ಬಿಜೆಪಿ ಮಂ.ದಕ್ಷಿಣದ ಎಸ್ ಸಿ ಮೋರ್ಚಾ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಸಂಸದರಾದ ಕ್ಯಾ. ಬ್ರಿಜೇಶ್ ಚೌಟರವರು ಪ್ರಸ್ತಾವಿಕ ಮಾತುಗಳನ್ನಾಡಿ, ಎಲ್ಲರನ್ನೊಳಗೊಂಡ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ಬಾಬಾ ಸಾಹೇಬರ ಆದರ್ಶವನ್ನು […]