Tag: canartvnews

HOME LATEST NEWS STATE

Uber, Rapido ಸೇರಿದಂತೆ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ನಿಲ್ಲಿಸುವಂತೆ ಹೈಕೋರ್ಟ್‌ ಆದೇಶ

ಬೆಂಗಳೂರು: ಉಬರ್, ರ್ಯಾಪಿಡೋ ಸಹಿತ ಹಲವು ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಹೀಗಾಗಿ ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವಂತೆ ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಆರು ವಾರಗಳ ಕಾಲಾವಕಾಶ ನೀಡಿ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದ್ದು, 3 ತಿಂಗಳಿನಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಮೋಟಾರ್ ಸೈಕಲ್‌ಗಳನ್ನು […]

DAKSHINA KANNADA HOME LATEST NEWS

ಮಂಗಳೂರು: ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ-40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆ

ಮಂಗಳೂರು: ಆಡಂಕುದ್ರುನಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಉರ್ಬನ್‌ ಡಿಸೋಜಾ ಎಂಬಾತನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 5 ಲೀಟರ್‌ ಕಳ್ಳಭಟ್ಟಿ ಸಾರಾಯಿ, ಕಳ್ಳಭಟ್ಟಿ ತಯಾರಿಸಲು ಉಪಯೋಗಿಸುತ್ತಿದ್ದ ಸಲಕರಣೆಗಳು, 40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆಯಾಗಿದೆ. ಮಂಗಳೂರು ದಕ್ಷಿಣ ವಲಯದ ಅಬಕಾರಿ ಕಮಲ ಎಚ್‌. ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಬಕಾರಿ ಉಪನಿರೀಕ್ಷಕ ಹರೀಶ್‌ ಪಿ. ಕಾನ್ಸ್ಟೇಬಲ್‌ಗಳಾದ ಬಸವಾರಜ ತೊರೆ, ಆನಂದ್‌, ವಾಹನಚಾಲಕ ರಘುರಾಮ ಕಾರ್ಯಚರಣೆಯಲ್ಲಿ ಸಹಕರಿಸಿದ್ದರು.

DAKSHINA KANNADA HOME LATEST NEWS

ವಿದ್ಯಾರ್ಥಿನಿ ಮೇಲೆ ದೌರ್ಜನ್ಯ: ಆರೋಪಿ ಬಂಧನಕ್ಕೆ ದಲಿತ ಸಂಘಟನೆಗಳ ಆಗ್ರಹ

ಮಂಗಳೂರು: ಬಂಟ್ವಾಳ ತಾಲೂಕಿನ ವಿಟ್ಲ ಮಾಣಿಲ ಗ್ರಾಮದ ಮುರುವದಲ್ಲಿ ದಲಿತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ನಿವಾಸಿ ಮಹೇಶ್ ಭಟ್ ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಎಸಗಿರುವ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಸೆಕ್ಷನ್ ಹಾಗೂ ದಲಿತ ದೌರ್ಜನ್ಯ ಕಾಯಿದೆಯ ಅನ್ವಯ ಪ್ರಕರಣ ದಾಖಲಾಗಿದ್ದರೂ ಕೂಡ ಪೊಲೀಸ್ ಇಲಾಖೆ ಈ ಕುರಿತು ಕ್ರಮ ಜರುಗಿಸದೇ ಇರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ. ಈ ಕುರಿತು ತಕ್ಷಣ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ದಲಿತ […]

HOME LATEST NEWS NATIONAL

ಮಹಾತ್ಮ ಗಾಂಧಿಯವರ ಮರಿಮೊಮ್ಮಗಳು ನಿಧನ

ನವದೆಹಲಿ: ಮಹಾತ್ಮ ಗಾಂದಿಯವರ ಮರಿ ಮೊಮ್ಮಗಳು ನೀಲಂಬೆನ್ ಪಾರಿಖ್ ಅವರು ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ನೀಲಂಬೆನ್  ಮಹಾತ್ಮ ಗಾಂಧಿಯವರ ಪುತ್ರ ಹರಿದಾಸ್ ಗಾಂಧಿಯವರ ಮೊಮ್ಮಗಳು. ಅವರು ನವಸಾರಿ ಜಿಲ್ಲೆಯ ಅಲ್ಕಾ ಸೊಸೈಟಿಯಲ್ಲಿರುವ ತಮ್ಮ ಮಗ ಡಾ. ಸಮೀರ್ ಪಾರಿಖ್ ಅವರ ಮನೆಯಲ್ಲಿ ವಾಸಿಸುತ್ತಿದ್ದರು. ಜನವರಿ 30, 2008 ರಂದು ಮಹಾತ್ಮ ಗಾಂಧಿಯವರ 60 ನೇ ಪುಣ್ಯತಿಥಿಯಂದು, ನೀಲಂಬೆನ್ ಪಾರಿಖ್ ಅವರು ಬಾಪು ಅವರ ಕೊನೆಯ ಚಿತಾಭಸ್ಮವನ್ನು ಗೌರವಯುತವಾಗಿ ವಿಸರ್ಜಿಸಿದರು. ಈ ಸಂದರ್ಭದಲ್ಲಿ ಗಾಂಧೀಜಿಯವರ ಅನುಯಾಯಿಗಳು […]

COMMUNITY NEWS HOME

ಕವಿ ಮೆಲ್ವಿನ್ ರೊಡ್ರಿಗಸ್ – ಹೊಸದೆಹಲಿ ಪಶ್ಚಿಮ ವಲಯ ಪ್ರಾದೇಶಿಕ ಭಾಷಾ ಸಮಿತಿ ಮುಖ್ಯಸ್ಥರಾಗಿ ನೇಮಕ

ಮಂಗಳೂರು : ಹೊಸದಿಲ್ಲಿಯ  ಕೇಂದ್ರ ಸಾಹಿತ್ಯ ಅಕಾಡೆಮಿಯ ಪಶ್ಚಿಮ ವಲಯ ಪ್ರಾದೇಶಿಕ ಭಾಷಾ ಸಮಿತಿ ಮುಖ್ಯಸ್ಥರಾಗಿ ಕವಿ,  ಸಾಹಿತಿ  ಮೆಲ್ವಿನ್ ರೊಡ್ರಿಗಸ್   ನೇಮಕಗೊಂಡಿದ್ದಾರೆ. 24 ರಾಷ್ಟ್ರೀಯ ಭಾಷೆಗಳ ಸಾಹಿತ್ಯದ ಶ್ರೇಯೋಭಿವೃದ್ದಿಗಾಗಿ1954 ರಿಂದ  ಭಾರತ ಸರಕಾರದ  ಸಂಸ್ಕೃತಿ  ಸಚಿವಾಲಯದಡಿ ಶ್ರಮಿಸುತ್ತಿರುವ ಸ್ವಾಯತ್ತ ಸಂಸ್ಥೆ  ಸಾಹಿತ್ಯ ಅಕಾಡೆಮಿಯಾಗಿದೆ.  ಇದರ ಪಶ್ಚಿಮ ಪ್ರಾದೇಶಿಕ ವಲಯದಲ್ಲಿ ಗುಜರಾತಿ, ಮರಾಠಿ, ಸಿಂಧಿ ಮತ್ತು ಕೊಂಕಣಿ ಭಾಷೆಗಳಿದ್ದು, ಪ್ರಸ್ತುತ  ಮೆಲ್ವಿನ್ ರೊಡ್ರಿಗಸ್ ಕೊಂಕಣಿ ಭಾಷಾ ಸಲಹಾ ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಪಶ್ಚಿಮ ವಲಯ ಪ್ರಾದೇಶಿಕ ಭಾಷಾ ಸಲಹಾ […]

DAKSHINA KANNADA HOME LATEST NEWS UDUPI

ದಕ್ಷಿಣ ಕನ್ನಡ-ಉಡುಪಿಯಲ್ಲಿ ಮಾ.31 ಹಾಗೂ ಏ.1 ರಂದು ಗುಡುಗು ಸಹಿತ ಮಳೆ..!

ಮಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾ.31 ಹಾಗೂ ಏ.1 ರಂದು ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಕೆಲವೆಡೆ ಮಳೆ ಶುಕ್ರವಾರ ಕರಾವಳಿಯ ಹಲವೆಡೆ ಹಗಲಿನಲ್ಲಿ ಮೋಡದ ವಾತಾವರಣ ಇತ್ತು. ರಾತ್ರಿಯ ವೇಳೆ ಪಶ್ಚಿಮ ಘಟ್ಟದ ತಪ್ಪಲು ಭಾಗದ ಮುಂಡಾಜೆ, ಕಡಿರುದ್ಯಾವರ, ಮುಂಡಾಜೆ, ಮಡಂತ್ಯಾರು, ಬೆಳ್ತಂಗಡಿ, ಧರ್ಮಸ್ಥಳ, ಗುರಿಪ್ಪಳ್ಳ, ಬಂದಾರು. ಕನ್ಯಾಡಿ ಮತ್ತು ಬಂಟ್ವಾಳ ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678