Tag: canaratvnews

DAKSHINA KANNADA HOME LATEST NEWS

ಉಳ್ಳಾಲದಲ್ಲಿ ಯುವತಿಯ ಗ್ಯಾಂಗ್‌ರೇ*ಪ್‌ ಆರೋಪ: ಮೂವರ ಬಂಧನ

ಮಂಗಳೂರು: ನಗರ ಹೊರವಲಯದ ಉಳ್ಳಾಲದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.   ಬಂಧಿತ ಪ್ರಭುರಾಜ್ ಹಾಗೂ ಮಿಥುನ್ ಬಂಧಿತರನ್ನು ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ ಮತ್ತು ಕುಂಪಲದ ಮಿಥುನ್(30) ಬಂಧಿತ ಆರೋಪಿಗಳು. ಇವರು ಮೂವರು ಸ್ನೇಹಿತರಾಗಿದ್ದು, ಮೂಲ್ಕಿ ಮೂಲದ ಪ್ರಭುರಾಜ್ ಆಟೋ ಚಾಲಕನಾಗಿದ್ದು, ಉಳ್ಳಾಲ ಕುಂಪಲದ ಮಿಥುನ್ ಎಲೆಕ್ಟ್ರೀಷಿಯನ್‌ ಆಗಿ ವೃತ್ತಿ […]

DAKSHINA KANNADA LATEST NEWS

ರೋಹನ್ ಕಾರ್ಪೊರೇಶನ್‌ನ Rohan Ethosಗೆ ಎ. 19 ರಂದು ಭೂಮಿಪೂಜೆ

ಮಂಗಳೂರು: ಅತ್ಯುತ್ತಮ ಗುಣಮಟ್ಟ ಮತ್ತು ಸೇವಾ ಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಏ. 19ರಂದು ಸಂಜೆ 5 ಗಂಟೆಗೆ ನಗರದ ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 1640 ರಿಂದ […]

DAKSHINA KANNADA HOME LATEST NEWS

ಪವಿತ್ರ ಗುರುವಾರ ಹಿನ್ನೆಲೆ: 12 ಶಿಷ್ಯರ ಪಾದ ತೊಳೆದ ಬಿಷಪ್‌, ಪಾದ್ರಿಗಳು

ಮಂಗಳೂರು: ಕ್ರಿಶ್ಚಿಯನ್‌ರು ಇಂದು ವಿಶ್ವದಾದ್ಯಂತ ಪವಿತ್ರ ಗುರುವಾರವನ್ನು ಆಚರಿಸಿ, ಯೇಸು ಕ್ರಿಸ್ತರ ಕೊನೆಯ ಭೋಜನದ ದಿನವನ್ನು ಸ್ಮರಿಸಿದರು. ಅದೇ ರೀತಿ ಕರಾವಳಿಯ ಎಲ್ಲಾ ಚರ್ಚುಗಳಲ್ಲಿ ಗುರುವಾರ ಸಂಜೆ  ವಿಶೇಷ ಬಲಿಪೂಜೆ ಮತ್ತು ಪ್ರಾರ್ಥನೆಗಳು ನಡೆದವು. ಮಂಗಳೂರಿನ ರೊಸಾರೀಯೋ ಚರ್ಚ್‌ನಲ್ಲಿ ಯೇಸುಕ್ರಿಸ್ತ ತನ್ನ12  ಶಿಷ್ಯರ  ಪಾದ ತೊಳೆದ ಸಂಕೇತವನ್ನು ನೆರವೇರಿಸಿದ ಬಿಷಪ್‌ ಅ. ವಂ.ಪೀಟರ್‌ ಪಾವ್ಲ್‌ ಸಲ್ಡಾನ ನಗರದ ರೊಸಾರಿಯೋ ಚರ್ಚ್‌ನಲ್ಲಿ ಧರ್ಮಾಧ್ಯಕ್ಷ ಮಂಗಳೂರು ಬಿಷಪ್‌ ಅ. ವಂ.ಪೀಟರ್‌ ಪಾವ್ಲ್‌ ಸಲ್ಡಾನ, ಬಲಿಪೂಜೆ ನೆರವೇರಿಸಿದರು. ಇದೇ ವೇಳೆ ಯೇಸು […]

DAKSHINA KANNADA HOME LATEST NEWS

ರೈತರಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

ಮಂಗಳೂರು : ರೈತರಿಗೆ ಪ್ರೋತ್ಸಾಹಧನ ನೀಡಲು ತೋಟಗಾರಿಕೆ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನಿಷ್ಠ ಅರ್ಧ ಎಕರೆಯಿಂದ 5 ಎಕರೆವರೆಗೆ ಕಾಳುಮೆಣಸು, ಕೋಕೊ, ಗೇರು, ತಾಳೆಬೆಳೆ, ರಾಂಬೂಟಾನ್, ಡ್ರಾಗನ್ ಫ್ರೂಟ್, ಮ್ಯಾಂಗೋಸ್ಟಿನ್, ತೆಂಗಿನ ತೋಟದಲ್ಲಿ ಅಂತರ ಬೆಳೆಯಾಗಿ ದಾಲ್ಚಿನ್ನಿ(ಚಕ್ಕೆ) ಬೆಳೆಗಳ ಪ್ರದೇಶ ವಿಸ್ತರಣೆಗೆ (ಹೊಸ ತೋಟ) ಶೇ 40ರ ಸಹಾಯಧನ, ಕಾಳುಮೆಣಸು ಪುನಶ್ಚೇತನಕ್ಕೆ ಶೇ 50 ಸಹಾಯಧನ, ನೀರು ಸಂಗ್ರಹಣಾ ಘಟಕಗಳ ಸ್ಥಾಪನೆಗೆ ಸಹಾಯಧನ, ಜೇನು ಸಾಕಾಣಿಕೆ ಯೋಜನೆಯಡಿ ಜೇನುಪೆಟ್ಟಿಗೆ ಹಾಗೂ ಜೇನು ಕುಟುಂಬ ಖರೀದಿಗೆ ಶೇ 75 […]

DAKSHINA KANNADA LATEST NEWS

ಮಂಗಳೂರು: ಪಿ.ಎ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮಂಗಳೂರು: ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ಏ.15 ರಂದು ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಬ್ಲಡ್ ಡೊನೇಶನ್ ಕ್ಯಾಂಪ್ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಿತು‌. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ದ.ಕ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ವೈದ್ಯಕೀಯ ಅಧಿಕಾರಿಗಳಾದ  ಡಾ. ಸುಖೇಶ್ ಮಾತನಾಡಿ “ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ  ಆದರೂ ಅದು ಇನ್ನೊಂದು ಜೀವ ಉಳಿಸುವುದಲ್ಲದೆ […]

DAKSHINA KANNADA LATEST NEWS

ಜಿಲ್ಲಾಧಿಕಾರಿಗೆ ತಾವೇ ಬೆಳೆದ ತರಕಾರಿ ನೀಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ತಾವು ತಮ್ಮ ಶಾಲೆಯ ಆವರಣದಲ್ಲಿ  ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು  ಶಾಲೆಯಲ್ಲಿ ಮಕ್ಕಳು  ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು. ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ […]

HOME LATEST NEWS STATE

ನಾವು ಯುವ ನಿಧಿ ಜೊತೆಗೆ ಕೌಶಲ್ಯ ಮತ್ತು ಉದ್ಯೋಗವನ್ನು ಸೃಷ್ಟಿಸಿ ಬದುಕು ರೂಪಿಸುತ್ತಿದ್ದೇವೆ: ಸಿಎಂ

ಕಲ್ಬುರ್ಗಿ ಏ 16: ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಕೊಡದೆ ಪರಮ ಸುಳ್ಳು ಹೇಳಿ ಯುವ ಜನರನ್ನು ವಂಚಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧನ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಯುವಕ ಯುವತಿಯರಿಗೆ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಯುವ ಪದವೀಧರರಿಗೆ ನೇಮಕಾತಿ ಪತ್ರವನ್ನು ವಿತರಿಸಿ ಮಾತನಾಡಿದರು. ಆದರೆ, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ […]

DAKSHINA KANNADA HOME LATEST NEWS

ಬಿಜೆಪಿಯಲ್ಲಿ ಭ್ರಷ್ಟರನ್ನು ಸ್ವಚ್ಛಗೊಳಿಸುವ ವಾಶಿಂಗ್ ಮೆಷನ್ ಇದೆ: ರಮಾನಾಥ ರೈ

ಮಂಗಳೂರು, ಎ. 17: ಕೇಂದ್ರ ಸರಕಾರ ಇ.ಡಿ. ಸಂಸ್ಥೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ವಿರೋಧ ಪಕ್ಷದವರ ವಿರುದ್ಧ ಮಾತ್ರವೇ ಇಡಿ ಪ್ರಯೋಗಿಸುತ್ತಿದೆ. ವಿಪಕ್ಷಗಳನ್ನು ದುರ್ಬಳಗೊಳಿಸಲು ಮೋದಿ ಸರಕಾರ ಯತ್ನಿಸುತ್ತಿದೆ. ಇಡಿ ದಾಳಿಯೊಳಗಾದವರು ಬಿಜೆಪಿ ಸೇರಿದರೆ ಅವರು ಕ್ಲೀನ್ ಆಗುತ್ತಾರೆ. ಬಿಜೆಪಿ ಬಳಿ ಭ್ರಷ್ಟರನ್ನು ಕ್ಲೀನ್ ಮಾಡುವ ವಾಶಿಂಗ್ ಮೆ‌ಷನ್ ಇದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ವಾಗ್ದಾಳಿ ನಡಿಸಿದ್ದಾರೆ. ಬುಧವಾರ ಮಂಗಳೂರಿನ ಯೆಯ್ಯಾಡಿ ಬಳಿ ಇರುವ ಜಾರಿ ನಿರ್ದೇಶನಾಲಯ(ಇಡಿ)ದ ಬಳಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. […]

DAKSHINA KANNADA HOME LATEST NEWS

ಪುತ್ತೂರು ಜಾತ್ರೆ ಪ್ರಯುಕ್ತ-ಸಂಚಾರ ಮಾರ್ಗ ಬದಲಾವಣೆ

ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರದ ಆಗಮನದ ದಿನ ಮತ್ತು ಎಪ್ರಿಲ್ 17 ರಂದು ಬ್ರಹ್ಮರಥೋತ್ಸವ ನಡೆಯಲಿರುವುದರಿಂದ ಎಪ್ರಿಲ್ 16 ಮತ್ತು 17 ರಂದು ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ. ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ […]

DAKSHINA KANNADA HOME LATEST NEWS

ಕದ್ರಿ ಮಂಜುನಾಥೇಶ್ವರ ಆಡಳಿತ ಮಂಡಳಿಯ ನೂತನ ಸದಸ್ಯರಿಗೆ ಶಾಸಕ ಐವನ್ ಡಿ’ಸೋಜಾರಿಂದ ಸನ್ಮಾನ

ಮಂಗಳೂರು: ದೇವರ ಸೇವೆ ಮಾಡುವ ಅವಕಾಶ ಪಡೆದಿರುವ ಟ್ರಸ್ಟಿಗಳು ಸಮಾಜದ ಎಲ್ಲಾ ವರ್ಗಗಳ ಸೇವೆಗಳಿಗೆ ಬದ್ದರಾಗಿದ್ದು, ಸಾಮಾಜಿಕ ಸೇವೆ ಬದ್ಧತೆಯಿಂದ ಮಾಡುವುದರ ಮೂಲಕ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಶಕ್ತಿ ಬರಲಿ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರು ತಮ್ಮ ಮಹಾನಗರ ಪಾಲಿಕೆ ಕಛೇರಿಯಲ್ಲಿ ಕದ್ರಿ ಮಂಜುನಾಥೇಶ್ವರ ದೇವರ ಆಡಳಿತ ಮಂಡಳಿಗೆ ನೂತನವಾಗಿ ನೇಮಕಗೊಂಡ ಸದಸ್ಯರನ್ನು ಸನ್ಮಾನಿಸಿ ಶುಭ ಹಾರೈಸಿದರು. ಇದೇ ವೇಳೆ ಮಾತನಾಡಿದ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ದೇವರಾಜ್ ಕೆ. ದೇವರ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678