DAKSHINA KANNADA
LATEST NEWS
STATE
ಸೇದಿ ಬಿಸಾಕಿದ್ದ ಬೀಡಿ ತುಂಡು ಗಂಟಲಲ್ಲಿ ಸಿಲುಕಿ ಮಗು ಸಾವು
ಮಂಗಳೂರು: ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್ ಮೃತ ಪಟ್ಟಿದೆ. ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು. ಅಪರಾಹ್ನ 3:30ಕ್ಕೆ ಮಗುವನ್ನು ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ […]