3 ಪ್ರಕರಣಗಳನ್ನು ಎನ್‌ಐಎಗೆ ವಹಿಸಿ; ತನಿಖೆಯಲ್ಲಿ ತಾರತಮ್ಯ ಬೇಡ: ಒಂದು ಕಣ್ಣಿಕೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಯಾಕೆ? ಮಂಜುನಾಥ್ ಭಂಡಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೂವರೆ ತಿಂಗಳಿನಿಂದೀಚೆಗೆ ಮೂರು ಕೊಲೆ ಪ್ರಕರಣಗಳು ನಡೆದಿದ್ದು, ಇಡೀ ಕರಾವಳಿಯಲ್ಲಿ ಆತಂಕ ಮೂಡಿಸಿತು. ಈ ಕೊಲೆಗಳು ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು, ಈ ಮೂರು ಪ್ರಕರಣಗಳನ್ನು ಎನ್‌ಐಎಗೆ ತನಿಖೆಗೆ ವಹಿಸಿದರೆ ದುಷ್ಜೃತ್ಯದ ಹಿಂದಿನ ಸತ್ಯ ಬಯಲಿಗೆ ಬರಲಿದೆ. ಕೇಂದ್ರ ಗೃಹ ಇಲಾಖೆಯು ಬಜಪೆ ಕಿನ್ನಿಪದವಿನಲ್ಲಿ ನಡೆದ ಸುಹಾಸ್ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಿದೆ. ಇದೇ ಮಾದರಿಯಲ್ಲಿ ಕುಡುಪುವಿನಲ್ಲಿ ಏ.27ರಂದು ಅಶ್ರಫ್ ಎಂಬಾತನನ್ನು ಗುಂಪು ಹತ್ಯೆ ಮಾಡಲಾಗಿದೆ. ಇದಾದ ಬಳಿಕ ಬಜಪೆ ಕಿನ್ನಿಪದವಿನಲ್ಲಿ […]











