ತಡೆ ನೀಡಿದೆ. ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಸಂಬಂಧ ಬೆಂಗಳೂರಿನ ಚನ್ನಮ್ಮನ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ರದ್ದತಿ ಕೋರಿ ಪುನೀತ್‌ ಕೆರೆಹಳ್ಳಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಪಿ ಎನ್‌ ಮನಮೋಹನ್‌ […]

DAKSHINA KANNADA HOME LATEST NEWS

ನಾಳೆ ಪುತ್ತೂರಿಗೆ ಡಿ.ಕೆ. ಶಿವಕುಮಾರ್: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಫೆ.6ರಂದು ದ.ಕ. ಜಿಲ್ಲೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 1:40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಪರಾಹ್ನ 3:30ಕ್ಕೆ ಪುತ್ತೂರು ತಾಲೂಕಿನ ಕಾಂಚನ ಬಜತ್ತೂರು ಶ್ರೀಲಕ್ಷ್ಮಿ ನಾರಾಯಣ ಸಂಗೀತ ಕಲಾ ಶಾಲೆ ವತಿಯಿಂದ ಆಯೋಜಿಸಿರುವ ನೂತನ ಸಂಗೀತ ಕಲಾ ಶಾಲೆ, ಸಭಾಭವನ ಹಾಗೂ ಭೋಜನ ಶಾಲೆಯ ಲೋಕಾರ್ಪಣೆ ಹಾಗೂ 72ನೇ ವಷರ್ದ ಕಾಂಚನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 6ಕ್ಕೆ ಪುತ್ತೂರು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ನಗರದಲ್ಲಿ ವಾಸ್ತವ್ಯ […]

DAKSHINA KANNADA HOME LATEST NEWS

ಉಪ್ಪಿನಂಗಡಿ: 20ರ ಹರೆಯದ ಯುವತಿ ನಾಪತ್ತೆ

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬಾಕೆ ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದವಳು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಫೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಹತ್ತನೇ ತರಗತಿಯ […]

DAKSHINA KANNADA HOME LATEST NEWS

ಪುತ್ತೂರು: ಕಂಟೈನರ್ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ

ಪುತ್ತೂರು: ಗೇರು ಬೀಜ ಸಾಗಣೆ ಕಂಟೈನರ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಪುತ್ತೂರು ತಾಲ್ಲೂಕಿನ ಮಾಡ್ನೂರು ಗ್ರಾಮದ ಕಾವು ಬುಶ್ರಾ ವಿದ್ಯಾಸಂಸ್ಥೆಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನಿರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ‍ಪಡೆಯುತ್ತಿದ್ದಾರೆ. ಪುತ್ತೂರು ಕಡೆಯಿಂದ ಮೈಸೂರು ಕಡೆಗೆ ಗೇರು ಬೀಜದ ಮೂಟೆಗಳನ್ನು ಒಯ್ಯುತ್ತಿದ್ದ ಲಾರಿಯು ಪಿಕಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸುವ ಯತ್ನದಲ್ಲಿ ಹತೋಟಿ ಕಳೆದುಕೊಂಡು ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ […]