Tag: canartv

DAKSHINA KANNADA HOME LATEST NEWS STATE

ಬೆಳ್ತಂಗಡಿ: NIA ಜೊತೆ ಕರ್ತವ್ಯ ನಿರ್ವಹಿಸಿದ್ದ ಪೊಲೀಸ್ ಹೆಡ್ ಕಾನ್ಟೇಬಲ್‌ಗೆ ಮುಖ್ಯಮಂತ್ರಿ ಪದಕ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ ಇವರಿಗೆ ಈ ಭಾರಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು, ಎಪ್ರಿಲ್ 2 ರಂದು ಕರ್ನಾಟಕ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ ಅಣ್ಣು ದೇವಾಡಿಗ ಮತ್ತು ಬೇಬಿ ದೇವಾಡಿಗರ ಪ್ರಥಮ ಪುತ್ರ […]

DAKSHINA KANNADA HOME LATEST NEWS

ಮಂಗಳೂರು: ಅಡಿಕೆ ವ್ಯಾಪಾರಿಯಿಂದ 29 ಲಕ್ಷ ರೂ. ವಂಚನೆ

ಮಂಗಳೂರು: ಅಡಿಕೆ ವ್ಯಾಪಾರಿಯೊಬ್ಬ ಸಹಕಾರಿ ಸಂಘವೊಂದಕ್ಕೆ 29 ಲಕ್ಷ ರೂ. ಮೋಸ ಮಾಡಿದ ಬಗ್ಗೆ ಮಂಗಳೂರು ನಗರ ಹೊರವಲಯದ ಪಣಂಬೂರು  ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಬೈಕಂಪಾಡಿಯಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ಅಗ್ರಿಕಲ್ಚರಿಸ್ಟ್ಸ್ ಸಹಕಾರಿ ಸಂಘ ಸಂಸ್ಥೆಯು ಮಂಗಳೂರು ಮತ್ತು ಇತರ ಕಡೆಗಳಲ್ಲಿ ಅಡಿಕೆ ಖರೀದಿ ಮತ್ತು ಮಾರಾಟ ವ್ಯವಹಾರ ನಡೆಸುತ್ತಿದೆ. ಆರೋಪಿ ಸತ್ಯನಾರಾಯಣ ರಾಮಚಂದ್ರ ಭಟ್‌ (55) ಎಂಬಾತ ಗುಜರಾತ್‌ನ ಅಹಮದಾಬಾದ್ ನಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, 2009ರಲ್ಲಿ ಮಂಗಳೂರು ಅಗ್ರಿಕಲ್ಚರಿಸ್ಟ್ಸ್ ಸಹಕಾರಿ ಸಂಘದಿಂದ ಆರೋಪಿಯು […]

DAKSHINA KANNADA HOME LATEST NEWS

ಎ.5 ರಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದ.ಕ ಜಿಲ್ಲಾ ಪ್ರವಾಸ

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಪ್ರಿಲ್ 5 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಎಪ್ರಿಲ್ 5 ರಂದು ಬೆಳಿಗ್ಗೆ 6:55 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ, ಬೆಳಿಗ್ಗೆ 7:40 ಗಂಟೆಗೆ ಸಕ್ರ್ಯೂಟ್ ಹೌಸ್, 9:30- ನಗರದ ಕೊಡಿಯಾಲ್‍ಬೈಲ್ ಜೈಲ್ ರಸ್ತೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಮತ್ತು ಪಶುರೋಗ ತಪಾಸಣೆ ಮತ್ತು ಮಾಹಿತಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ, 10 – ದಕ್ಷಿಣ ಕನ್ನಡ […]

HOME LATEST NEWS UDUPI

ಕ್ರಿಶ್ಚಿಯನ್ ಯುವತಿ & ಮುಸ್ಲಿಂ ಯುವಕನ ಪ್ರೇಮ ಪ್ರಕರಣಕ್ಕೆ ಬಜರಂಗದಳ ಎಂಟ್ರಿ

ಮಂಗಳೂರು: ಉಡುಪಿಯಲ್ಲಿ ನಡೆದ ಕ್ರಿಶ್ಚಿಯನ್ ಯುವತಿ ಮತ್ತು ಮುಸ್ಲಿಂ ಯುವಕನ ಪ್ರೇಮ ಪ್ರಕರಣಕ್ಕೆ ಇದೀಗ ಹಿಂದೂ ಸಂಘಟನೆಗಳು ಎಂಟ್ರಿ ನೀಡಿವೆ. ಈ ಹೋರಾಟಕ್ಕೆ ಧುಮುಕಿದ ಬಜರಂಗದಳ ಇದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿಸಿದ್ದಾರೆ. ಜೊತೆಗೆ ಈ ಬಗ್ಗೆ ಉನ್ನತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಭಜರಂಗದಳದ ಮುಖಂಡ ಸುನಿಲ್ ಕೆ ಆರ್ ಅವರು ಪ್ರತಿಕ್ರಿಯೆ ನೀಡಿ, ವಿಶ್ವ ಹಿಂದೂ ಪರಿಷತ್ ಲವ್ ಜಿಹಾದ್ ಬಗ್ಗೆ ಜಾಗೃತಿ ಕೆಲಸ ಮಾಡುತ್ತಿದೆ.  ಆದರೆ ಜಿಹಾದಿಗಳು ತಮ್ಮ ಕೃತ್ಯ […]

DAKSHINA KANNADA HOME LATEST NEWS

“ಮಸೀದಿ, ಮದರಸ, ಖಬರಸ್ತಾನ, ದೋಚಲು ಬಿಡುವುದಿಲ್ಲ” ವಕ್ಫ್‌ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ SDPI ಬೃಹತ್‌ ಪ್ರತಿಭಟನೆ

ಮಂಗಳೂರು: ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ, ಎಸ್‌ಡಿಪಿಐ ಜಿಲ್ಲಾ ಘಟಕದ ನೇತೃತ್ವದಲ್ಲಿ ಬುಧವಾರ ಮಂಗಳೂರಿನ ಕ್ಲಾಕ್‌ ಟವರ್‌ ಬಳಿ ಬೃಹತ್‌ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, “ಮಸೀದಿ, ಮದರಸ, ಖಬರಸ್ತಾನ, ದೋಚಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ಈ ಮಸೂದೆ ಹಿಂಪಡೆಯುವವರೆಗೂ ಹೋರಾಟ ಮುಂದುವರಿಯುತ್ತದೆ. ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಐದು ತಿಂಗಳುಗಳಲ್ಲಿ ನಾಲ್ಕು ಪ್ರತಿಭಟನೆ ನಡೆಸಲಾಗಿದೆ. ಎಸ್‌ಡಿಪಿಐ, ಜಾತ್ಯತೀತ ಸಂಘಟನೆಗಳಿಗೆ ಆಕ್ಷೇಪ ವ್ಯಕ್ತಪಡಿಸಲು […]

HOME LATEST NEWS NATIONAL

ಮಹಾತ್ಮ ಗಾಂಧಿಯವರ ಮರಿಮೊಮ್ಮಗಳು ನಿಧನ

ನವದೆಹಲಿ: ಮಹಾತ್ಮ ಗಾಂದಿಯವರ ಮರಿ ಮೊಮ್ಮಗಳು ನೀಲಂಬೆನ್ ಪಾರಿಖ್ ಅವರು ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ನೀಲಂಬೆನ್  ಮಹಾತ್ಮ ಗಾಂಧಿಯವರ ಪುತ್ರ ಹರಿದಾಸ್ ಗಾಂಧಿಯವರ ಮೊಮ್ಮಗಳು. ಅವರು ನವಸಾರಿ ಜಿಲ್ಲೆಯ ಅಲ್ಕಾ ಸೊಸೈಟಿಯಲ್ಲಿರುವ ತಮ್ಮ ಮಗ ಡಾ. ಸಮೀರ್ ಪಾರಿಖ್ ಅವರ ಮನೆಯಲ್ಲಿ ವಾಸಿಸುತ್ತಿದ್ದರು. ಜನವರಿ 30, 2008 ರಂದು ಮಹಾತ್ಮ ಗಾಂಧಿಯವರ 60 ನೇ ಪುಣ್ಯತಿಥಿಯಂದು, ನೀಲಂಬೆನ್ ಪಾರಿಖ್ ಅವರು ಬಾಪು ಅವರ ಕೊನೆಯ ಚಿತಾಭಸ್ಮವನ್ನು ಗೌರವಯುತವಾಗಿ ವಿಸರ್ಜಿಸಿದರು. ಈ ಸಂದರ್ಭದಲ್ಲಿ ಗಾಂಧೀಜಿಯವರ ಅನುಯಾಯಿಗಳು […]

DAKSHINA KANNADA HISTORY LATEST NEWS

ಮಂಗಳೂರು: 80 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು: ಮನೆಯೊಂದರ ಕಿಟಕಿ ಬಾಗಿಲು ಮುರಿದು ಅಪಾರ ಮೌಲ್ಯದ ಚಿನ್ನಾಭರಣ ಕಳವು ಗೈದಿರುವ ಪ್ರಕರಣ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮುದೆಯಲ್ಲಿ ಮಂಗಳವಾರ ವರದಿಯಾಗಿದೆ. ಪೆರ್ಮುದೆ ನಿವಾಸಿ ಪ್ರವೀಣ್ ಪಿಂಟೊ ಎಂಬವರ ಮನೆಯಲ್ಲಿ ಈ ಕಳವು ನಡೆದಿದೆ. ಕಳ್ಳರು ಸುಮಾರು 1.080 ಕೆ.ಜಿಯ ಸುಮಾರು 80 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು ಗೈದಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಮಾಲಕ ಪ್ರವೀಣ್ ಪಿಂಟೊ ಅವರು ಕುಟುಂಬ ಸಮೇತರಾಗಿ ಮಸ್ಕತ್ ನಲ್ಲಿದ್ದು, ಮಾ.31ರ ರಾತ್ರಿಯಿಂದ ಎ.1ರ ಬೆಳಗ್ಗೆ ಈ […]

DAKSHINA KANNADA HOME LATEST NEWS

ಸುಳ್ಯ: ನಿಯಂತ್ರಣ ತಪ್ಪಿ ಮನೆ ಮಹಡಿ ಮೇಲೆ ಬಿದ್ದ ಕಾರು

ಸುಳ್ಯ: ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಮನೆ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡ ಘಟನೆ ಭಾನುವಾರ ಸುಳ್ಯದಲ್ಲಿ ನಡೆದಿದೆ. ನಿತ್ಯಾನಂದ ಮುಂಡೋಡಿ ಎಂಬುವವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ಹೊರಟಿದ್ದರು. ಚಿರೆಕಲ್‍ನ ಮನೆಯಿಂದ ಮುಖ್ಯರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋದಾಗ ಕಾರಿಗೆ ಬ್ರೇಕ್ ಹಾಕಿದಾಗ ಬ್ರೇಕ್‍ನ ಅಡಿಗೆ ನೀರಿನ ಬಾಟಲ್ ಸಿಲುಕಿ ಬ್ರೇಕ್ ಸಿಗದ ಕಾರಣ ನಿಯಂತ್ರಣ ತಪ್ಪಿ ರಸ್ತೆಯ ಕೆಳಭಾಗದಲ್ಲಿದ್ದ ಸೀತಮ್ಮ ಚಿರೆಕಲ್ಲು ಎಂಬವರ ಮನೆಯ ಮೇಲೆ ಬಿದ್ದಿದೆ. […]

HOME STATE

ಹಾಲಿನ ದರ ಪ್ರತಿ ಲೀ.ಗೆ ₹4 ಏರಿಕೆ: ಸಚಿವ ಸಂಪುಟದ ಅನುಮೋದನೆ

ಬೆಂಗಳೂರು: ಗ್ರಾಹಕರಿಗೆ ನಂದಿನ ಹಾಲಿನ ಬೆಲೆಏರಿಕೆ ಬಿಸಿ ತಟ್ಟಿದ್ದು,  ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು ನಡೆದ  ಸಚಿವ ಸಂಪುಟದಲ್ಲಿ ಹಾಲು ಒಕ್ಕೂಟಗಳ ಮನವಿಗೆ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನ ದರ ಏರಿಕೆ ಮಾಡಿದಂತಾಗಿದೆ. ಇದೇ ಫೆಬ್ರವರಿಯಲ್ಲಿ ಪ್ರತಿ ಲೀಟರ್​ಗೆ  2 ರೂ ಏರಿಕೆ ಮಾಡಲಾಗಿತ್ತು. ಇದೀಗ ಲೀಟರ್​ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡಲಾಗಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ […]

HOME LATEST NEWS STATE

ಮಾರ್ಚ್‌ 31ರ ನಂತರ ಗೃಹಲಕ್ಷ್ಮಿ ಹಣ ಬಿಡುಗಡೆ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಾರ್ಚ್‌ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಗೃಹಲಕ್ಷ್ಮಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ರೂ.2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ರೂ.1,000, ಸಹಾಯಕಿಯರ ಗೌರವಧನವನ್ನು ರೂ.750 ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678