ಆದಾಯದಲ್ಲಿ ಕರಾವಳಿ ದೇಗುಲಗಳೇ ಮೇಲುಗೈ: ಕುಕ್ಕೆ ಸುಬ್ರಹ್ಮಣ್ಯದಲ್ಲಿ 155.95 ಕೋಟಿ ರೂ.
ಮಂಗಳೂರು: ರಾಜ್ಯ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕರಾವಳಿಯ ದೇವಾಲಯಗಳೇ ಅಗ್ರಸ್ಥಾನಗಳಲ್ಲಿವೆ. ಅದರಲ್ಲೂ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ 155.95 ಕೋಟಿ ರೂ. ಆದಾಯ ಮೂಲಕ ಮೊದಲನೇ ಸ್ಥಾನದಲ್ಲಿದೆ. ಜೊತೆಗೆ ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಬಳಿಕ ದೇವಾಲಯಗಳಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲೂ ಶೇ.10ರಿಂದ 15 ಏರಿಕೆ ಕಂಡಿದೆ. ವರ್ಷಾಂತ್ಯ ಆಗಮಿಸುತ್ತಿದ್ದಂತೆ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಮಂದಾರ್ತಿ, ಕಟೀಲು, ಕದ್ರಿ, ಮಂಗಳಾದೇವಿ, ಕಮಲಶಿಲೆ ದೇವಸ್ಥಾನಗಳಲ್ಲಿ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಜೊತೆ […]



