Tag: dakshina kannada

DAKSHINA KANNADA HOME LATEST NEWS

ಮಹಾರಾಷ್ಟ್ರದಲ್ಲಿ ಅಪಘಾತ: ಮಂಗಳೂರಿನ ಯುವಕ ಸಾವು

ಮಂಗಳೂರು: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ಮುಡಿಪು ಸಮೀಪದ ಬೋಳಿಯಾರ್ ನಿವಾಸಿ ವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೋಳಿಯಾರ್ ನಿವಾಸಿ ಬಿಎಚ್ ಕರೀಂ ಎಂಬವರ ಪುತ್ರ ಮುಹಮ್ಮದ್ ರಿಝ್ವಾನ್ (28) ಮೃತರು ಎಂದು ಪೊಲೀಸರು ತಿಳಿಸಿದ್ದಾರೆ.ಕಳೆದ‌ ಹಲವಾರು ವರ್ಷಗಳಿಂದ ಕಂಪೆನಿಯೊಂದರ ಮೂಲಕ ಮೀನಿನ ಲಾರಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ರಿಝ್ವಾನ್ ಅವರು ಮಹಾರಾಷ್ಟ್ರಕ್ಕೆ ಮೀನಿನ ಲಾರಿ ಚಲಾಯಿಸುತ್ತಿದ್ದು, ಮಹಾರಾಷ್ಟ್ರದ ರತ್ನಗಿರಿ ಎಂಬಲ್ಲಿ ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಝ್ವಾನ್ ಮೃತಪಟ್ಟಿದ್ದಾರೆ. […]

DAKSHINA KANNADA HOME LATEST NEWS

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಇಬ್ಬರಿಗೆ ಗಾಯ

ವಿಟ್ಲ: ಇಬ್ಬರು ಐಟಿಐ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿ ಚೂರಿ ಇರಿತಗೊಂಡ ಘಟನೆ ವಿಟ್ಲದ ಐಟಿಐ ತರಗತಿ ಒಳಗಡೆ ಸಂಭವಿಸಿದೆ. ಚೂರಿ ಇರಿತದಿಂದ ಇಬ್ಬರು ಅಪ್ರಾಪ್ತರು ಗಾಯೊಂಡಿದ್ದಾರೆ, ವಿಟ್ಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಥಮ ವರ್ಷದ ಎಲೆಕ್ಟಿಷಿಯನ್ ಐಟಿಐ ಕಲಿಯುತ್ತಿರುವ ಅಪ್ರಾಪ್ತ ಮತ್ತು ವಿಟ್ಲ ನಿವಾಸಿ ಹೇಮಂತ್ ಎಂಬವರ ನಡುವೆ ಜಗಳ ಉಂಟಾಗಿತ್ತು. ಬಳಿಕ ಹೇಮಂತ್ ಚೂರಿ ತಂದಿದ್ದು, ಅದರಿಂದ ಅಪ್ರಾಪ್ತನಿಗೆ ಇರಿದಿದ್ದಾನೆ. ಅದನ್ನು ತಡೆಯಲು ಬಂದ ಮತ್ತೋರ್ವ ವಿದ್ಯಾರ್ಥಿಗೂ ಗಾಯವಾಗಿದೆ. […]

DAKSHINA KANNADA HOME LATEST NEWS

19 ವರ್ಷದ ಒಳಗಿನ ಮಕ್ಕಳಿಗೆ ಜಂತುಹುಳ ಮಾತ್ರೆ: ಇಂದಿನಿಂದ ವಿತರಣೆ

ಮಂಗಳೂರು: ಇಂದಿನ ಮಕ್ಕಳು ಭವಿಷ್ಯದಲ್ಲಿ ಗುಣಮಟ್ಟದ ಜೀವನ ನಡೆಸಲು ಉತ್ತಮ ಶಿಕ್ಷಣ ಲಭಿಸಬೇಕಾಗಿದ್ದು, ಇದಕ್ಕಾಗಿ ಪೌಷ್ಠಿಕಯುಕ್ತವಾದ ಸುಧಾರಿತ ಆರೋಗ್ಯ ಹೊಂದಿರಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಂತುಹುಳಗಳು ಮನುಷ್ಯನ ಕರುಳಿನಿಂದ ಆಹಾರವನ್ನು ಪಡೆದು ಜೀವಿಸುವಂತಹ ಉಪಜೀವಿಗಳಾಗಿವೆ. ಫೆಬ್ರವರಿ 10 ರಂದು ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತದೆ. 1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಜಂತುಹುಳ ಕಾಣಿಸಿಕೊಳ್ಳುತ್ತಿರುವುದರಿಂದ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ […]

DAKSHINA KANNADA HOME LATEST NEWS

ಬೆಳ್ತಂಗಡಿ: ಸುಮಂತ್‌ ಪ್ರಕರಣ- ಪೊಲೀಸ್‌ ವರಿಷ್ಠಾಧಿಕಾರಿಯಿಂದ ಅಧಿಕೃತ ಸ್ಪಷ್ಟನೆ

ಮಂಗಳೂರು:  ಜ.14 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದಲ್ಲಿ ಬಾಲಕ ಸುಮಂತ್‌ ನಾಪತ್ತೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಧಿಕೃತ ಮಾಹಿತಿ ನೀಡಿದ್ದಾರೆ. ಈ ಹಿಂದೆ ಸುಮಂತ್‌ ಮೃತ್ಯುವಿನ ಕಾರಣ ಮುಳುಗು (drowning) ಆಗಿದೆ. ಆದರೆ ತಲೆಯಲ್ಲಿದ್ದ ಗಾಯದಿಂದ ಸಂಶಯ ಉಂಟಾದ ಕಾರಣ ಪ್ರಕರಣವನ್ನು ಸಂಪೂರ್ಣ ಹಾಗೂ ಸಮಗ್ರವಾಗಿ ತನಿಖೆ ನಡೆಸುವ ಉದ್ದೇಶದಿಂದ ಹತ್ಯೆ (murder) ಕಲಂನ್ನು ಸೇರಿಸಲಾಗಿದೆ. ವೈದ್ಯಕೀಯ ನ್ಯಾಯವಿಜ್ಞಾನ (Forensic) ಹಾಗೂ ಅಂತಿಮ […]

DAKSHINA KANNADA HOME LATEST NEWS

ಬೆಳ್ತಂಗಡಿ: ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಬಂದ ಇಬ್ಬರು ಅಂದರ್‌

ಬೆಳ್ತಂಗಡಿ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ನಕಲಿ ಚಿನ್ನ ಅಡವಿರಿಸಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಪ್ರಮೋದ್ ಪಿ. (50) ಹಾಗೂ ಉಳಿ ಗ್ರಾಮದ ಅಬ್ದುಲ್ ನಝೀರ್ (43) ಬಂಧಿತರು. ಪ್ರಕರಣದ ವಿವರ; ದಿನಾಂಕ: 02.02.2026 ರಂದು ಬೆಳ್ತಂಗಡಿ ತಾಲೂಕು ಪಾರೆಂಕಿ ಗ್ರಾಮದ ಮಡಂತ್ಯಾರು ಶಾಖೆಯಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 2 ಗ್ರಾಹಕರು ಬಂದು […]

DAKSHINA KANNADA HOME

ತಣ್ಣೀರುಬಾವಿ ಬೀಚ್‌ನಲ್ಲಿ ಇಂದು-ನಾಳೆ ಮ್ಯೂಸಿಕ್ ಫೆಸ್ಟಿವಲ್: ಪೊಲೀಸರಿಂದ ಸಂಚಾರಿ ಸಲಹೆ

 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ತಣ್ಣೀರುಬಾವಿ ಬೀಚ್‌ನಲ್ಲಿ  ಜ.3 ಹಾಗೂ 4 ರಂದು ಸಂಜೆ ಮ್ಯೂಸಿಕ್ ಫೆಸ್ಟಿವಲ್, ಕೈಲಾಶ್ ಖೇರ್ ನೈಟ್, ವಿಜಯ ಪ್ರಕಾಶ್ ನೈಟ್ ಕಾರ್ಯಕ್ರಮಗಳು ನಡೆಯಲಿರುತ್ತದೆ. ಸದರಿ ಕಾರ್ಯಕ್ರಮಗಳಿಗೆ  ಗಣ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವವರಿದ್ದು, ಈ ಸಮಯ ಕೊಟ್ಟಾರಚೌಕಿ – ಪಣಂಬೂರು ರಾಷ್ಟ್ರೀಯ ಹೆದ್ದಾರಿ ಮತ್ತು ತಣ್ಣೀರುಬಾವಿ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳ ಸಂಚಾರದಲ್ಲಿ ದಟ್ಟಣೆ ಉಂಟಾಗುವ ಸಾಧ್ಯತೆಗಳು ಇರುತ್ತದೆ. ಮೇಲಿನ ಕಾರ್ಯಕ್ರಮಗಳು ನಡೆಯುವ […]

DAKSHINA KANNADA HOME LATEST NEWS

ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ- ವೆಬ್‌ಸೈಟ್‌ ಮೇಲೆ ಪ್ರಕರಣ ದಾಖಲು

ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. Gadinadadhwani.online ಎಂಬ ವೆಬ್‌ಸೈಟ್ “ಕರಾವಳಿಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ, ಸಜೀಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ ಮುಸ್ಲಿಮರ ಮೇಲೆ ದಾಳಿ” ಎಂಬ ತಲೆಬರಹವಿರುವ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಸದ್ರಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ, ಸಾರ್ವಜನಿಕ ವಲಯದಲ್ಲಿ ಭಯಭೀತಿಯನ್ನುಂಟು ಮಾಡಿದ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ […]

DAKSHINA KANNADA HOME LATEST NEWS STATE UDUPI

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿ ಸೇರಿ ಹಲವರ ವರ್ಗಾವಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಉಡುಪಿ ಡಿಸಿ ವಿದ್ಯಾಕುಮಾರಿ ಅವರನ್ನು ಸೇರಿ ಹಲವು  ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್‌ವಿ ವಾಣಿಜ್ಯ […]

DAKSHINA KANNADA HOME LATEST NEWS

Updated: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಪಿಯು ಕಾಲೇಜಿಗೆ ಇಂದು ರಜೆ

ಮಂಗಳೂರು: ಭಾರೀ ಮಳೆಯ ಹಿನ್ನೆಲೆ ಜೂ.16 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ನಿನ್ನೆ ರಾತ್ರಿ ವೇಳೆಗೆ ನೀಡಿದ ಆದೇಶವನ್ನು ಮಾರ್ಪಡಿಸಿ ಇಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಸುಳ್ಯ-ಪುತ್ತೂರು, ಬೆಳ್ತಂಗಡಿ ತಾಲೂಕನ್ನು ಹೊರತುಪಡಿಸಿ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು.ಇಂದು ಬೆಳಿಗ್ಗೆ ಈ ಆದೇಶವನ್ನು ಮಾರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ […]

DAKSHINA KANNADA HOME LATEST NEWS STATE

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಮಂಗಳೂರು:- 2025-26ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ವಿವರ:- ಸ್ವಯಂ ಉದ್ಯೋಗ ವ್ಯಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವತಂತ್ರ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ. ಅರ್ಜಿ […]