ಕಡಬ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಮ್ಮ- ನರಳಾಡಿ ಪ್ರಾಣ ಬಿಟ್ಟ ಅಣ್ಣ
ಕಡಬ: ಕೌಟುಂಬಿಕ ಕಲಹದಲ್ಲಿ ಸ್ವಂತ ಅಣ್ಣನನ್ನೇ ತಮ್ಮನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಬಜಕರೆ ಬಳಿ ರೈಲ್ವೇ ಟ್ರಾಕ್ ನಲ್ಲಿ ನಡೆದಿದೆ. ಬೆಂಕಿಯಿಂದ ಗಂಭೀರ ಗಾಯಗೊಂಡ ಅಣ್ಣ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ತಮ್ಮನನ್ನು ಮಂಗಳೂರು ವಿಭಾಗದ ರೈಲ್ವೇ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ (42) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಆತನ ತಮ್ಮ ನಿಂಗಪ್ಪ (21) […]