Tag: mangaluru city police

DAKSHINA KANNADA HOME LATEST NEWS

ಸುರತ್ಕಲ್‌: ಮನೆಗೆ ನುಗ್ಗಿ ದೈವದ ಮೂರ್ತಿ & ಪರಿಕರ ಕಳವು- ಇಬ್ಬರ ಬಂಧನ

ಮಂಗಳೂರು: ಕುಳಾಯಿಯ ಮನೆಯೊಂದರಿಂದ ದೈವಗಳ ಮೂರ್ತಿಗಳು ಮತ್ತು ಟಿವಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ವಾಜೀದ್ ಜೆ ಯಾನೆ ವಾಜಿ (27) ಮತ್ತು ಜೋಕಟ್ಟೆಯ ಸಯ್ಯದ್ ಆಲಿ (40) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರ ಕುಳಾಯಿ ಗ್ರಾಮದ ಯಶೋಧ ಕ್ಲಿನಿಕ್ ಬಳಿಯ ಮನೆಯಲ್ಲಿದ್ದ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧ ಪಟ್ಟ ಪೂಜಾ ಪರಿಕರಗಳು ಮತ್ತು ಟಿವಿ […]

DAKSHINA KANNADA HOME LATEST NEWS

ಉಳ್ಳಾಲ: ಸಿಟಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನ ಕಳವು

ಮಂಗಳೂರು: ಸಿಟಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರೋರ್ವರ 16 ಗ್ರಾಂ ತೂಕದ ಚಿನ್ನ ಕಳವಾದ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಸ್ವರ್ಷ ಎಂಬುವವರು ಜ.17 ರಂದು ಉಳ್ಳಾಲ ತಾಲೂಕಿನ ಉಳ್ಳಾಲ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಇರುವ ಕೆಥೋಲಿಕ್ ಪ್ರಾಥಮಿಕ ಸಹಕಾರ ಸಂಘದಲ್ಲಿ ಲಾಕರ್ ನಲ್ಲಿ ಇಟ್ಟಿದ್ದ 2 ಚಿನ್ನದ ಸರವನ್ನು ಬಿಡಿಸಿಕೊಂಡು ಬ್ಯಾಗ್ ನಲ್ಲಿ ಹಾಕಿ ಬಂದಿದ್ದರು. ನಂತರ ಸುಮಾರು 12 ಗಂಟೆ ಸುಮಾರಿಗೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ […]

DAKSHINA KANNADA HOME LATEST NEWS

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: ಓರ್ವನ ಬಂಧನ

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕದ್ರಿ ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ (20) ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು, ಕೃತ್ಯಕ್ಕೆ ಬಳಸಿದ ಬೈಕ್ ಸಮೇತ ಒಟ್ಟು 70,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪದವು ಗ್ರಾಮದ ಕೈಲಾಸ ಕಾಲನಿ ಹತ್ತಿರ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಬಳಿ […]

DAKSHINA KANNADA HOME LATEST NEWS

ಮೂಡುಬಿದಿರೆ: ಬಾಲಕನಿಗೆ ಲೈಂಗಿಕ ದೌರ್ಜನ್ಯ- ಶಿಕ್ಷಕನ ವಿರುದ್ಧ ಫೋಕ್ಸೊ ಕೇಸು ದಾಖಲು

ಮೂಡುಬಿದಿರೆ: ವಿದ್ಯಾರ್ಥಿಯೊಬ್ಬನಿಗೆ ವಿಶೇಷ ತರಗತಿಯ ನೆಪದಲ್ಲಿ ಕರೆದೊಯ್ದು ನಗ್ನ ವಿಡಿಯೊ ಚಿತ್ರೀಕರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಶಿಕ್ಷಕನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ ಅಲ್ತಾಫ್ ಬಂಧಿತ ಆರೋಪಿ.ಗ್ರಾಮದ ಶಾಲೆಯೊಂದರಲ್ಲಿ ಸಂತ್ರಸ್ತ ಬಾಲಕ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಗಣಿತ ವಿಷಯದಲ್ಲಿ ಹೆಚ್ಚು ಅಂಕ ಕೊಡಿಸುವುದಾಗಿ ನಂಬಿಸಿದ ಶಿಕ್ಷಕ ಅಲ್ತಾಫ್, ಬಾಲಕನನ್ನು ತನ್ನ ಕೊಠಡಿಗೆ ಕರೆಸಿಕೊಂಡು ಅಲ್ಲಿ ಬಾಲಕನಿಗೆ ಮಾದಕ ದ್ರವ್ಯ ಬೆರೆಸಿದ ಜ್ಯೂಸ್ ನೀಡಿ ಅರೆಪ್ರಜ್ಞಾವಸ್ಥೆಗೆ ತಲುಪಿಸಿ, ಆತನ ನಗ್ನ ವಿಡಿಯೊ ಚಿತ್ರೀಕರಿಸಿ ಲೈಂಗಿಕ […]

DAKSHINA KANNADA HOME LATEST NEWS

ಮಂಗಳೂರು: ಅಪಘಾತದಲ್ಲಿ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ ಕುಟುಂಬಕ್ಕೆ ₹ 70 ಲಕ್ಷ ರೂ. ಆರ್ಥಿಕ ನೆರವು

ಮಂಗಳೂರು: ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು, ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ಪೊಲೀಸ್ ಸಿಬ್ಬಂದಿ ದಿವಂಗತ  ಹರೀಶ್ ಜಿ. ಎನ್. ಅವರ ಕುಟುಂಬಕ್ಕೆ ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಶೂರೆನ್ಸ್ ಸ್ಕೀಮ್’ ಅಡಿಯಲ್ಲಿ ಆರ್ಥಿಕ ನೆರವು ನೀಡಿದೆ. ಬ್ಯಾಂಕಿನ ಈ ಬೆಂಬಲ ಉಪಕ್ರಮದ ಭಾಗವಾಗಿ, ಮೃತರ ಕುಟುಂಬಕ್ಕೆ ₹ 70 ಲಕ್ಷ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಲಾಯಿತು. ಮಂಗಳೂರು ನಗರ ಪೊಲೀಸ್ ಕಮಿಷನರ್ ಶ್ರೀ ಸುಧೀರ್ ಕುಮಾರ್ ರೆಡ್ಡಿ, ಬ್ಯಾಂಕ್ ಆಫ್ ಬರೋಡಾ ಮಂಗಳೂರು ನಗರ […]

DAKSHINA KANNADA HOME LATEST NEWS

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ನಾಲ್ವರ ಬಂಧನ

ಮಂಗಳೂರು: ನಗರದ ಸಿಸಿಬಿ ಪೊಲೀಸರು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ, 50 ಲಕ್ಷ ರೂ. ಮೌಲ್ಯದ ಸುಮಾರು 517.76 ಗ್ರಾಂ ಎಂಡಿಎಂಎ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೈಂದೂರು ನಾವುಂದದ ಮುಹಮ್ಮದ್ ಶಿಯಾಬ್ ಯಾನೆ ಶಿಯಾಬ್, ಉಳ್ಳಾಲ ನರಿಂಗಾನದ ಮುಹಮ್ಮದ್ ನೌಷದ್ ಯಾನೆ ನೌಷದ್ , ಮಂಗಳೂರು ಕಸಬಾ ಬೆಂಗ್ರೆಯ ಇಮ್ರಾನ್ ಯಾನೆ ಇಂಬ, ಮತ್ತು ಬಂಟ್ವಾಳ ಬ್ರಹ್ಮರ ಕೊಟ್ಲುವಿನ ನಿಸಾರ್ ಅಹಮ್ಮದ್ ಯಾನೆ ನಿಸಾರ್ […]

DAKSHINA KANNADA HOME LATEST NEWS

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಹಿತ ಮೂವರ ಬಂಧನ

ಮಂಗಳೂರು: ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಹಿತ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಆಡೂರಿನ ಮಸೂದ್ ಎಂ.ಕೆ. (45), ಕಾಸರಗೋಡು ಜಿಲ್ಲೆಯ ದೇಲಂಪಾಡಿಯ ಮುಹಮ್ಮದ್ ಆಶಿಕ್ (24) ಮತ್ತು ಸುಬೇರ್ (30) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ ಎರಡು ಕಾರು ಮತ್ತು 123 ಕೆ.ಜಿ. ಗಾಂಜಾ ಹಾಗೂ 5 ಮೊಬೈಲ್ ಫೋನ್‌ಗಳನ್ನು ವಶಪಡಿಸಲಾಗಿದೆ. ಆರೋಪಿಗಳು ಗಾಂಜಾವನ್ನು ಆಂಧ್ರಪ್ರದೇಶದಿಂದ ತಂದು ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಮಾರಾಟ […]

DAKSHINA KANNADA

ಜುಲೈ15ರೊಳಗೆ ದಂಡ ಕಟ್ಟಿ, ಇಲ್ಲದಿದ್ದರೆ ಕೋರ್ಟ್‌ಗೆ ಚಾರ್ಜ್‌ಶೀಟ್‌

ಮಂಗಳೂರು: ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವಂತಹ ವಾಹನಗಳ ಮೇಲೆ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತೆಗೆದಿರುವ ಭಾವಚಿತ್ರಗಳನ್ನು ಮತ್ತು ಟ್ರಾಫಿಕ್ ಕಂಟ್ರೋಲ್ & ಕಮಾಂಡ್ ಸೆಂಟರ್‌ನಲ್ಲಿ ಸಿಸಿಟಿವಿ ಯಲ್ಲಿ ಸೆರೆಯಾಗಿರುವ ವಾಹನ ಚಾಲಕ/ಸವಾರರ ಸಂಚಾರ ನಿಯಮ ಉಲ್ಲಂಘನೆಯ ಐಎಂವಿ ಪ್ರಕರಣಗಳನ್ನು ದಾಖಲು ಮಾಡಲಾಗಿರುತ್ತದೆ.    ವಾಹನ ಚಾಲಕರು/ಸವಾರರು ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಕುರಿತು ಅಂಚೆ ಮೂಲಕ ನೋಟಿಸುಗಳನ್ನು ನೋಂದಣಿ ಸಂಖ್ಯೆಯ ಮಾಲಕರಿಗೆ ಈಗಾಗಲೇ ಕಳುಹಿಸಲಾಗಿದ್ದು, ದಂಡವನ್ನು ಕಟ್ಟದೇ ಹಲವಾರು ಪ್ರಕರಣಗಳು […]

HOME LATEST NEWS

ಮಂಗಳೂರು: ಪೊಲೀಸ್‌ ಇನ್ಸ್‌ಪೆಕ್ಟರ್‌ಗಳ  ವರ್ಗಾವಣೆ

ಮಂಗಳೂರು:  ನಗರದ ಕಮೀಷನರೇಟ್‌ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಿಗೆ  ಇನ್ಸ್‌ಪೆಕ್ಟರ್‌ಗಳ  ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್‌ಪೆಕ್ಟರ್‌ ಪ್ರಮೋದ್ ಕುಮಾರ್ ಸುರತ್ಕಲ್ ಠಾಣೆಗೆ , ಚಿಕ್ಕಮಗಳೂರು ಸೆನ್ ಠಾಣೆಯಿಂದ ಗವಿರಾಜು ಆರ್.ಪಿ.ಗ್ರಾಮಾಂತರ ಪೊಲೀಸ್ ಠಾಣೆಗೆ, ಮಂಗಳೂರು ಕರಾವಳಿ ಕಾವಲು ಪಡೆಯಿಂದ ಅನಂತಪದ್ಮನಾಭ ಪೂರ್ವ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಗಣೇಶ್ ಕೆ.ಎಲ್.ಅವರನ್ನು ಆದೇಶ ಮಾರ್ಪಡಿಸಿ ಉಡುಪಿ ಕರಾವಳಿ ಕಾವಲು ಪಡೆಯ ಡಿವೈಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ.

DAKSHINA KANNADA HOME LATEST NEWS

“ವಕ್ಫ್‌ ಪ್ರತಿಭಟನೆ ವೇಳೆ ಪ್ರತಿಭಟನಕಾರರು ಪೊಲೀಸ್‌ ಜೀಪು ಬಳಸಿಲ್ಲ”

ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನ ಅಡ್ಯಾರ್‌ನಲ್ಲಿ ನಿನ್ನೆ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಯ ಕಾರನ್ನು ಬಳಸಿದ ಬಗ್ಗೆ ವಿಡಿಯೋ ಸಮೇತ  ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಕೇಳಿಬಂದಿತ್ತು. ಇದಕ್ಕೆ  ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಭಟನೆಯ ಸಂದರ್ಭ ಬಂದೋಬಸ್ತಿನಲ್ಲಿದ್ದ ಎಸಿಪಿ (ಸಂಚಾರ ಉಪ ವಿಭಾಗ)ಯವರು ಕಾರ್ರಕ್ರಮ ಮುಗಿದ ಬಳಿಕ ಮಂಗಳೂರು ಕಡೆಗೆ ತೆರಳುವ ಸಂಚಾರ […]