ಮಂಗಳೂರು: ಜು.22 ರ ರಾತ್ರಿಯಿಂದ ಕೂಳೂರು ರಸ್ತೆ ದುರಸ್ಥಿ ಕಾಮಗಾರಿ
ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜು.22 ರ ಮಂಗಳವಾರ ರಾತ್ರಿ 8-00 ಗಂಟೆಯಿಂದ ಜು.25ರ ಗುರುವಾರ ಬೆಳಿಗ್ಗೆ 8-00 ರವರೆಗೆ ರಸ್ತೆ ದುರಸ್ಥಿ ಕಾಮಗಾರಿ ನಡೆಯಲಿದೆ. ಹಾಗಾಗಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಕೂಳೂರು ಹೊಸ ಸೇತುವೆಯಲ್ಲಿ ದ್ವಿಪಥ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತದೆ. ಆದರಿಂದ ಕೋಡಿಕಲ್ ಕ್ರಾಸ್‌ನಿಂದ ಕೆ.ಐ.ಓ.ಸಿ.ಎಲ್ ಜಂಕ್ಷನ್‌ವರೆಗೆ ಅದೇ ರೀತಿ ಪಣಂಬೂರು ಜಂಕ್ಷನ್‌ನಿಂದ ಕೆ.ಐ.ಓ.ಸಿ.ಎಲ್ ಜಂಕ್ಷನ್‌ವರೆಗೆ ಸಂಚಾರ ದಟ್ಟಣೆ ಹೆಚ್ಚಾಗಬಹುದಾಗಿದೆ. ಆದ್ದರಿಂದ […]