Tag: mangalore

DAKSHINA KANNADA HOME

ತಣ್ಣೀರುಬಾವಿ ಬೀಚ್‌ನಲ್ಲಿ ಇಂದು-ನಾಳೆ ಮ್ಯೂಸಿಕ್ ಫೆಸ್ಟಿವಲ್: ಪೊಲೀಸರಿಂದ ಸಂಚಾರಿ ಸಲಹೆ

 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ತಣ್ಣೀರುಬಾವಿ ಬೀಚ್‌ನಲ್ಲಿ  ಜ.3 ಹಾಗೂ 4 ರಂದು ಸಂಜೆ ಮ್ಯೂಸಿಕ್ ಫೆಸ್ಟಿವಲ್, ಕೈಲಾಶ್ ಖೇರ್ ನೈಟ್, ವಿಜಯ ಪ್ರಕಾಶ್ ನೈಟ್ ಕಾರ್ಯಕ್ರಮಗಳು ನಡೆಯಲಿರುತ್ತದೆ. ಸದರಿ ಕಾರ್ಯಕ್ರಮಗಳಿಗೆ  ಗಣ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವವರಿದ್ದು, ಈ ಸಮಯ ಕೊಟ್ಟಾರಚೌಕಿ – ಪಣಂಬೂರು ರಾಷ್ಟ್ರೀಯ ಹೆದ್ದಾರಿ ಮತ್ತು ತಣ್ಣೀರುಬಾವಿ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳ ಸಂಚಾರದಲ್ಲಿ ದಟ್ಟಣೆ ಉಂಟಾಗುವ ಸಾಧ್ಯತೆಗಳು ಇರುತ್ತದೆ. ಮೇಲಿನ ಕಾರ್ಯಕ್ರಮಗಳು ನಡೆಯುವ […]

DAKSHINA KANNADA HOME LATEST NEWS

ಮಂಗಳೂರು: ಹೊಸ ವರ್ಷಾಚರಣೆಗೆ ಪೊಲೀಸ್‌ ಮಾರ್ಗಸೂಚಿ

ಮಂಗಳೂರು: ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇವುಗಳನ್ನು ಎಲ್ಲ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ಕಡ್ಡಾಯವಾಗಿಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ನೀಡಿದ್ದಾರೆ. ಮಾರ್ಗಸೂಚಿಗಳ ವಿವರ ಇಂತಿವೆ *ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ. *ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು,ಕಿರುಕುಳವಾಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ. *ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ಚಾಲನೆ, ವೀಲಿಂಗ್‌ನ ನಡೆಸುವುದು, ಅಸಭ್ಯವರ್ತನೆ, ಸಾರ್ವಜನಿಕ ಕಿರುಕುಳದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. […]

DAKSHINA KANNADA HOME LATEST NEWS

ಮಂಗಳೂರು: ಡಿ.11ರವರೆಗೆ ಇಂಡಿಗೊ ವಿಮಾನಗಳು ರದ್ದು

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿನನಿತ್ಯ ಆಗಮಿಸುವ ಮತ್ತು ನಿರ್ಗಮಿಸುವ ಇಂಡಿಗೊದ 8 ವಿಮಾನಗಳ ಯಾನ ಡಿ.8 ರಿಂದ 11ರ ತನಕ ರದ್ದಾಗಿದೆ. ಮಂಗಳೂರಿಗೆ ದಿನನಿತ್ಯ ಆಗಮಿಸುವ ಇಂಡಿಗೊದ ಬೆಂಗಳೂರು -ಮಂಗಳೂರು ( 6ಇ 6858)ಬೆಳಗ್ಗೆ 7:10, ಮುಂಬೈ -ಮಂಗಳೂರು(6ಇ 6674) ಬೆಳಗ್ಗೆ 8:40, ಬೆಂಗಳೂರು -ಮಂಗಳೂರು (6ಇ109) ಸಂಜೆ 5:20 ಮತ್ತು ಬೆಂಗಳೂರು -ಮಂಗಳೂರು (6ಇ6119) ರಾತ್ರಿ 10:15ಕ್ಕೆ ಆಗಮಿಸುವ ವಿಮಾನಗಳು ರದ್ದಾಗಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ 7:40ಕ್ಕೆ ಹೊರಡುವ ಮಂಗಳೂರು -ಬೆಂಗಳೂರು […]

DAKSHINA KANNADA HOME LATEST NEWS

ಮಂಗಳೂರು ಮೂಲದ ರೌಡಿ ಶೀಟರ್‌ಗಳಿಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ

ಕಾರವಾರ:  ಮಂಗಳೂರು ಮೂಲದ ವಿಚಾರಣಾಧೀನ ರೌಡಿ ಶೀಟರ್‌ಗಳಿಬ್ಬರು ಕಾರವಾರ ಕಾರಾಗೃಹದಲ್ಲಿ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮಂಗಳೂರು ಮೂಲದ ರೌಡಿ ಶೀಟರ್‌ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳು. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇವರನ್ನು, ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾದ ಕಾರಣ ಕಾರವಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಮಾದಕ ವಸ್ತು ಒದಗಿಸುವಂತೆ ಗಲಾಟೆ ಮಾಡಿದ ಕೈದಿಗಳು ಪರಸ್ಪರ […]

HOME NATIONAL

SDPI ಹೆಸರಿನಲ್ಲಿ ನಿಷೇಧಿತ PFIನ ಹಿಂಬಾಗಿಲ ರಾಜಕೀಯ ಪ್ರವೇಶ: ಸಂಸತ್ತಿನಲ್ಲಿ ಕ್ಯಾ. ಚೌಟ

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಎಸ್‌ಡಿಪಿಐಯು ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ. […]

DAKSHINA KANNADA HOME

ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಆಯ್ಕೆ

ಮಂಗಳೂರು: ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಅವರು ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್, ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ| ಎಜೆ ಅಕ್ರಂ ಪಾಶಾ ಹಾಗೂ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಅಧ್ಯಕ್ಷ ಟಿ.ವೈ ಕುಮಾರ್ ಅವರ ಆದೇಶದ ಮೇರೆಗೆ ಈ ಆಯ್ಕೆ ನಡೆದಿದ್ದು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ) ಕಾಂಗ್ರೆಸ್ ವಿಭಾಗದ ಮಂಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಕರಿಷ್ಮಾ ಅವರನ್ನು ತಕ್ಷಣದಿಂದ […]

DAKSHINA KANNADA HOME LATEST NEWS NATIONAL STATE

ಕೊಂಕಣಿ ಸಂಗೀತ ಕ್ಷೇತ್ರದ ದಿಗ್ಗಜ ಎರಿಕ್ ಬಾಬ್ ಒಜಾರಿಯೋ ನಿಧನ

ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ದಿಗ್ಗಜ ಎರಿಕ್ ಅಲೆಕ್ಸಾಂಡರ್ ಒಜಾರಿಯೊ ಅವರು ಶುಕ್ರವಾರ, ಆಗಸ್ಟ್ 29 ರಂದು ತಮ್ಮ 76 ನೇ ವಯಸ್ಸಿನಲ್ಲಿ ಇಲ್ಲಿ ನಿಧನರಾದರು. ಮೂತ್ರಪಿಂಡ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 19 ದಿನಗಳ ಚಿಕಿತ್ಸೆಯ ಬಳಿಕ ಕಾಯಿಲೆ ನಿಯಂತ್ರಣಕ್ಕೆ ಬರದೆ ಅವರು ವಿಧಿವಶರಾಗಿದ್ದಾರೆ. ಎರಿಕ್ ಒಜಾರಿಯೊ ಎಂದೇ ಜನಪ್ರಿಯರಾಗಿದ್ದ ಅವರು ಮೇ 18, 1949 ರಂದು ಮಂಗಳೂರಿನ ಜೆಪ್ಪುವಿನಲ್ಲಿ ಜನಿಸಿದರು ಮತ್ತು ಪ್ರಸಿದ್ಧ ಕೊಂಕಣಿ […]

DAKSHINA KANNADA HOME

ಪಾದುವ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೆಜೈಂಟ್‌ನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಮಂಗಳೂರು: ಮಂಗಳೂರಿನ ಪಾದುವ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೆಜೈಂಟ್‌ನಲ್ಲಿ ವಿದ್ಯಾರ್ಥಿ ಪರಿಷತ್ 2025_26 ನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸಿಟ್ಯುಟ್ಸ್ಗಳ ನಿರ್ದೇಶಕರಾದ ರೆವರೆಂಡ್ ಫಾದರ್ ಪೌಸ್ಟಿನ್ ಲೂಕಸ್ ಲೋಬೊ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ನಾಯಕತ್ವ ಎನ್ನುವುದು ಪ್ರತಿದಿನದ ಕಲಿಕೆ. ಕಲಿಯುವ ಮೂಲಕ ನಾವು ಬೆಳೆಯಬೇಕು ಮತ್ತು ವಿದ್ಯಾರ್ಥಿ ಸಮೂಹವನ್ನು ಬೆಳೆಸಬೇಕು’ ಎಂದರು. ಅಭಿನೇತ್ರಿ ಜೆಸಿ ಸೌಜನ್ಯ ಹೆಗ್ಡೆ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿ, ವಿದ್ಯಾರ್ಥಿ ನಾಯಕನಾಗುವುದು ಎಂದರೆ, ಜವಬ್ದಾರಿಗಳ ನಾಯಕತ್ವ ವಹಿಸಿಕೊಳ್ಳುವುದು. ಸಮಸ್ಯೆಗಳು […]

DAKSHINA KANNADA HOME LATEST NEWS

ಅಡಿಕೆ ಸೇರಿ 28 ವಾಣಿಜ್ಯ ಬೆಳೆ ಕೃಷಿ ಇಲಾಖೆಯಡಿ ತರಲು ಪ್ರಯತ್ನ: ಅಶೋಕ್ ರೈ

ವಿಟ್ಲ: ಅಡಿಕೆ ಸೇರಿ 28 ವಾಣಿಜ್ಯ ಬೆಳೆಗಳನ್ನು ಕೃಷಿ ಇಲಾಖೆಯಡಿ ತರುವ ಭಾಗವಾಗಿ ಮನವಿ ಕೇಂದ್ರಕ್ಕೆ ಸಲ್ಲಿಸಲಾಗಿದೆ ಆಗ ಬೆಳೆಗಾರರಿಗೆ ಸರಕಾರದ ಸೌಲಭ್ಯ ಸಿಗುತ್ತದೆ. ಅಡಿಕೆ ಬೆಳೆ ಕೊಳೆರೋಗದಿಂದ ನಾಶವಾಗಿ ರೈತರು ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದೇನೆ. ರೈತರಿಗೆ ಪರಿಹಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಹೇಳಿದರು. ಅವರು ಬಂಟ್ವಾಳ ತಾಲೂಕು ಕೃಷಿ ಇಲಾಖೆ ವತಿಯಿಂದ ವಿಟ್ಲದ ಭಗವತಿ ದೇವಸ್ಥಾನದ ಸಭಾಭವನದಲ್ಲಿ ಆತ್ಮ ಯೋಜನೆ ತಾಂತ್ರಿಕ […]

DAKSHINA KANNADA HOME LATEST NEWS

ಮಂಗಳೂರು:  ಆ. 31ರಂದು ಕಲ್ಲಚ್ಚು ಪ್ರಶಸ್ತಿ ಪ್ರದಾನ

ಮಂಗಳೂರು:  ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಬೆಳ್ಳಿ ಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ” ಕಲ್ಲಚ್ಚು ಪ್ರಕಾಶನದ” 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಅಗಸ್ಟ್ 31 ಭಾನುವಾರ ಸಂಜೆ 4.00 ಗಂಟೆಗೆ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಲಿದೆ. ಈಗಾಗಲೇ ಕರ್ನಾಟಕದ ಪಂಚ ಸಾಧಕರಾದ ಡಾ. ಎಸ್ ಎಮ್ ಶಿವಪ್ರಕಾಶ್, ಜಬೀವುಲ್ಲಾ ಎಂ […]